IPL 2025, RCB vs SRH: ಆರ್‌ಸಿಬಿಗೆ 232 ರನ್ ಟಾರ್ಗೆಟ್‌ ನೀಡಿದ ಹೈದರಾಬಾದ್‌, ಗೆದ್ದು ಅಗ್ರಸ್ಥಾನಕ್ಕೇರುತ್ತಾ ರೆಡ್‌ ಆರ್ಮಿ?

IPL 2025, RCB vs SRH: ಆರ್‌ಸಿಬಿ ತಂಡವು ಈಗಾಗಲೇ ಪ್ಲೇಆಫ್ಸ್‌ಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಇದೀಗ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಎರಡು ಸ್ಥಾನ ಅಲಂಕರಿಸಲು ಪ್ರಯತ್ನ ನಡೆಸುತ್ತಿದೆ. ಪಾಯಿಂಟ್ಸ್‌ ಟೇಬಲ್‌ನಲ್ಲಿ 2ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯ ಗೆದ್ದು ಮತ್ತೆ ಅಗ್ರಸ್ಥಾನಕ್ಕೇರುತ್ತಾ ಕಾದು ನೋಡಬೇಕಿದೆ. 

Written by - Puttaraj K Alur | Last Updated : May 23, 2025, 09:36 PM IST
  • ಆರ್‌ಸಿಬಿ ವಿರುದ್ಧ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿದ ಇಶಾನ್‌ ಕಿಶನ್‌
  • ಬೆಂಗಳೂರಿಗೆ ಬೃಹತ್‌ ಮೊತ್ತದ ಟಾರ್ಗೆಟ್‌ ನೀಡಿದ ಪ್ಯಾಟ್‌ ಕಮಿನ್ಸ್‌ ಪಡೆ
  • ಹೈದರಾಬಾದ್‌ ವಿರುದ್ಧ ಗೆದ್ದು ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುತ್ತಾ ರೆಡ್‌ ಆರ್ಮಿ?
IPL 2025, RCB vs SRH: ಆರ್‌ಸಿಬಿಗೆ 232 ರನ್ ಟಾರ್ಗೆಟ್‌ ನೀಡಿದ ಹೈದರಾಬಾದ್‌, ಗೆದ್ದು ಅಗ್ರಸ್ಥಾನಕ್ಕೇರುತ್ತಾ ರೆಡ್‌ ಆರ್ಮಿ?

Indian Premier League 2025: ಲಕ್ನೋದ ಏಕನಾ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್‌ ಟೂರ್ನಿಯ 65ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ನಾಯಕ ಜಿತೇಶ್‌ ಶರ್ಮಾ ಬೌಲಿಂಗ್‌ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ ಇಶಾನ್‌ ಕಿಶನ್‌ ಅವರ ಸ್ಫೋಟಕ ಅರ್ಧಶತಕ ಮತ್ತು ಅಭಿಷೇಕ್‌ ಶರ್ಮಾ ಅತ್ಯುತ್ತಮ ಆಟದ ನೆರವಿನಿಂದ ಬೃಹತ್‌ ಮೊತ್ತವನ್ನ ಪೇರಿಸಿದೆ. 

ಹೈದರಾಬಾದ್‌ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 231 ರನ್‌ ಗಳಿಸಿದ್ದು, ದೊಡ್ಡ ಮೊತ್ತದ ಟಾರ್ಗೆಟ್‌ ನೀಡಿದೆ. SRH ಪರ ಇಶಾನ್‌ ಕಿಶನ್‌ ಕೇವಲ 48 ಎಸೆತಗಳಲ್ಲಿ 7 ಬೌಂಡರಿ ಮತ್ತು 5 ಸಿಕ್ಸರ್‌ಗಳಿಂದ 94 ರನ್ ಗಳಿಸಿ ಸ್ಮರಣೀಯ ಇನ್ನಿಂಗ್ಸ್ ಆಡಿದರು. ಇನ್ನುಳಿದಂತೆ ಅಭಿಷೇಕ್‌ ಶರ್ಮಾ (34), ಅನಿಕೇತ್ ವರ್ಮಾ (26), ಹೆನ್ರಿಕ್ ಕ್ಲಾಸೆನ್ (24) ಮತ್ತು ಟ್ರಾವಿಸ್‌ ಹೆಡ್‌ (17) ರನ್‌ ಗಳಿಸಿದರು. ಆರ್‌ಸಿಬಿ ಪರ ರೊಮಾರಿಯೊ ಶೆಫರ್ಡ್ 2 ವಿಕೆಟ್‌ ಪಡೆದು ಮಿಂಚಿದರು. ಇನ್ನುಳಿದಂತೆ ಭುವನೇಶ್ವರ್‌ ಕುಮಾರ್‌, ಸುಯೇಶ್‌ ಶರ್ಮಾ, ಕೃನಾಲ್‌ ಪಾಂಡ್ಯ ಮತ್ತು ಲುಂಗಿ ಎನ್‌ಗಿಡಿ ತಲಾ ಒಂದೊಂದು ವಿಕೆಟ್‌ ಪಡೆದರು.   

ಇದನ್ನೂ ಓದಿ: 2027ರ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಆಡ್ತಾರಾ? ಮುಖ್ಯ ಕೋಚ್ ಗೌತಮ್ ಗಂಭೀರ್ ಹೇಳಿದ್ದೇನು?

ಆರ್‌ಸಿಬಿ ತಂಡವು ಈಗಾಗಲೇ ಪ್ಲೇಆಫ್ಸ್‌ಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಇದೀಗ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಎರಡು ಸ್ಥಾನ ಅಲಂಕರಿಸಲು ಪ್ರಯತ್ನ ನಡೆಸುತ್ತಿದೆ. ಹೈದರಾಬಾದ್‌ ಪಂದ್ಯಕ್ಕೂ ಮುನ್ನ ಆರ್‌ಸಿಬಿ ಆಡಿದ 12 ಪಂದ್ಯಗಳಲ್ಲಿ 9ರಲ್ಲಿ ಗೆಲುವು ಪಡೆದಿದ್ದು, ಮೂರರಲ್ಲಿ ಸೋಲು ಅನುಭವಿಸಿದೆ. 17 ಅಂಕಗಳನ್ನ ಕಲೆಹಾಕುವ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. ಇಂದಿನ ಪಂದ್ಯ ಗೆದ್ದು ಮತ್ತೆ ಅಗ್ರಸ್ಥಾನಕ್ಕೇರುತ್ತಾ ಕಾದು ನೋಡಬೇಕಿದೆ. 

ಎರಡೂ ತಂಡಗಳ ಸ್ಕ್ವಾಡ್‌ ಈ ರೀತಿ ಇದೆ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ಫಿಲಿಪ್‌ ಸಾಲ್ಟ್‌, ವಿರಾಟ್‌ ಕೊಹ್ಲಿ, ಮಯಾಂಕ್‌ ಅಗರ್ವಾಲ್‌, ಜಿತೇಶ್‌ ಶರ್ಮಾ (ನಾಯಕ ಮತ್ತು ವಿಕೆಟ್‌ ಕೀಪರ್), ಟಿಮ್‌ ಡೇವಿಡ್‌, ರೊಮ್ಯಾರಿಯೊ ಶೆಫರ್ಡ್‌, ಕೃಣಾಲ್‌ ಪಾಂಡ್ಯ, ಭುವನೇಶ್ವರ್‌ ಕುಮಾರ್‌, ಯಶ್‌ ದಯಾಳ್‌, ಲುಂಗಿ ಎನ್ಗಿಡಿ, ಸುಯೇಶ್‌ ಶರ್ಮಾ

ಸನ್‌ರೈಸರ್ಸ್‌ ಹೈದರಾಬಾದ್‌: ಅಭಿಷೇಕ್‌ ಶರ್ಮಾ, ಟ್ರಾವಿಸ್‌ ಹೆಡ್‌, ಇಶಾನ್‌ ಕಿಶನ್‌ (ವಿಕೆಟ್‌ ಕೀಪರ್), ನಿತೀಶ್‌ ರೆಡ್ಡಿ, ಹೆನ್ರಿಚ್‌ ಕ್ಲಾಸೆನ್‌, ಅನಿಕೇತ್‌ ವರ್ಮಾ, ಅಭಿನವ್‌ ಮನೋಹರ್‌, ಪ್ಯಾಟ್‌ ಕಮಿನ್ಸ್‌ (ನಾಯಕ), ಹರ್ಷಲ್‌ ಪಟೇಲ್‌, ಜಯದೇವ್ ಉನದ್ಕತ್, ಇಸಾನ್ ಮಾಲಿಂಗ

ಇದನ್ನೂ ಓದಿ: ಕೊಹ್ಲಿ, ರೋಹಿತ್ ನಿವೃತ್ತಿ ಬೆನ್ನೆಲ್ಲೇ ಮತ್ತೊಬ್ಬ ಸ್ಟಾರ್ ಕ್ರಿಕೆಟರ್ ಟೆಸ್ಟ್ ಗೆ ಗುಡ್ ಬೈ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

Trending News