ಬೆಂಗಳೂರು: ಇಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಮುಖಾಮುಖಿಯಾಗುತ್ತಿವೆ. ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿರುವ RCB ತಂಡವು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಸತತ ಸೋಲುಗಳಿಂದ ಅಭಿಮಾನಿಗಳಿಗೆ ದೊಡ್ಡ ನಿರಾಸೆ ಮೂಡಿಸಿರುವ ಫಾಫ್ ಡು ಪ್ಲೆಸಿಸ್ ಪಡೆ ಇಂದು ಹೈದರಾಬಾದ್‌ ವಿರುದ್ಧ ಯಾವ ರೀತಿ ಪ್ರದರ್ಶನ ನೀಡಲಿದೆ ಅನ್ನೋದರ ಬಗ್ಗೆ ತೀವ್ರ ಕುತೂಹಲ ಮೂಡಿದಿದೆ.


COMMERCIAL BREAK
SCROLL TO CONTINUE READING

ಪ್ಯಾಟ್‌ ಕಮಿನ್ಸ್‌ ನೇತೃತ್ವದ ಹೈದರಾಬಾದ್‌ ಈಗಾಗಲೇ ಆಡಿರುವ ಐದು ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಉತ್ತಮ ಪ್ರದರ್ಶನ ತೋರುತ್ತಿರುವ ಹೈದರಾಬಾದ್‌ ಅಂಕಪಟ್ಟಿಯಲ್ಲಿ ಮೇಲಿನ ಸ್ಥಾನಕ್ಕೆ ಹೋಗಬೇಕಾದ್ರೆ ಈ ಪಂದ್ಯದಲ್ಲಿನ ಗೆಲುವು ಅನಿವಾರ್ಯ. ಹೀಗಾಗಿ RCB ತಂಡವನ್ನು ಮಣಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಇನ್ನೂ ತವರು ನೆಲದಲ್ಲಿಯೇ ಹೀನಾಯವಾಗಿ ಸೋಲು ಕಾಣುತ್ತಿರುವ RCBಗೂ ಇದು ಒಂದು ರೀತಿ ʼಮಾಡು ಇಲ್ಲವೇ ಮಡಿʼ ಪಂದ್ಯ.


ಇದನ್ನೂ ಓದಿ: IPL 2024: ಧೋನಿ ಎಂದರೆ ಬರಿ ಆಟವಲ್ಲ ಕಣಾ..ಅದೊಂದು ಹೃದ್ಯ ಸ್ಪರ್ಶ ಕಾವ್ಯ...!


ಆಡಿರುವ 6 ಪಂದ್ಯಗಳಲ್ಲಿ ಕೇವಲ 1 ಗೆಲುವು ಸಾಧಿಸಿರುವ RCB ಇನ್ನುಳಿದ 5 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದು RCBಯ ಲಕ್ಷಾಂತರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ತಂಡ ಬಲಿಷ್ಠವಾಗಿದ್ದರೂ ಬೌಲಿಂಗ್‌ ವಿಭಾಗದಲ್ಲಿ ಮತ್ತೆ ಮತ್ತೆ ಎಡವುತ್ತಿದೆ. ಹೆಚ್ಚು ರನ್‌ ಬಿಟ್ಟು ಕೊಡುತ್ತಿರುವ ಬೌಲರ್‌ಗಳು RCBಯ ಸೋಲಿಗೆ ಕಾರಣವಾಗುತ್ತಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಹಿಂದಿನ ತಪ್ಪುಗಳನ್ನು ತಿದ್ದಿಕೊಂಡು ಕಣಕ್ಕಿಳಿದರೆ ತಂಡಕ್ಕೆ ಗೆಲುವು ಸಿಕ್ಕೇ ಸಿಗುತ್ತದೆ. ಹೀಗಾಗಿ ಇಂದಿನ ಪಂದ್ಯ ಉಭಯ ತಂಡಗಳಿಗೂ ತುಂಬಾ ಮಹತ್ವದ್ದಾಗಿದ್ದು, ಯಾರಿಗೆ ವಿಜಯಮಾಲೆ ದೊರೆಯುತ್ತದೆ ಅನ್ನೋದನ್ನು ಕಾದು ನೋಡಬೇಕಿದೆ. 


ಎರಡೂ ತಂಡಗಳ ಸ್ಕ್ವಾಡ್‌ ಈ ರೀತಿ ಇದೆ:


ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ವಿರಾಟ್ ಕೊಹ್ಲಿ, ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮೊರೊರ್, ರೀಸ್ ಟೋಪ್ಲೆ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸೌರವ್ ಚೌಹಾಣ್, ಸುಯಶ್ ಪ್ರಭುದೇಸಾಯಿ, ಸ್ವಪ್ನಿಲ್ ಸಿಂಗ್, ರಾಜನ್ ಕುಮಾರ್, ಕರ್ಣ್ ಶರ್ಮಾ, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಮಯಾಂಕ್ ಡಾಗರ್, ಅಲ್ಜಾರಿ ಜೋಸೆಫ್, ಕ್ಯಾಮೆರಾನ್ ಗ್ರೀನ್, ಅನುಜ್ ರಾವತ್, ಮನೋಜ್ ಭಾಂಡಗೆ, ಯಶ್ ದಯಾಳ್, ಹಿಮಾಂಶು ಶರ್ಮಾ


ಸನ್‌ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮ್ಮಿನ್ಸ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ.ನಟರಾಜನ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ಮಯಾಂಕ್ ಮಾರ್ಕಂಡೆ, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಅನ್ಮೋಲ್ಪ್ರೀತ್ ಸಿಂಗ್, ಉಪೇಂದ್ರ ಯಾದವ್, ಜಾತವೇಧ್ ಸುಬ್ರಹ್ಮಣ್ಯನ್, ಸನ್ವಿರ್ ಸಿಂಗ್, ವಿಜಯಕಾಂತ್ ವ್ಯಾಸ್ಕಂತ್, ಫಜಲ್ಹಕ್ ಫಾರೂಕಿ, ಮಾರ್ಕೊ ಜಾನ್ಸೆನ್, ಆಕಾಶ್ ಮಹಾರಾಜ್ ಸಿಂಗ್, ಮಯಾಂಕ್ ಅಗರ್ವಾಲ್ 


ಇದನ್ನೂ ಓದಿ: Virat Kohli: ಜೈಪುರದಲ್ಲಿ ಅನಾವರಣಗೊಳ್ಳಲಿದೆ ʼಕಿಂಗ್‌ ಕೊಹ್ಲಿʼ ಪ್ರತಿಮೆ! ಫಸ್ಟ್ ಲುಕ್ ಹೇಗಿದೆ ನೀವೇ ನೋಡಿ!!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.