RCB Retained Players List: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿನ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿಬಿ) ಫ್ರಾಂಚೈಸ್ ತನ್ನ ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ಸಜ್ಜಾಗಿದೆ. ಇದೀಗ ಈ ಪಟ್ಟಿಯಲ್ಲಿ ಮೂವರು ಆಟಗಾರರ ಹೆಸರು ಕಾಣಿಸಿಕೊಂಡಿದೆ. ಮುಂಬರುವ ಋತುವಿನಲ್ಲೂ ಅವರು ಆರ್‌ಸಿಬಿ ಪರ ಆಡಲಿದ್ದಾರೆ.


COMMERCIAL BREAK
SCROLL TO CONTINUE READING

ಪಿಟಿಐ ವರದಿಯ ಪ್ರಕಾರ, ವಿರಾಟ್ ಕೊಹ್ಲಿಯನ್ನು ಉಳಿಸಿಕೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೊದಲ ಆಯ್ಕೆಯಾಗಿದೆ. ಕಳೆದ 17 ಸೀಸನ್‌ಗಳಲ್ಲಿ ಆರ್‌ಸಿಬಿ ಪರ ಆಡಿದ್ದ ಕೊಹ್ಲಿ ಈ ಬಾರಿ ಭಾರಿ ಮೊತ್ತ ನೀಡಿ ತಂಡದಲ್ಲಿ ಉಳಿಸಿಕೊಳ್ಳಬಹುದು.


ಇದನ್ನೂ ಓದಿ-ʼಈ ಮೂವರೊಂದಿಗೆ ನನಗೆ ಮದುವೆಯಾಗಿದೆ.. ಅದಕ್ಕೆ ಸಿಂಧೂರ ಹಚ್ಚೋದುʼ ಸೆನ್ಸೇಷನಲ್‌ ಸತ್ಯ ಬಿಚ್ಚಿಟ್ಟ ನಟಿ ರೇಖಾ!


ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎರಡನೇ ರಿಟೈನರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಡುಪ್ಲೆಸಿಸ್ ಅವರನ್ನು ಆರ್‌ಸಿಬಿ ಬಿಡುಗಡೆ ಮಾಡಲಿದೆ ಎಂಬ ವರದಿಗಳು ಬಂದಿದ್ದವು. ಆದರೆ ಸೇಂಟ್ ಲೂಸಿಯಾ ಕಿಂಗ್ಸ್ ಚಾಂಪಿಯನ್ಸ್ ಮಾಡಿದ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅವರ ಪ್ರಭಾವಶಾಲಿ ಪ್ರದರ್ಶನದಿಂದಾಗಿ ಮುಂದಿನ ಋತುವಿನಲ್ಲಿ ಫಾಫ್ ಅವರನ್ನು ತಂಡದಲ್ಲಿ ಇರಿಸಿಕೊಳ್ಳಲು ಆರ್‌ಸಿಬಿ ನಿರ್ಧರಿಸಿದೆ ಎಂದು ಪಿಟಿಐ ತಿಳಿಸಿದೆ.


ಇದನ್ನೂ ಓದಿ-ಬಿಗ್ ಬಾಸ್ ಶೋಗೆ ಸೆನ್ಸೇಷನಲ್ ಸ್ಪರ್ಧಿ ರೀ ಎಂಟ್ರಿ? ಮತ್ತೆ ವಿವಾದ!


ಅದೇ ರೀತಿ ಮೊಹಮ್ಮದ್ ಸಿರಾಜ್ ಆರ್‌ಸಿಬಿ ತಂಡದಲ್ಲಿ ಮೂರನೇ ರಿಟೇನರ್ ಆಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಆರ್ ಸಿಬಿ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿರುವ ಸಿರಾಜ್ ಅವರನ್ನು ಮೆಗಾ ಹರಾಜಿಗೂ ಮುನ್ನ ತಂಡದಲ್ಲಿ ಉಳಿಸಿಕೊಳ್ಳಲು ಆರ್ ಸಿಬಿ ಫ್ರಾಂಚೈಸಿ ನಿರ್ಧರಿಸಿದೆ.


ಕಳೆದ ಋತುವಿನಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ಆರ್‌ಸಿಬಿ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ. ಹಾಗಾಗಿ ಮುಂದಿನ ಋತುವಿನಲ್ಲಿ ಆರ್‌ಸಿಬಿ ತಂಡದಲ್ಲಿ ಮ್ಯಾಕ್ಸಿ ಕಾಣಿಸಿಕೊಳ್ಳುವುದಿಲ್ಲ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.