IPL 2024: ಮುಂಬೈ ಇಂಡಿಯನ್ಸ್ ತಂಡದ ಬಸ್ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡ Rohit Sharma, Watch Video
Rohit Sharma As MI Team Bus Driver: ಮುಂಬೈ ಇಂಡಿಯನ್ಸ್ (MI) ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಆಟ ಮತ್ತು ಮೈದಾನದ ಒಳಗೆ ಮತ್ತು ಹೊರಗೆ ಅವರು ಮಾಡುವ ಪ್ರತಿಯೊಂದು ಚಟುವಟಿಕೆಗಳು ಭಾರಿ ಚರ್ಚೆಗೆ ಗ್ರಾಸವಾಗುತ್ತವೆ. ಪ್ರತಿದಿನ ರೋಹಿತ್ ಅವರ ಚಟುವಟಿಕೆಗಳ ಅಂತಹ ಹಲವಾರು ವಿಡಿಯೋಗಳು ಹೊರಬರುತ್ತಲೇ ಇರುತ್ತವೆ,
Rohit Sharma As MI Team Bus Driver: ಮುಂಬೈ ಇಂಡಿಯನ್ಸ್ (MI) ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಆಟ ಮತ್ತು ಮೈದಾನದ ಒಳಗೆ ಮತ್ತು ಹೊರಗೆ ಅವರು ಮಾಡುವ ಪ್ರತಿಯೊಂದು ಚಟುವಟಿಕೆಗಳು ಭಾರಿ ಚರ್ಚೆಗೆ ಗ್ರಾಸವಾಗುತ್ತವೆ. ಪ್ರತಿದಿನ ರೋಹಿತ್ ಅವರ ಚಟುವಟಿಕೆಗಳ ಅಂತಹ ಹಲವಾರು ವಿಡಿಯೋಗಳು ಹೊರಬರುತ್ತಲೇ ಇರುತ್ತವೆ, ಅವು ಅಭಿಮಾನಿಗಳಿಗೆ ಸಾಕಷ್ಟು ಮನರಂಜನೆ ನೀಡುತ್ತವೆ. ಇದೀಗ ಭಾನುವಾರ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯಕ್ಕೂ ಮುನ್ನ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
ವಾಸ್ತವದಲ್ಲಿ, CSK ವಿರುದ್ಧದ ಪಂದ್ಯದ ಮೊದಲು, ರೋಹಿತ್ ಮುಂಬೈ ತಂಡದ ಬಸ್ ಅನ್ನು ಓಡಿಸಲು ಪ್ರಯತ್ನಿಸುತ್ತಿರುವ ವೀಡಿಯೊ ಹೊರಹೊಮ್ಮಿದೆ. ರೋಹಿತ್ ಮುಂಬೈ ಇಂಡಿಯನ್ಸ್ ತಂಡದ ಡ್ರೈವರ್ ಸೀಟಿನಲ್ಲಿ ಕುಳಿತು ಬಸ್ ಓಡಿಸಲು ಯತ್ನಿಸುತ್ತಿದ್ದಾರೆ. ಸದ್ಯ ಇದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಕೂಡ ಅವರ ಈ ಹೊಸ ಅವತಾರವನ್ನು ಸಾಕಷ್ಟು ಇಷ್ಟಪಡುತ್ತಿದ್ದಾರೆ
ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ಅವರು ಅನುಭವಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಅವರ ಮನಸ್ಸಿನಲ್ಲಿ ವಿಶ್ವಕಪ್ ನಡೆಯುತ್ತಿದೆ ಎಂದು ಹೇಳುತ್ತಿರುವ ವಿಡಿಯೋ ಕೊಡ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿತ್ತು. ಆ ವಿಡಿಯೋ ಕೂಡ ಅಭಿಮಾನಿಗಳಿಗೆ ಸಾಕಷ್ಟು ಮನರಂಜನೆ ನೀಡಿತ್ತು.
36 ವರ್ಷದ ರೋಹಿತ್ ಶರ್ಮಾ ಈ ಬಾರಿ ಎಂಐ ತಂಡದ ನಾಯಕತ್ವ ವಹಿಸುತ್ತಿಲ್ಲ ಮತ್ತು ಅವರ ಸ್ಥಾನದಲ್ಲಿ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆದರೆ, ಅವರನ್ನು ನಾಯಕತ್ವದಿಂದ ತೆಗೆದುಹಾಕಿದ ನಂತರ, ಫ್ರಾಂಚೈಸಿ ಅಭಿಮಾನಿಗಳ ಭಾರಿ ಕೋಪಕ್ಕೆ ಗುರಿಯಾಗಿದೆ ಮತ್ತು ಹಾರ್ದಿಕ್ ಕೂಡ ಅಪಾರ ಟ್ರೋಲ್ ಎದುರಿಸಿದ್ದಾರೆ.
ಇದನ್ನೂ ಓದಿ-Viral Video: ಆರು ಎಸೆತಗಳಲ್ಲಿ 6,6,6,6,6,6. ಕೇವಲ 21 ಎಸೆತಗಳಲ್ಲಿ 64 ರನ್, Watch Video!
ಐಪಿಎಲ್ 2024 ರಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಕುರಿತು ಹೇಳುವುದಾದರೆ, ಈ ಋತುವಿನಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ರೋಹಿತ್ ಬಹುತೇಕ ಎಲ್ಲಾ ಪಂದ್ಯಗಳಲ್ಲಿ ತಮ್ಮ ತಂಡಕ್ಕೆ ಆಕ್ರಮಣಕಾರಿ ಆರಂಭವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಋತುವಿನಲ್ಲಿ ಇದುವರೆಗೆ, ಮಾಜಿ MI ನಾಯಕ ಒಟ್ಟು 5 ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರು 31.2 ಸರಾಸರಿ ಮತ್ತು 167.74 ಸ್ಟ್ರೈಕ್ ರೇಟ್‌ನಲ್ಲಿ 156 ರನ್ ಗಳಿಸಿದ್ದಾರೆ.
ಇಲ್ಲಿದೆ ವೈರಲ್ ವಿಡಿಯೋ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ