ನವದೆಹಲಿ : 2022 ರ 10 ತಂಡಗಳ, 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(IPL 2022) ಮಾರ್ಚ್ 26 ರಂದು ಮುಂಬೈನಲ್ಲಿ ಆರಂಭಗೊಂಡು ಮೇ 29 ರಂದು ಮುಕ್ತಾಯಗೊಳ್ಳಲಿದ್ದು, ಪಂದ್ಯಾವಳಿಯ ವೀಕ್ಷಣೆಗೆ ಸುಮಾರು ಶೇ.40 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ ಎಂದು ಐಪಿಎಲ್ ಚೇರ್ಮನ್ ಬ್ರಿಜೇಶ್ ಪಟೇಲ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಗುರುವಾರ ನಡೆದ ಆಡಳಿತ ಮಂಡಳಿ ಸಭೆಯ ನಂತರ ಮಾತನಾಡಿದ, ಐಪಿಎಲ್ ಚೇರ್ಮನ್ ಬ್ರಿಜೇಶ್ ಪಟೇಲ್(IPL chairman Brijesh Patel), ‘‘ಮಾರ್ಚ್ 26ರ ಶನಿವಾರದಂದು ಐಪಿಎಲ್(IPL 2022) ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ : Team India Video: ಕ್ಷಣಾರ್ಧದಲ್ಲಿ ಹೀರೋಯಿಂದ ವಿಲನ್ ಆದ ಟೀಂ ಇಂಡಿಯಾ ಆಟಗಾರ


ಎರಡು ಹೊಸ ತಂಡಗಳಾದ ಲಕ್ನೋ ಸೂಪರ್‌ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್(Lucknow Supergiants and Gujarat Titans) ಪಟ್ಟಿಗೆ ಸೇರ್ಪಡೆಗೊಂಡಿದ್ದು, ಮುಂಬೈನ ವಾಂಖೆಡೆ ಸ್ಟೇಡಿಯಂ ಮತ್ತು ಬ್ರಬೋರ್ನ್ ಸ್ಟೇಡಿಯಂ ಜೊತೆಗೆ ನವಿ ಮುಂಬೈನ ಡಿವೈ ಪಾಟೀಲ್ ಮೈದಾನ ಮತ್ತು ಪುಣೆಯ ಗಹುಂಜೆ ಸ್ಟೇಡಿಯಂನಲ್ಲಿ 74 ಪಂದ್ಯಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.


"ಮಹಾರಾಷ್ಟ್ರ ಸರ್ಕಾರವು ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ ಪ್ರೇಕ್ಷಕರಿಗೆ ಅವಕಾಶ ನೀಡಲಾಗುವುದು. ಹೀಗಾಗಿ ಇದು ಶೇ. 40 ರಷ್ಟು ಪ್ರೇಕ್ಷಕರಿಗೆ ಮಾತ್ರ ಸೀಮಿತಗೊಳಿಸಲಾಗಿದೆ.  ಕೋವಿಡ್-19(Covid-19) ಪರಿಸ್ಥಿತಿಯು ನಿಯಂತ್ರಣಕ್ಕೆ ಬಂದು, ಪ್ರಕರಣಗಳು ಕ್ಷೀಣಿಸಿದರೆ, ಇದನ್ನೂ ಸೀಸನ್  ಕೊನೆಯಲ್ಲಿ  ಪೂರ್ಣ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿ : India vs Sri Lanka, 1st T20I: ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಅಬ್ಬರಕ್ಕೆ ಬೆಚ್ಚಿದ ಶ್ರೀಲಂಕಾ


ಪ್ಲೇ-ಆಫ್‌ಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರವಾಗಿಲ್ಲ ಆದರೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ(Narendra Modi Stadium) ಫೈನಲ್‌ಗೆ ಆತಿಥ್ಯ ವಹಿಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ