IPL 2022, KKR vs DC: ಕೋಲ್ಕತ್ತಾ ನೈಟ್ ರೈಡರ್ಸ್ ಗೆ ದೆಹಲಿ ಕ್ಯಾಪಿಟಲ್ಸ್ ಸವಾಲು!

ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಈ ಹಿಂದೆ ದೆಹಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದರು. ಅವರ ನಾಯಕತ್ವದಲ್ಲಿ ದೆಹಲಿ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿತ್ತು.

Written by - Puttaraj K Alur | Last Updated : Apr 10, 2022, 01:34 PM IST
  • ಕೋಲ್ಕತ್ತಾ ನೈಟ್ ರೈಡರ್ಸ್ vs ದೆಹಲಿ ಕ್ಯಾಪಿಟಲ್ಸ್ ಸೆಣಸಾಟದಲ್ಲಿ ಯಾರಿಗೆ ಗೆಲುವು?
  • ಅಗ್ರಸ್ಥಾನ ಕಾಯ್ದುಕೊಳ್ಳಲು ಹೋರಾಟ ನಡೆಸಲಿರುವ ಶ್ರೇಯಸ್ ಅಯ್ಯರ್ ಪಡೆ
  • ಮತ್ತೊಂದು ಗೆಲುವಿನ ವಿಶ್ವಾಸಲ್ಲಿರುವ ರಿಷಭ್ ಪಂತ್ ನೇತೃತ್ವದ ದೆಹಲಿ ಕ್ಯಾಪಿಟಲ್ಸ್
IPL 2022, KKR vs DC: ಕೋಲ್ಕತ್ತಾ ನೈಟ್ ರೈಡರ್ಸ್ ಗೆ ದೆಹಲಿ ಕ್ಯಾಪಿಟಲ್ಸ್ ಸವಾಲು! title=
ಕೆಕೆಆರ್ ಮತ್ತು ದೆಹಲಿ ಮುಖಾಮುಖಿ

ನವದೆಹಲಿ: ಮುಂಬೈನ ಬ್ರಬೌರ್ನ್ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ 3.30ಕ್ಕೆ ನಡೆಯಲಿರುವ 19ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿವೆ. ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ. ಅದೇ ರೀತಿ ರಿಷಭ್ ಪಂತ್ ಪಡೆ ಕೂಡ ಗೆಲುವಿನ ಮೇಲೆ ಕಣ್ಣಿಟ್ಟಿದೆ.

ತಾನಾಡಿರುವ 4 ಪಂದ್ಯಗಳಲ್ಲಿ ಕೆಕೆಆರ್ 3 ಪಂದ್ಯಗಳನ್ನು ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ದೆಹಲಿ 3 ಪಂದ್ಯಗಳನ್ನು ಆಡಿದ್ದು, ಕೇವಲ 1 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಗೂ ಗೆಲುವು ಅನಿವಾರ್ಯವಾಗಿದ್ದು, ಭರ್ಜರಿ ಪೈಪೋಟಿ ನಡೆಯುವ ನಿರೀಕ್ಷೆ ಇದೆ. ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಎರಡೂ ತಂಡಗಳು ಬಲಿಷ್ಠವಾಗಿವೆ.

ಇದನ್ನೂ ಓದಿ: IPL 2022 : ಕೊಹ್ಲಿಗೆ ಏನಾಯಿತು? ಬಾಲ್ ಬ್ಯಾಟ್‌ಗೆ ತಗುಲಿದರು ನೀಡಲಿಲ್ಲ LBW! ಕಾರಣ ಇಲ್ಲಿದೆ

ಉಭಯ ತಂಡಗಳಲ್ಲಿಯೂ ಉತ್ತಮ ಬ್ಯಾಟ್ಸ್‍ಮನ್‍ಗಳು ಮತ್ತು ಬೌಲರ್‍ಗಳು ಇದ್ದಾರೆ. ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಈ ಹಿಂದೆ ದೆಹಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದರು. ಅವರ ನಾಯಕತ್ವದಲ್ಲಿ ದೆಹಲಿ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿತ್ತು. ಆದರೆ ಗಾಯದ ಸಮಸ್ಯೆಯಿಂದಾಗಿ ಅಯ್ಯರ್ ನಾಯಕತ್ವದ ಪಟ್ಟ ರಿಷಭ್ ಪಂತ್ ಪಾಲಾಯಿತು. ಹೀಗಾಗಿ ಅನಿವಾರ್ಯವಾಗಿ ದೆಹಲಿ ತಂಡಕ್ಕೆ ಗುಡ್ ಬೈ ಹೇಳಿದ ಅಯ್ಯರ್ ಕೆಕೆಆರ್ ತಂಡದ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸದ್ಯ ಉಭಯ ತಂಡಗಳ ನಾಯಕರು ಗೆಲುವಿಗಾಗಿ ತಮ್ಮದೇಯಾದ ರಣತಂತ್ರ ರೂಪಿಸಿ ಕಣಕ್ಕಿಳಿಯುತ್ತಿದ್ದಾರೆ.

ಅಯ್ಯರ್ ಮತ್ತು ಪಂತ್ ಇಬ್ಬರೂ ಉತ್ತಮ ನಾಯಕತ್ವ ಗುಣ ಹೊಂದಿದ್ದಾರೆ. ತಂಡವನ್ನು ಚೆನ್ನಾಗಿ ಮುನ್ನಡೆಸಿಕೊಂಡು ಹೋಗುವ ಕಲೆ ಇಬ್ಬರಿಗೂ ಗೊತ್ತಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಯಾರಿಗೆ ಗೆಲುವು ಸಿಗುತ್ತದೆ ಎಂಬದು ತೀವ್ರ ಕುತೂಹಲ ಮೂಡಿಸಿದೆ. ಅಗ್ರಸ್ಥಾನ ಕಾಯ್ದುಕೊಳ್ಳಲು ಕೆಕೆಆರ್‍ಗೆ ಈ ಗೆಲುವು ಮುಖ್ಯವಾದರೆ, ಪಾಯಿಂಟ್ಸ್ ಪಟ್ಟಿಯಲ್ಲಿ ಚೇತರಿಕೆ ಕಾಣಲು ದೆಹಲಿಗೆ ಗೆಲುವು ಅನಿವಾರ್ಯವಾಗಿದೆ.

ಇದನ್ನೂ ಓದಿ: CSK ನಿರಂತರ ಸೋಲಿಗೆ ಪ್ರಮುಖ ಕಾರಣಗಳು ಈ ನಾಲ್ಕು!

ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:

ಕೋಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಶಿವಂ ಮಾವಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ, ಮೊಹಮ್ಮದ್ ನಬಿ, ಪ್ಯಾಟ್ ಕಮಿನ್ಸ್, ಪ್ಯಾಟ್ ಜಮಿನ್ಸ್ , ಚಾಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ರಿಂಕು ಸಿಂಗ್, ಅನುಕುಲ್ ರಾಯ್, ಪ್ರಥಮ್ ಸಿಂಗ್, ಅಭಿಜೀತ್ ತೋಮರ್, ರಸಿಖ್ ಸಲಾಂ, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್

ಡೆಹಲಿ ಕ್ಯಾಪಿಟಲ್ಸ್ : ರಿಷಭ್ ಪಂತ್ (ನಾಯಕ & ವಿಕೆಟ್ ಕೀಪರ್), ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಕುಲದೀಪ್ ಯಾದವ್, ಕಮಲೇಶ್ ನಾಗರಕೋಟಿ, ಶ್ರೀಕರ್ ಭರತ್, ಸರ್ಫರಾಜ್ ಖಾನ್, ಲುಂಗಿ ಎನ್‍ಜಿಡಿ, ಮುಸ್ತಾಫಿಜುರ್ ರೆಹಮಾನ್, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್

ಐಪಿಎಲ್‌ ಪಂದ್ಯ: 19

ದೆಹಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್

ದಿನಾಂಕ: ಏಪ್ರಿಲ್ 10, ಭಾನುವಾರ

ಸ್ಥಳ: ಪುಣೆಯ ಬ್ರಬೌರ್ನ್ ಸ್ಟೇಡಿಯಂ

ಸಮಯ: ಮಧ್ಯಾಹ್ನ 3.30ಕ್ಕೆ

========================================================================

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News