IPL 2025 Mega Auction RCB: ಐಪಿಎಲ್ 2025 ರ ಮೆಗಾ ಹರಾಜಿಗೆ ಮುಂಚಿತವಾಗಿ, ಬಿಸಿಸಿಐ ಫ್ರಾಂಚೈಸಿಗಳಿಗೆ ಗರಿಷ್ಠ ಆರು ಆಟಗಾರರನ್ನು ಉಳಿಸಿಕೊಳ್ಳುವ ಆಯ್ಕೆಯನ್ನು ನೀಡಿದೆ. ಅದರಂತೆ ಯಶ್ ದಯಾಳ್ ಮುಂದಿನ ದಿನಗಳಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡುವಲ್ಲಿ ಯಶಸ್ವಿಯಾದರೆ ಬೆಂಗಳೂರಿಗೆ ಸಂಕಷ್ಟ ಎದುರಾಗಬಹುದು.
ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಯಶ್ ದಯಾಳ್‌ಗೆ ಅವಕಾಶ ಸಿಕ್ಕಿತ್ತು. ಆದರೆ ಅವರು ಯಾವುದೇ ಪಂದ್ಯಗಳಲ್ಲಿ ಪ್ಲೇಯಿಂಗ್ 11 ರ ಭಾಗವಾಗಿರಲಿಲ್ಲ. ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಯಶ್ ಮತ್ತೊಮ್ಮೆ ಆಯ್ಕೆಯಾಗುವ ನಿರೀಕ್ಷೆಯಿದೆ ಮತ್ತು ಈ ಬಾರಿ ಅವರು ತಮ್ಮ ಅಂತರಾಷ್ಟ್ರೀಯ ಚೊಚ್ಚಲ ಪಂದ್ಯವನ್ನು ಆಡುವ ಅವಕಾಶವನ್ನು ಪಡೆಯುತ್ತಾರೆ.
ಯಶ್ ದಯಾಳ್ ಅಂತರಾಷ್ಟ್ರೀಯ ಪದಾರ್ಪಣೆ ಮಾಡಿದ ನಂತರ RCB ಅನ್ ಕ್ಯಾಪ್ಡ್ ಆಟಗಾರರಾಗಿ ಉಳಿಸಿಕೊಳ್ಳಬಹುದಾದ ಮೂವರು ಆಟಗಾರರನ್ನು ನೋಡೋಣ.
ಅನುಜ್ ರಾವತ್:
ಅನುಜ್ ರಾವತ್ ಕಳೆದ ಮೂರು ಸೀಸನ್‌ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ಸಂಬಂಧ ಹೊಂದಿದ್ದಾರೆ. ಈ ಅವಧಿಯಲ್ಲಿ ಅವರಿಗೆ ಆಡುವ ಅವಕಾಶಗಳು ತೀರಾ ಕಡಿಮೆ. ಇದುವರೆಗೆ ಐಪಿಎಲ್‌ನಲ್ಲಿ ತಮ್ಮ ಛಾಪು ಮೂಡಿಸುವಲ್ಲಿ ಅನುಜ್ ಯಶಸ್ವಿಯಾಗದಿದ್ದರೂ, ಭವಿಷ್ಯಕ್ಕೆ ಉಪಯುಕ್ತ ಆಟಗಾರ ಎಂದು ಸಾಬೀತುಪಡಿಸಬಹುದು. ಇದಕ್ಕೆ ಅನುಜ್ ಗೆ ಅವಕಾಶ ನೀಡಬೇಕು. ಫ್ರಾಂಚೈಸಿಗೆ ಅನ್‌ಕ್ಯಾಪ್ಡ್ ಆಟಗಾರನಾಗಲು ಅನುಜ್ ರಾವತ್ ಉತ್ತಮ ಆಯ್ಕೆಯಾಗಿದ್ದಾರೆ.
ವಿಜಯಕುಮಾರ್:
ವಿಜಯ್‌ಕುಮಾರ್ ಐಪಿಎಲ್ 2023 ರಲ್ಲಿ ಆರ್‌ಸಿಬಿ ತಂಡದ ಭಾಗವಾಗಿದ್ದರು. ಅವರು 11 ಪಂದ್ಯಗಳಲ್ಲಿ ತಂಡದ ಪರ 14 ವಿಕೆಟ್ ಪಡೆದರು. ವಿಜಯ್ ಕುಮಾರ್ ಇತ್ತೀಚೆಗೆ ಮಹಾರಾಜ T20 ಪ್ರೀಮಿಯರ್ ಲೀಗ್ 2024 ರಲ್ಲಿ ಅದ್ಭುತ ಪ್ರದರ್ಶನ ನೀಡಿದರು. ದುಲೀಪ್ ಟ್ರೋಫಿಯಲ್ಲೂ ಯಶಸ್ವಿಯಾಗಿದ್ದರು. ವಿಜಯಕುಮಾರ್ ಅವರನ್ನು ಉಳಿಸಿಕೊಳ್ಳುವುದು ಫ್ರಾಂಚೈಸಿಗೆ ಲಾಭದಾಯಕ ಒಪ್ಪಂದವಾಗಬಹುದು.
ಮಹಿಪಾಲ್ ಲೊಮ್ರೋರ್:
ಆಲ್ ರೌಂಡರ್ ಮಹಿಪಾಲ್ ಲೊಮ್ರೋರ್ ಕೂಡ ಈ ಪಟ್ಟಿಗೆ ಸೇರಿದ್ದಾರೆ. ಮಹಿಪಾಲ್ ಪ್ರತಿಭಾವಂತ ಆಟಗಾರ. ಅವರು ವೇಗವಾಗಿ ರನ್ ಗಳಿಸಬಲ್ಲರು. ಫ್ರಾಂಚೈಸಿ ಮಹಿಪಾಲ್‌ಗೆ ಮತ್ತೊಂದು ಅವಕಾಶ ನೀಡಲು ಯೋಚಿಸಬಹುದು. ಏಕೆಂದರೆ ಅವರನ್ನು ಉಳಿಸಿಕೊಳ್ಳಲು ಆರ್‌ಸಿಬಿ ಹೆಚ್ಚು ಹಣ ವ್ಯಯಿಸಬೇಕಾಗಿಲ್ಲ. ಅನ್‌ಕ್ಯಾಪ್ಡ್ ಆಟಗಾರನಾಗಿ ಅವರು ಅತ್ಯುತ್ತಮ ಆಯ್ಕೆಯಾಗಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.