IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ಟೂರ್ನಿ ಇದೇ ತಿಂಗಳ 22 ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಆದರೆ, ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಇದುವರೆಗೂ ಪ್ರ್ಯಾಕ್ಟೀಸ್‌ಗೆ ಕಾಲಿಟ್ಟಿಲ್ಲ. ಕೊಹ್ಲಿ ಈ ಬಾರಿ ಐಪಿಎಲ್‌ನಲ್ಲಿ ಆಡುತ್ತಾರಾ? ಇಲ್ಲವಾ? ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.
ಇತ್ತೀಚೆಗಷ್ಟೇ ಆ ವಿಚಾರದಲ್ಲಿ ಸ್ಪಷ್ಟತೆ ಬಂದಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ವೈಯಕ್ತಿಕ ಕಾರಣಗಳಿಂದ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಿರಲಿಲ್ಲ.
ಇದನ್ನೂ ಓದಿ: IPL 2024: 'ಇಲ್ಲಿ ಯಾರೂ ಸಿನಿಯರ್... ಜೂನಿಯರ್ ಇಲ್ಲ...; ಹೀಗಂತ ಗೌತಮ್ ಗಂಭೀರವಾಗಿ ಹೇಳಿದ್ಯಾರಿಗೆ!
ಅವರ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಹ, ವಿರಾಟ್ ಕೊಹ್ಲಿ IPL-2024 ನಲ್ಲಿ ಆಡುತ್ತಿದ್ದಾರೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ.. IPL-2024 ಟೂರ್ನಿ ಮೊದಲ ದಿನವೇ RCB ತಂಡ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಆಡಬೇಕಿದೆ. ಇದಕ್ಕೆ ಇನ್ನು ಒಂದು ವಾರ ಮಾತ್ರ ಬಾಕಿ ಇದೆ. ಆದರೆ, ಕೊಹ್ಲಿ ಮೈದಾನದಲ್ಲಿ ಕಾಣಿಸಿಕೊಂಡಿಲ್ಲ..
ಇದನ್ನೂ ಓದಿ: IPL 2024 : ಈ 11 ಆಟಗಾರರು ಕಣಕ್ಕಿಳಿದರೆ RCB ಹಣೆಬರಹ 100% ಬದಲಾಗುತ್ತೆ..! ʼಈ ಸಲ ಕಪ್ ನಮ್ದೆʼ
ಇತ್ತೀಚಿನ ವರದಿಯ ಪ್ರಕಾರ... IPL 2024 ಪಂದ್ಯಾವಳಿಯಲ್ಲಿ ಆಡಲು ಕೊಹ್ಲಿ ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ. ಕೊಹ್ಲಿ ಇನ್ನೂ ಆರ್‌ಸಿಬಿ ಪಾಳಯಕ್ಕೆ ಸೇರದಿದ್ದರೂ, ಇದೇ ತಿಂಗಳ 22 ರಂದು ನಡೆಯಲಿರುವ ಮೊದಲ ಪಂದ್ಯಕ್ಕೂ ಮುನ್ನ ಬೆಂಗಳೂರಿನಲ್ಲಿ ನಡೆಯುವ ಟೂರ್ನಿಯ ಪೂರ್ವ ಶಿಬಿರದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ..
VIRAT KOHLI TO JOIN RCB SQUAD AT A PRE TOURNAMENT CAMP IN BENGALURU. (EspnCricinfo). pic.twitter.com/uUjpWO9v7d
— Mufaddal Vohra (@mufaddal_vohra) March 16, 2024
ಐಪಿಎಲ್ 2024 ರ ಮೊದಲ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಐಪಿಎಲ್ 2024ಕ್ಕೆ ಬಿಸಿಸಿಐ ಇದುವರೆಗೆ ಕೇವಲ 21 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದಕ್ಕೆ ಕಾರಣ ಲೋಕಸಭೆ ಚುನಾವಣೆ. ಕೇಂದ್ರ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದ ನಂತರ, ಆ ದಿನಾಂಕಗಳ ಆಧಾರದ ಮೇಲೆ ಪಂದ್ಯಗಳ ಮುಂದಿನ ದಿನಾಂಕಗಳನ್ನು ಪ್ರಕಟಿಸಲು ಬಿಸಿಸಿಐ ನಿರ್ಧರಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ