IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಗೆ 6 ರನ್ ಗಳ ರೋಚಕ ಗೆಲುವು 

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024 ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು ಆರು ರನ್ ಗಳ ರೋಚಕ ಗೆಲುವು ಸಾಧಿಸಿದೆ.

Written by - Manjunath N | Last Updated : Mar 25, 2024, 12:16 AM IST
  • ಮುಂಬೈ ಇಂಡಿಯನ್ಸ್ ತಂಡವು 9 ವಿಕೆಟ್ ಕಳೆದುಕೊಂಡು ಅಂತಿಮವಾಗಿ 162 ರನ್ ಗಳಿಸಲಷ್ಟೇ ಸಾಧ್ಯವಾಯಿತು
  • ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ 43 ಹಾಗೂ ಡೆವಾಲ್ಡ್ ಬ್ರೆವಿಸ್ 46 ರನ್ ಗಳಿಸಿದರು
  • ಆದರೆ ವಿಜಯಲಕ್ಷಿ ಕೊನೆಗೆ ಗುಜರಾತ್ ಟೈಟಾನ್ಸ್ ತಂಡದ ಕಡೆಗೆ ವಾಲಿದಳು
 IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಗೆ 6 ರನ್ ಗಳ ರೋಚಕ ಗೆಲುವು  title=

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024 ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು ಆರು ರನ್ ಗಳ ರೋಚಕ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮುಂಬೈ ಇಂಡಿಯನ್ಸ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.ಗುಜರಾತ್ ಟೈಟಾನ್ಸ್ ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಸಾಯಿ ಸುದರ್ಶನ 39 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಒಂದು ಸಿಕ್ಸರ್ ಗಳೊಂದಿಗೆ 45 ರನ್ ಗಳಿಸಿದರು.ಇನ್ನೊಂದೆಡೆಗೆ ಶುಬ್ಮನ್ ಗಿಲ್ 22 ಎಸೆತಗಳಲ್ಲಿ 31 ರನ್ ಗಳಿಸಿದರು.ಅಂತಿಮವಾಗಿ ಗುಜರಾತ್ ಟೈಟಾನ್ಸ್ ತಂಡವು ಆರು ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು.

ಗುಜರಾತ್ ಟೈಟಾನ್ಸ್ ತಂಡವು ನೀಡಿದ 169 ರನ್ ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 9 ವಿಕೆಟ್ ಕಳೆದುಕೊಂಡು ಅಂತಿಮವಾಗಿ 162 ರನ್ ಗಳಿಸಲಷ್ಟೇ ಸಾಧ್ಯವಾಯಿತು.ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ 43 ಹಾಗೂ ಡೆವಾಲ್ಡ್ ಬ್ರೆವಿಸ್ 46 ರನ್ ಗಳಿಸಿದರು. ಆದರೆ ವಿಜಯಲಕ್ಷಿ ಕೊನೆಗೆ ಗುಜರಾತ್ ಟೈಟಾನ್ಸ್ ತಂಡದ ಕಡೆಗೆ ವಾಲಿದಳು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

 

 

Trending News