Indian Premier League 2024: ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಷ್ಟೊಂದು ಉತ್ತಮ ಪ್ರದರ್ಶನ ತೋರದೆ ಹೋದರೂ, ತಂಡದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಬ್ಯಾಟ್ ಮಾತ್ರ ಸಕ್ಕತ್ ಮಾತನಾಡುತ್ತಿದೆ. ಇದಲ್ಲದೆ, ಕೊಹ್ಲಿ ಯುವ ಆಟಗಾರರಿಗೆ ಸಹಾಯ ಮಾಡುತ್ತಲೇ ಇದ್ದಾರೆ, ಆದರೆ, ರಿಂಕು ಸಿಂಗ್ ನಂತಹ ಯುವ ಆಟಗಾರ ಮಾತ್ರ ದೊಡ್ಡ ತಪ್ಪು ಮಾಡಿದ್ದಾರೆ ಮತ್ತು ವಿರಾಟ್ ಮುಂದೆ ಬಂದು ಆಣೆ ಮಾಡುತ್ತಾ ತಪ್ಪನ್ನು ಒಪ್ಪಿಕೊಳ್ಳುಟ್ಟಿದ್ದಾರೆ. ಈ ಕುರಿತಾದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬಹಳ ವೇಗವಾಗಿ ವೈರಲ್ ಆಗುತ್ತಿದೆ.
ಸದ್ಯ ವಿರಾಟ್ ಬಳಿ ಇದೆ ಆರೆಂಜ್ ಕ್ಯಾಪ್
ಹೌದು, ಒಂದೆಡೆ ಆರ್‌ಸಿಬಿ ತಂಡ ಸತತ ಸೋಲು ಕಾಣುತ್ತಿದ್ದರೆ, ಮತ್ತೊಂದೆಡೆ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ವಿರಾಟ್ ಇದುವರೆಗೆ ಟೂರ್ನಿಯಲ್ಲಿ 361 ರನ್ ಗಳಿಸಿದ್ದಾರೆ, ಆದ್ದರಿಂದ ಅವರ ತಲೆಯ ಮೇಲೆ ಆರೆಂಜ್ ಕ್ಯಾಪ್ ಇದೆ ಮತ್ತು ಅವರು ರಾಜಸ್ಥಾನ ವಿರುದ್ಧ ಶತಕ ಗಳಿಸಿದ್ದಾರೆ. ಅತಿ ಹೆಚ್ಚು ರನ್ ಗಳಿಸಿದವರ ವಿಷಯದಲ್ಲಿ 324 ರನ್ ಗಳಿಸಿರುವ SRH ನ ಟ್ರಾವಿಸ್ ಹೆಡ್ ಎರಡನೇ ಸ್ಥಾನದಲ್ಲಿದ್ದಾರೆ ಮತ್ತು ಮೂರನೇ ಸ್ಥಾನದಲ್ಲಿ ರಾಜಸ್ಥಾನದ ಬ್ಯಾಟ್ಸ್‌ಮನ್ ರಿಯಾನ್ ಪರಾಗ್ 318 ರನ್ ಗಳಿಸಿದ್ದಾರೆ. ಹೀಗಿರುವಾಗ ಈ ಬಾರಿ ಯಾರು ಆರೆಂಜ್ ಕ್ಯಾಪ್ ಗೆಲ್ಲುತ್ತಾರೆ ತುಂಬಾ ಮುಖ್ಯವಾಗಿದೆ.
ವಿರಾಟ್ ಕೊಹ್ಲಿ ಸ್ಪೆಷಲ್ ಬ್ಯಾಟ್ ಮುರಿದ ವಿರಾಟ್ ಕೊಹ್ಲಿ
ಕೆಕೆಆರ್ ತಂಡ ಹಂಚಿಕೊಂಡಿರುವ ಹೊಸ ವಿಡಿಯೋದಲ್ಲಿ ರಿಂಕು ಸಿಂಗ್ ವಿರಾಟ್ ಜೊತೆ ಮಾತನಾಡುತ್ತಿರುವುದನ್ನು ನೀವು ನೋಡಬಹುದು. ಈ ಸಂದರ್ಭದಲ್ಲಿ ನೀವು ಕೊಟ್ಟ ಬ್ಯಾಟ್ ಸ್ಪಿನ್ನರ್ ಬೌಲಿಂಗ್ ಗೆ ಮುರಿದು ಹೋಯ್ತು ಅಂತ ರಿಂಕು ಕೊಹ್ಲಿಗೆ ಹೇಳುತ್ತಾರೆ. ಇದರ ನಂತರ ರಿಂಕು ಸಿಂಗ್ ಮತ್ತೆ ವಿರಾಟ್ ಬಳಿ ಹೊಸ ಬ್ಯಾಟ್‌ಗಾಗಿ ಬೇಡಿಕೆ ಸಲ್ಲಿಸುತ್ತಾರೆ. ಅಷ್ಟೇ ಅಲ್ಲ ಇನ್ನು ಮುಂದೆ ಬ್ಯಾಟ್ ಮುರಿಯುವುದಿಲ್ಲ ಅಂತ ಪ್ರಮಾಣ ಕೂಡ ಮಾಡುತ್ತಿರುವುದನ್ನು ನೀವು ವಿಡಿಯೋದಲ್ಲಿ ನೋಡಬಹುದು,
ಇಂದಿನ ಪಂದ್ಯದ ಸಂಭಾವ್ಯ 11 ಆಟಗಾರರ ಪಟ್ಟಿ ಇಂತಿದೆ
ಕೋಲ್ಕತ್ತಾ ನೈಟ್ ರೈಡರ್ಸ್
ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ವೆಂಕಟೇಶ್ ಅಯ್ಯರ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ.
ಇದನ್ನೂ ಓದಿ-Preeti Zinta: 'ನಾವು Rohit Sharma ಅವರನ್ನು PBKS ತಂಡದಲ್ಲಿ ಸೇರಿಸುತ್ತಿಲ್ಲ'
ರಾಯಲ್ ಚಾಲೆಂಜರ್ಸ್ ಬೆಂಗಳೂರು
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ವೆಸ್, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್, ಯಶ್ ದಯಾಲ್.
ವೈರಲ್ ವಿಡಿಯೋ ಇಲ್ಲಿದೆ
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.