IPL CSK: ಕ್ರಿಕೆಟ್ ಪ್ರೇಮಿಗಳ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಸಿಎಸ್ಕೆ ತಂಡದ ಸ್ಟಾರ್ ಬ್ಯಾಟ್ಸ್ಮನ್ ಡೆವೊನ್ ಕಾನ್ವೇ ಐಪಿಎಲ್ 2024ರ ಮೊದಲಾರ್ಧದಲ್ಲಿ ಆಡುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದ್ದು, ಇದರಿಂದಾಗಿ ಐಪಿಎಲ್ 2024 ಆರಂಭಕ್ಕೂ ಮೊದಲೇ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡಕ್ಕೆ ಭಾರಿ ಹಿನ್ನಡೆಯಾದಂತಾಗಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಬ್ಲಾಕ್ ಕ್ಯಾಪ್ಸ್, ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಎಡಗೈ ಬ್ಯಾಟ್ಸ್ಮನ್ ಡೆವೊನ್ ಕಾನ್ವೇ ಎಡಗೈ ಹೆಬ್ಬೆರಳಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಳ್ಳಲು ಕನಿಷ್ಠ 8 ವಾರಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದೆ.
Opener Devon Conway will this week undergo surgery on the left thumb he damaged during the KFC T20I series against Australia.
Following several scans and specialist advice, the decision was made to operate on Conway with a likely recovery period of at least eight weeks.
— BLACKCAPS (@BLACKCAPS) March 3, 2024
ಇದನ್ನೂ ಓದಿ- T20 WC: ಟಿ20 ವಿಶ್ವಕಪ್’ಗೆ ಭಾರತ ತಂಡ… ಅಂದು ಏಕದಿನದಲ್ಲಿ ಮಿಂಚಿದ್ದ ಮೂವರು ಸ್ಟಾರ್ ಆಟಗಾರರಿಗಿಲ್ಲ ಸ್ಥಾನ!
ಈ ವಾರ ತಮ್ಮ ಎಡಗೈ ಹೆಬ್ಬೆರಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಡೆವೊನ್ ಕಾನ್ವೇ, ಕನಿಷ್ಠ ಎಂಟು ವಾರಗಳವರೆಗೆ ಎಂದರೆ ಮೇ ತಿಂಗಳವರೆಗೂ ಐಪಿಎಲ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಹಾಗಾಗಿ, ಮಾರ್ಚ್ 22 ರಂದು ಪ್ರಾರಂಭವಾಗುವ ಮತ್ತು ಮೇ ಅಂತ್ಯದ ವೇಳೆಗೆ ಮುಕ್ತಾಯಗೊಳ್ಳಲಿರುವ ಅರ್ಧಕ್ಕಿಂತ ಹೆಚ್ಚು ಪಂದ್ಯಾವಳಿಗಳಿಗೆ ಕಾನ್ವೇ ಲಭ್ಯವಿರುವುದಿಲ್ಲ. ಇದರಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಐಪಿಎಲ್ ಆರಂಭಕ್ಕೂ ಮೊದಲೇ ಭಾರೀ ಹಿನ್ನಡೆಯಾಗಿದೆ.
ಇದನ್ನೂ ಓದಿ- IND vs ENG: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಆಡುವಂತೆ ಮನವಿ ಮಾಡಿದ್ದ ಬಿಸಿಸಿಐ: ಆದ್ರೆ ಇಶಾನ್ ಕೊಟ್ಟ ಉತ್ತರ ಹೀಗಿತ್ತು…
32 ವರ್ಷ ವಯಸ್ಸಿನ ನ್ಯೂಜಿಲೆಂಡ್ ಬ್ಯಾಟ್ಸ್ಮನ್ ಡೆವೊನ್ ಕಾನ್ವೇ ಅವರಿಗೆ ಕಳೆದ ತಿಂಗಳು ಆಸ್ಟ್ರೇಲಿಯಾ ವಿರುದ್ಧದ ಟಿ20ಐ ಸರಣಿಯ ವೇಳೆ ಎಡಗೈ ಹೆಬ್ಬೆರಳಿಗೆ ಪೆಟ್ಟಾಗಿತ್ತು. ಇದರಿಂದಾಗಿ, ವೆಲ್ಲಿಂಗ್ಟನ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದ ಡೆವೊನ್ ಕಾನ್ವೇ ಸದ್ಯ ಕ್ರೈಸ್ಟ್ ಚರ್ಚ್ನಲ್ಲಿನ ಸರಣಿಯ ಅಂತಿಮ ಟೆಸ್ಟ್ ಪಂದ್ಯದಿಂದಲೂ ಹೊರಗುಳಿದಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.