ಡೆಲ್ಲಿ ಕ್ಯಾಪಿಟಲ್ಸ್ ಇಶಾಂತ್ ಶರ್ಮಾ ಯಾರ್ಕರ್‌ಗೆ ಕ್ಲೀನ್ ಬೌಲ್ಡ್ ಆದ ಕೆಕೆಆರ್ ಆಂಡ್ರೆ ರಸೆಲ್: ವಿಡಿಯೋ ವೈರಲ್
IPL 2024 KKR vs DC: ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆದ ರೋಮಾಂಚಕಪಂದ್ಯದಲ್ಲಿ ಡಿಸಿ ಬೌಲರ್ ಇಶಾಂತ್ ಶರ್ಮಾ ಅವರ ಅದ್ಭುತ ಯಾರ್ಕರ್‌ಗೆ ಕೆಕೆಆರ್ ಬ್ಯಾಟ್ಸ್‌ಮನ್ ಆಂಡ್ರೆ ರಸೆಲ್ ಕ್ಲೀನ್ ಬೌಲ್ಡ್ ಆದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ಸಖತ್ ವೈರಲ್ ಆಗುತ್ತಿದೆ.
IPL 2024 KKR vs DC: ನಿನ್ನೆ (03 ಏಪ್ರಿಲ್, ಬುಧವಾರ) ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೆಕೆಆರ್ ಬ್ಯಾಟ್ಸ್‌ಮನ್‌ಗಳು ಅದ್ಭುತ ಆಟ ಪ್ರದರ್ಶಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 272 ರನ್ ಗಳಿಸಿದ್ದು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಎರಡನೇ ಅತ್ಯಧಿಕ ಸ್ಕೋರ್ ಕಲೆ ಹಾಕಿದರು. ಏತನ್ಮಧ್ಯೆ, ಕೆಕೆಆರ್ ಅಪಾಯಕಾರಿ ಬ್ಯಾಟ್ಸ್‌ಮನ್ ಆಂಡ್ರೆ ರಸೆಲ್ ಇಶಾಂತ್ ಶರ್ಮಾ ಅದ್ಭುತ ಯಾರ್ಕರ್‌ಗೆ ಕ್ಲೀನ್ ಬೌಲ್ಡ್ ಆದ ದೃಶ್ಯ ಎಲ್ಲರ ಗಮನ ಸೆಳೆಯುತ್ತಿದೆ.
ಹೌದು, ಬುಧವಾರದಂದು ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ನಡುವೆ ನಡೆದ ರೋಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇಶಾಂತ್ ಶರ್ಮಾ ಅವರು ತಮ್ಮ ಮಾಂತ್ರಿಕ ಚೆಂಡಿನ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್‌ನ ಅಪಾಯಕಾರಿ ಬ್ಯಾಟ್ಸ್‌ಮನ್ ಆಂಡ್ರೆ ರಸೆಲ್ ಅವರನ್ನು ಕಟ್ಟಿಹಾಕಿದ ದೃಶ್ಯ ಕ್ರಿಕೆಟ್ ಅಭಿಮಾನಿಗಳ ಕಣ್ಮನ ಸೆಳೆದಿದೆ.
ಇದನ್ನೂ ಓದಿ- BAN vs SL: ಆಹಾ! ಬಾಂಗ್ಲಾದೇಶ ತಂಡದ 'ಲಗಾನ್' ಫೀಲ್ಡಿಂಗ್, ಬೌಂಡರಿ ತಡೆಯಲು 5 ಆಟಗಾರರ ಹರಸಾಹಸ Watch Video
ವಾಸ್ತವಾವಾಗಿ, ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಂಡದಲ್ಲಿ ಅಪಾಯಕಾರಿ ಬ್ಯಾಟ್ಸ್‌ಮನ್ ಎಂತಲೇ ಪರಿಗಣಿಸಿರುವ ಆಂಡ್ರೆ ರಸೆಲ್ (Andre Russell) ಅತ್ಯುತ್ತಮ ಫಾರ್ಮ್‌ನಲ್ಲಿರುವಾಗ ಅವರನ್ನು ತಡೆಯುವುದು ಅಷ್ಟು ಸುಲಭದ ಮಾತಲ್ಲ. ಆದರೆ, ಇಶಾಂತ್ ಶರ್ಮಾ (Ishant Sharma) ತಮ್ಮ ಆಕರ್ಷಕ ಯಾರ್ಕರ್ ಮೂಲಕ ಆಂಡ್ರೆ ರಸೆಲ್ ಅವರನ್ನು ಕ್ಲೀನ್ ಬೋಲ್ಡ್ ಮಾಡಿದ್ದನ್ನು ಮಾತ್ರ ಎಂದಿಗೂ ಮರೆಯಲು ಸಾಧ್ಯವಾಗುವುದಿಲ್ಲ.
ಇದನ್ನೂ ಓದಿ- ಐಪಿಎಲ್ ನಡುವೆ T20 ತಂಡ ಪ್ರಕಟ: ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಮರಳಿದ ಸ್ಟಾರ್ ಆಟಗಾರ
ಆಂಡ್ರೆ ರಸೆಲ್ 215.78 ಸ್ಟ್ರೈಕ್ ರೇಟ್‌ನೊಂದಿಗೆ ನಾಲ್ಕು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಬಾರಿಸಿದ್ದರು. ಕೊನೆಯ ಓವರ್‌ನಲ್ಲಿ ಅವರು ಹೆಚ್ಚು ಸ್ಕೋರ್ ಮಾಡುವ ಅವಕಾಶ ಇತ್ತಾದರೂ ಅದು ಸಾಧ್ಯವಾಗಲಿಲ್ಲ. ಈ ಓವರ್‌ನ ಮೊದಲ ಎಸೆತದಲ್ಲಿ ಇಶಾಂತ್ ಶರ್ಮಾ ಅದ್ಭುತ ಯಾರ್ಕರ್ ಅನ್ನು ಬೌಲ್ ಮಾಡಿದರು. ಆಂಡ್ರೆ ರಸೆಲ್ ಇಶಾಂತ್ ಶರ್ಮಾರ ಯಾರ್ಕರ್ ಅನ್ನು ಸರಿಯಾಗಿ ಆಡಲು ಸಾಧ್ಯವಾಗದೆ ನೆಲಕ್ಕುರುಳಿದರು. ಈ ಸಂದರ್ಭದಲ್ಲಿ ಸ್ವತಃ ರಸೆಲ್ ಅವರೇ ಬ್ಯಾಟ್‌ನಿಂದ ಚಪ್ಪಾಳೆ ತಟ್ಟುವ ಮೂಲಕ ಯಾರ್ಕರ್ ಚೆಂಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.