IPL 2023: ಗುಜರಾತ್ ಟೈಟಾನ್ಸ್ ಗೆ ಸುಲಭ ತುತ್ತಾದ ರಾಜಸ್ಥಾನ ರಾಯಲ್ಸ್

ಇಲ್ಲಿನ ಸವಾಯಿ ಮ್ಯಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ೯ ವಿಕೆಟ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.

Written by - Zee Kannada News Desk | Last Updated : May 5, 2023, 11:42 PM IST
  • ನಾಯಕ ಸಂಜು ಸ್ಯಾಮ್ಸನ್ 30 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಆಟಗಾರನು ಕೂಡ 20 ರನ್ ಗಳ ಗಾಡಿಯನ್ನು ದಾಟುವಲ್ಲಿ ವಿಫಲರಾದರು.
  • ಇದರಿಂದಾಗಿ ಅಂತಿಮವಾಗಿ ರಾಜಸ್ಥಾನ್ ತಂಡವು 17.5 ಓವರ್ ಗಳಲ್ಲಿ ಕೇವಲ 118 ರನ್ ಗಳನ್ನು ಮಾತ್ರ ಗಳಿಸಿತು.
IPL 2023: ಗುಜರಾತ್ ಟೈಟಾನ್ಸ್ ಗೆ ಸುಲಭ ತುತ್ತಾದ ರಾಜಸ್ಥಾನ ರಾಯಲ್ಸ್  title=

ಜೈಪುರ: ಇಲ್ಲಿನ ಸವಾಯಿ ಮ್ಯಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ೯ ವಿಕೆಟ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.

ಇದನ್ನೂ ಓದಿ: ರಾಯಚೂರಲ್ಲಿ ಬೃಹತ್ ರೋಡ್ ಶೋ ಮೂಲಕ ಜೆ.ಪಿ.ನಡ್ಡಾ ಮತಬೇಟೆ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನ ರಾಯಲ್ಸ್ ತಂಡವು ತಂಡದ ಮೊತ್ತ 11 ಆಗಿದ್ದಾಗ ಜೋಸ್ ಬಟ್ಲರ್ ವಿಕೆಟ್ ಕಳೆದುಕೊಳ್ಳುವ ಮೂಲಕ ಆಘಾತ ಎದುರಿಸಿತು.ಇದಾದ ನಂತರ ಅದು ಚೇತರಿಸಿಕೊಳ್ಳಲೇ ಇಲ್ಲ. ತಂಡದ ನಾಯಕ ಸಂಜು ಸ್ಯಾಮ್ಸನ್ 30 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಆಟಗಾರನು ಕೂಡ 20 ರನ್ ಗಳ ಗಾಡಿಯನ್ನು ದಾಟುವಲ್ಲಿ ವಿಫಲರಾದರು. ಇದರಿಂದಾಗಿ ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ ತಂಡವು 17.5 ಓವರ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು ಕೇವಲ 118 ರನ್ ಗಳನ್ನು ಮಾತ್ರ ಗಳಿಸಿತು.

ಗುಜರಾತ್ ಟೈಟಾನ್ಸ್ ತಂಡದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ರಶಿದ್ ಖಾನ್ ಮೂರು ವಿಕೆಟ್ ಹಾಗೂ ನೂರ್ ಅಹಮ್ಮದ್ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ರಾಜಸ್ಥಾನ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.

ಇದನ್ನೂ ಓದಿ: ನೀಟ್‌ ಪರೀಕ್ಷೆ ಹಿನ್ನೆಲೆ ಪ್ರಧಾನಿ ಮೋದಿ ರೋಡ್‌ ಶೋ ರೂಟ್‌ ಚೇಂಜ್‌

ರಾಜಸ್ಥಾನ ರಾಯಲ್ಸ್ ತಂಡವು ನೀಡಿದ 119 ರನ್ ಗಳ ಸುಲಭ ಗುರಿಯನ್ನು ಬೆನ್ನತ್ತಿದ ಗುಜರಾತ್ ತಂಡವು ಕೇವಲ ಒಂದು ವಿಕೆಟ್ ಕಳೆದುಕೊಂಡು 13.5 ಓವರ್ ಗಳಲ್ಲಿ 119 ರನ್ ಗಳನ್ನು ಗಳಿಸಿತು.ರಾಜಸ್ತಾನದ ಪರವಾಗಿ ವ್ರುದ್ದಿಮಾನ್ ಸಹಾ 41,ಶುಭ್ಮನ್ ಗಿಲ್ 36, ಹಾಗೂ ಹಾರ್ದಿಕ್ ಪಾಂಡ್ಯ 39 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News