ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ಸಿಬಿ ತಂಡಕ್ಕೆ ಪಂಜಾಬ್ ಬೌಲರ್ಗಳು ಆಘಾತಗಳ ಮೇಲೆ ಆಘಾತ ನೀಡಿದರು. ತವರು ನೆಲದಲ್ಲಿ ಆರ್ಸಿಬಿ ಬ್ಯಾಟ್ಸ್ಮನ್ಗಳು ಮತ್ತೊಮ್ಮೆ ನಿರಾಸೆ ಮೂಡಿಸಿದರು.

RCB vs PBKS, IPL 2025: ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ೧೮ನೇ ಆವೃತ್ತಿಯ ಐಪಿಎಲ್ ಟೂರ್ನಿಯ 34ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಮುಖಾಮುಖಿಯಾಗಿವೆ. ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದಾಗಿದ್ದು, ಮಳೆಯಿಂದ ಪಂದ್ಯ ವಿಳಂಬವಾಗಿತ್ತು. ಮಳೆಯ ಕಾರಣ ಉಭಯ ತಂಡಗಳ ನಡುವೆ ತಲಾ 14 ಓವರ್ಗಳ ಪಂದ್ಯ ನಡೆಯುತ್ತಿದೆ. ಮಳೆಯ ನಂತರ ಟಾಸ್ ಗೆದ್ದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.
ಆರ್ಸಿಬಿಗೆ ಆಘಾತ ನೀಡಿದ ಪಂಜಾಬ್ ಬೌಲರ್ಗಳು
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ಸಿಬಿ ತಂಡಕ್ಕೆ ಪಂಜಾಬ್ ಬೌಲರ್ಗಳು ಆಘಾತಗಳ ಮೇಲೆ ಆಘಾತ ನೀಡಿದರು. ತವರು ನೆಲದಲ್ಲಿ ಆರ್ಸಿಬಿ ಬ್ಯಾಟ್ಸ್ಮನ್ಗಳು ಮತ್ತೊಮ್ಮೆ ನಿರಾಸೆ ಮೂಡಿಸಿದರು. ಪಂಜಾಬ್ನ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಆರ್ಸಿಬಿಯ ಬ್ಯಾಟ್ಸ್ಮನ್ಗಳು ಪೆವಿಲಿಯನ್ ಪರೇಡ್ ನಡೆಸಿದರು. ನಾಯಕ ರಜತ್ ಪಾಟೀದಾರ್ (23) ಮತ್ತು ಟಿಮ್ ಡೇವಿಡ್ (ಅಜೇಯ 50) ಬಿಟ್ಟರೆ ಬೇರಾವ್ ಆಟಗಾರರು ಎರಡಂಕಿ ಮೊತ್ತ ದಾಖಲಿಸಲಿಲ್ಲ. ಟಿಮ್ ಡೇವಿಡ್ ಆಕರ್ಷಕ ಅರ್ಧಶತಕದ ನೆರವಿನಿಂದ ಆರ್ಸಿಬಿ 14 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಗಳಿಸಿದೆ.
Innings Break!
Dominant bowling show from #PBKS restrict #RCB to 95/9 ?
Chase on the other side ⌛️
Scorecard ▶ https://t.co/7fIn60rqKZ #TATAIPL | #RCBvPBKS pic.twitter.com/FTqo5FErfy
— IndianPremierLeague (@IPL) April 18, 2025
ಫಿಲ್ ಸಾಲ್ಟ್ ಒಂದು ಬೌಂಡರಿ ಬಾರಿಸಿ ಔಟಾದರೆ, ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ನಿರ್ಗಮಿಸಿದರು. ಲಿಯಾಮ್ ಲಿವಿಂಗ್ಸ್ಟೋನ್ ಕೇವಲ 4 ರನ್ ಗಳಿಸಿ ಔಟಾದರೆ, ಜಿತೇಶ್ ಶರ್ಮಾ ಕೇವಲ 2 ರನ್ಗೆ ವಿಕೆಟ್ ಒಪ್ಪಿಸಿದರು. ಕೃನಾಲ್ ಪಾಂಡ್ಯ ಕೂಡ ಕೇವಲ 1 ರನ್ಗೆ ಪೆವಿಲಿಯನ್ ಸೇರಿದರು.
Maiden #TATAIPL fifty for Tim David ?
Relive his three consecutive sixes ?
Scorecard ▶ https://t.co/7fIn60rqKZ #RCBvPBKS pic.twitter.com/iGtby4FPTy
— IndianPremierLeague (@IPL) April 18, 2025
ಟಿಮ್ ಡೇವಿಡ್ ಸ್ಫೋಟಕ ಆಟ: ಇಂದಿನ ಪಂದ್ಯದಲ್ಲಿ ಘಟನಾಘಟಿಗಳೇ ಬ್ಯಾಟಿಂಗ್ನಲ್ಲಿ ವೈಫಲ್ಯ ಕಂಡರೂ ಸಹ ಕೊನೆಯಲ್ಲಿ ಮಿಂಚಿದ ಟಿಮ್ ಡೇವಿಡ್ ಆರ್ಸಿಬಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದ್ದಾರೆ. 14 ಓವರ್ಗಳ ಪಂದ್ಯವಾಗಿದ್ದರೂ ಸಹ ಆರ್ಸಿಬಿ ಅಲ್ಪಮೊತ್ತಕ್ಕೆ ಅಂದರೆ 50 ರನ್ ಒಳಗೆ ಆಲೌಟ್ ಆಗುವ ಸಾಧ್ಯತೆ ಇತ್ತು. ಆದರೆ ಟಿಮ್ ಡೇವಿಡ್ ಸ್ಫೋಟಕ ಆಟವಾಡುವ ಮೂಲಕ ತಂಡಕ್ಕೆ ನೆರವಾದರು. ಕೊನೆಯ ಓವರ್ನಲ್ಲಿ ಮೂರು ಅದ್ಭುತ ಸಿಕ್ಸರ್ ಸಿಡಿಸುವ ಮೂಲಕ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು.
ಟಿಮ್ ಡೇವಿಡ್ ಕೇವಲ 26 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ ಇದ್ದ ಅಜೇಯ 50 ರನ್ ಗಳಿಸಿದರು. ಕೊನೆಯ ಓವರ್ನಲ್ಲಿಯೇ ಅವರು 20 ರನ್ ಗಳಿಸಿದ್ದು ತಂಡಕ್ಕೆ ನೆರವಾಯಿತು. ಪಂಜಾಬ್ ಪರ ಅರ್ಷದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ಮಾರ್ಕೊ ಜಾನ್ಸೆನ್ ಮತ್ತು ಯಜುವೇಂದ್ರ ಚಹಾಲ್ ತಲಾ ಎರಡು ವಿಕೆಟ್ ಪಡೆದರೆ, ಜೇವಿಯರ್ ಬಾರ್ಟ್ಲೆಟ್ ಒಂದು ವಿಕೆಟ್ ಕಬಳಿಸಿದರು.
ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟೀದಾರ್ (ನಾಯಕ), ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್ವುಡ್, ಯಶ್ ದಯಾಳ್.
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ (ನಾಯಕ), ಪ್ರಿಯಾಂಶ್ ಆರ್ಯ, ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಮಾರ್ಕೊ ಯಾನ್ಸೆನ್, ಹರ್ಪ್ರೀತ್ ಬ್ರಾರ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.