IPL 2024: ಬೆಂಗಳೂರಿನಲ್ಲಿ ರನ್ ಗಳ ಸುರಿಮಳೆ, ವಿಶ್ವದಾಖಲೆಗೆ ಸಾಕ್ಷಿಯಾದ ಐಪಿಎಲ್ ಪಂದ್ಯ..!

 IPL 2024: 2023 ರಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ವೇಳೆ ಎರಡೂ ತಂಡಗಳು ಒಟ್ಟಾಗಿ 46 ಬೌಂಡರಿ ಮತ್ತು 35 ಸಿಕ್ಸರ್‌ಗಳನ್ನು ಸಿಡಿಸಿದ್ದವು. ಕಳೆದ ವರ್ಷವೇ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಮುಲ್ತಾನ್ ಸುಲ್ತಾನ್ಸ್ ಮತ್ತು ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡ 78 ಬೌಂಡರಿಗಳನ್ನು ಬಾರಿಸಿತ್ತು. ಆ ಪಂದ್ಯದಲ್ಲಿ 45 ಬೌಂಡರಿ ಹಾಗೂ 33 ಸಿಕ್ಸರ್‌ಗಳು ದಾಖಲಾಗಿದ್ದವು.

Written by - Manjunath N | Last Updated : Apr 16, 2024, 03:10 AM IST
  • ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.
  • ಇದೆ ವೇಳೆ ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡವು 20 ಓವರ್‌ಗಳಲ್ಲಿ 3 ವಿಕೆಟ್‌ಗೆ 287 ರನ್ ಗಳಿಸಿತು.
  • ಇದಕ್ಕೆ ಉತ್ತರವಾಗಿ ಆರ್‌ಸಿಬಿ ತಂಡ ಕೂಡ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 262 ರನ್ ಗಳಿಸಿತು.
IPL 2024: ಬೆಂಗಳೂರಿನಲ್ಲಿ ರನ್ ಗಳ ಸುರಿಮಳೆ, ವಿಶ್ವದಾಖಲೆಗೆ ಸಾಕ್ಷಿಯಾದ ಐಪಿಎಲ್ ಪಂದ್ಯ..! title=

 IPL 2024: ಬೆಂಗಳೂರು: ಐಪಿಎಲ್ 2024 ರ 30 ನೇ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡವು ಹೈದರಾಬಾದ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು  25 ರನ್‌ಗಳಿಂದ ಸೋಲಿಸಿತು.ಈ ಪಂದ್ಯದಲ್ಲಿ ಒಟ್ಟಾಗಿ 549 ರನ್‌ಗಳು ದಾಖಲಾಗಿದ್ದವು.ಅಷ್ಟೇ ಅಲ್ಲದೆ ಈ ಪಂದ್ಯವು ದಾಖಲೆಯ ಸಿಕ್ಸರ್ ಹಾಗೂ ಬೌಂಡರಿಗಳಿಗೆ ಸಾಕ್ಷಿಯಾಯಿತು.

ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಮೋದಿ ಗ್ಯಾರಂಟಿ ಶೂನ್ಯ : ಸಚಿವ ದಿನೇಶ್ ಗುಂಡೂರಾವ್

ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಇದೆ ವೇಳೆ ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡವು  20 ಓವರ್‌ಗಳಲ್ಲಿ 3 ವಿಕೆಟ್‌ಗೆ 287 ರನ್ ಗಳಿಸಿತು.ಇದಕ್ಕೆ ಉತ್ತರವಾಗಿ ಆರ್‌ಸಿಬಿ ತಂಡ ಕೂಡ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 262 ರನ್ ಗಳಿಸಿತು. ಈ ಪಂದ್ಯದಲ್ಲಿ ಒಟ್ಟಾರೆಯಾಗಿ 43 ಬೌಂಡರಿ ಹಾಗೂ 38 ಸಿಕ್ಸರ್‌ಗಳು ದಾಖಲಾಗಿದ್ದವು.ಆ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಎರಡನೇ ಬಾರಿಗೆ ಪಂದ್ಯವೊಂದರಲ್ಲಿ ಇಷ್ಟು ಬೌಂಡರಿಗಳು ದಾಖಲಾಗಿರುವುದಲ್ಲದೆ ಸನ್‌ರೈಸರ್ಸ್ ಮತ್ತು ಆರ್‌ಸಿಬಿ ಪಂದ್ಯವು 2023 ರಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ಸಂದರ್ಭದಲ್ಲಿ ನಿರ್ಮಾಣವಾಗಿದ್ದ 81 ಬೌಂಡರಿ ಸಿಕ್ಸರ್ ಗಳ ದಾಖಲೆಯನ್ನು ಸರಿಗಟ್ಟಿದೆ.

ಇದನ್ನೂ ಓದಿ: ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್‌ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!

2023 ರಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ವೇಳೆ ಎರಡೂ ತಂಡಗಳು ಒಟ್ಟಾಗಿ 46 ಬೌಂಡರಿ ಮತ್ತು 35 ಸಿಕ್ಸರ್‌ಗಳನ್ನು ಸಿಡಿಸಿದ್ದವು. ಕಳೆದ ವರ್ಷವೇ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಮುಲ್ತಾನ್ ಸುಲ್ತಾನ್ಸ್ ಮತ್ತು ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡ 78 ಬೌಂಡರಿಗಳನ್ನು ಬಾರಿಸಿತ್ತು. ಆ ಪಂದ್ಯದಲ್ಲಿ 45 ಬೌಂಡರಿ ಹಾಗೂ 33 ಸಿಕ್ಸರ್‌ಗಳು ದಾಖಲಾಗಿದ್ದವು.

ಮತ್ತೊಂದು ವಿಶ್ವ ದಾಖಲೆ

ಸನ್‌ರೈಸರ್ಸ್ ಮತ್ತು ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ಈ ಪಂದ್ಯದಲ್ಲಿ 38 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಎರಡೂ ತಂಡಗಳು ಒಟ್ಟಾಗಿ ಯಾವುದೇ T20 ಕ್ರಿಕೆಟ್ ಪಂದ್ಯದಲ್ಲಿ ಗರಿಷ್ಠ ಸಂಖ್ಯೆಯ ಸಿಕ್ಸರ್‌ಗಳನ್ನು ಸಮಗೊಳಿಸಿದವು. ಐಪಿಎಲ್‌ನ ಇದೇ ಸೀಸನ್‌ನಲ್ಲಿ ಸನ್‌ರೈಸರ್ಸ್ ಮತ್ತು ಮುಂಬೈ ಇಂಡಿಯನ್ಸ್ ಒಟ್ಟಿಗೆ 38 ಸಿಕ್ಸರ್‌ಗಳನ್ನು ಬಾರಿಸಿದ್ದವು. 2018ರಲ್ಲಿ ಬಾಲ್ಖ್ ಲೆಜೆಂಡ್ಸ್ ಮತ್ತು ಕಾಬೂಲ್ ಜವಾನ್ಸ್ ನಡುವೆ ನಡೆದ ಟಿ20 ಪಂದ್ಯದಲ್ಲಿ 37 ಸಿಕ್ಸರ್‌ಗಳು ದಾಖಲಾಗಿದ್ದವು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News