ಜೈಪುರ: ಇಲ್ಲಿನ ಸವಾಯಿ ಮ್ಯಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ೯ ವಿಕೆಟ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಯಚೂರಲ್ಲಿ ಬೃಹತ್ ರೋಡ್ ಶೋ ಮೂಲಕ ಜೆ.ಪಿ.ನಡ್ಡಾ ಮತಬೇಟೆ


ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನ ರಾಯಲ್ಸ್ ತಂಡವು ತಂಡದ ಮೊತ್ತ 11 ಆಗಿದ್ದಾಗ ಜೋಸ್ ಬಟ್ಲರ್ ವಿಕೆಟ್ ಕಳೆದುಕೊಳ್ಳುವ ಮೂಲಕ ಆಘಾತ ಎದುರಿಸಿತು.ಇದಾದ ನಂತರ ಅದು ಚೇತರಿಸಿಕೊಳ್ಳಲೇ ಇಲ್ಲ. ತಂಡದ ನಾಯಕ ಸಂಜು ಸ್ಯಾಮ್ಸನ್ 30 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಆಟಗಾರನು ಕೂಡ 20 ರನ್ ಗಳ ಗಾಡಿಯನ್ನು ದಾಟುವಲ್ಲಿ ವಿಫಲರಾದರು. ಇದರಿಂದಾಗಿ ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ ತಂಡವು 17.5 ಓವರ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು ಕೇವಲ 118 ರನ್ ಗಳನ್ನು ಮಾತ್ರ ಗಳಿಸಿತು.


ನೀಟ್‌ ಪರೀಕ್ಷೆ ಹಿನ್ನೆಲೆ ಪ್ರಧಾನಿ ಮೋದಿ ರೋಡ್‌ ಶೋ ರೂಟ್‌ ಚೇಂಜ್‌


ರಾಜಸ್ಥಾನ ರಾಯಲ್ಸ್ ತಂಡವು ನೀಡಿದ 119 ರನ್ ಗಳ ಸುಲಭ ಗುರಿಯನ್ನು ಬೆನ್ನತ್ತಿದ ಗುಜರಾತ್ ತಂಡವು ಕೇವಲ ಒಂದು ವಿಕೆಟ್ ಕಳೆದುಕೊಂಡು 13.5 ಓವರ್ ಗಳಲ್ಲಿ 119 ರನ್ ಗಳನ್ನು ಗಳಿಸಿತು.ರಾಜಸ್ತಾನದ ಪರವಾಗಿ ವ್ರುದ್ದಿಮಾನ್ ಸಹಾ 41,ಶುಭ್ಮನ್ ಗಿಲ್ 36, ಹಾಗೂ ಹಾರ್ದಿಕ್ ಪಾಂಡ್ಯ 39 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.