IPL 2024: ವಿದೇಶಕ್ಕೆ ಐಪಿಎಲ್‌ ಪಂದ್ಯಾವಳಿ ಸ್ಥಳಾಂತರಿಸುವ ಬಗ್ಗೆ ಜಯ್ ಶಾ ಮಹತ್ವದ ಹೇಳಿಕೆ!

Indian Premier League 2024: ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ಇರುವುದರಿಂದ ಟಿ-20 ಲೀಗ್ ಅನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (UAE)ಗೆ ಸ್ಥಳಾಂತರಿಸಬಹುದು ಎಂಬ ವರದಿಗಳ ಹಿನ್ನೆಲೆ ಜಯ್‌ ಶಾ ಸ್ಪಷ್ಟನೆ ನೀಡಿದ್ದಾರೆ.   

Written by - Puttaraj K Alur | Last Updated : Mar 16, 2024, 10:44 PM IST
  • ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯನ್ನು ವಿದೇಶಕ್ಕೆ ಸ್ಥಳಾಂತರಿಸುವುದಿಲ್ಲ
  • ಐಪಿಎಲ್‌ ಟೂರ್ನಿ ಬಗ್ಗೆ ಸ್ಪಷ್ಟನೆ ನೀಡಿದ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ
  • ಮಾರ್ಚ್‌ 22ರಿಂದ ಐಪಿಎಲ್ ಟೂರ್ನಿ ಭಾರತದಲ್ಲಿಯೇ ನಡೆಯಲಿದೆ ಎಂದ ಶಾ
IPL 2024: ವಿದೇಶಕ್ಕೆ ಐಪಿಎಲ್‌ ಪಂದ್ಯಾವಳಿ ಸ್ಥಳಾಂತರಿಸುವ ಬಗ್ಗೆ ಜಯ್ ಶಾ ಮಹತ್ವದ ಹೇಳಿಕೆ! title=
Indian Premier League 2024

Indian Premier League 2024: ಇಂಡಿಯನ್ ಪ್ರೀಮಿಯರ್ ಲೀಗ್(IPL) ಪಂದ್ಯಾವಳಿಯನ್ನು ವಿದೇಶಕ್ಕೆ ಸ್ಥಳಾಂತರಿಸುವುದಿಲ್ಲವೆಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿ ಜಯ್ ಶಾ ಸ್ಪಷ್ಟಪಡಿಸಿದ್ದಾರೆ. 

ಭಾರತದಲ್ಲಿ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 19ರಿಂದ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: IPL 2024: 'ಇಲ್ಲಿ ಯಾರೂ ಸಿನಿಯರ್... ಜೂನಿಯರ್ ಇಲ್ಲ...; ಹೀಗಂತ ಗೌತಮ್ ಗಂಭೀರವಾಗಿ ಹೇಳಿದ್ಯಾರಿಗೆ!

ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ಇರುವುದರಿಂದ ಟಿ-20 ಲೀಗ್ ಅನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (UAE)ಗೆ ಸ್ಥಳಾಂತರಿಸಬಹುದು ಎಂಬ ವರದಿಗಳ ಹಿನ್ನೆಲೆ ಜಯ್‌ ಶಾ ಸ್ಪಷ್ಟನೆ ನೀಡಿದ್ದಾರೆ.   

ಶನಿವಾರ ಸಾರ್ವತ್ರಿಕ ಚುನಾವಣೆಯ ದಿನಾಂಕ ಘೋಷಣೆಯಾದ ನಂತರ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾತನಾಡಿ, ಐಪಿಎಲ್ ಟೂರ್ನಿಯನ್ನು ವಿದೇಶದಕ್ಕೆ ಸ್ಥಳಾಂತರಿಸುವುದಿಲ್ಲವೆಂದು ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಈ 11 ಆಟಗಾರರು ಕಣಕ್ಕಿಳಿದರೆ RCB ಹಣೆಬರಹ 100% ಬದಲಾಗುತ್ತೆ..! ʼಈ ಸಲ ಕಪ್‌ ನಮ್ದೆʼ

ʼಇಲ್ಲ, ಯಾವುದೇ ಕಾರಣಕ್ಕೂ ಐಪಿಎಲ್‌ ಟೂರ್ನಿಯನ್ನು ವಿದೇಶಕ್ಕೆ ಸ್ಥಳಾಂತರಿಸಲಾಗುವುದಿಲ್ಲ" ಅಂತಾ ಜಯ್‌ ಶಾ ಹೇಳಿದ್ದಾರೆ. ಮಾರ್ಚ್ 22ರಿಂದ ಐಪಿಎಲ್ ಟೂರ್ನಿ ಆರಂಭವಾಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
 

Trending News