ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಸಂಜೆ 7.30ಕ್ಕೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದವರಿಗೆ ಫೈನಲ್ ಟಿಕೆಟ್ ಸಿಗಲಿದ್ದು, ಸೋತವರು ಟೂರ್ನಿಯಿಂದ ನಿರ್ಗಮಿಸಲಿದ್ದಾರೆ. ಹೀಗಾಗಿ ‘ರಾಜ’ರ ಕನದಲ್ಲಿ ಯಾರಿಗೆ ಫೈನಲ್ ಟಿಕೆಟ್ ಸಿಗುತ್ತೆ ಅನ್ನೋ ಕುತೂಹಲ ಮೂಡಿದೆ.


COMMERCIAL BREAK
SCROLL TO CONTINUE READING

ಪ್ರಸಕ್ತ ಟೂರ್ನಿಯಲ್ಲಿ ಫಾಫ್ ಡು ಪ್ಲೇಸಿಸ್ ನಾಯಕತ್ವದ ಆರ್‌ಸಿಬಿ ಲಕ್‍ನೊಂದಿಗೆ 4ನೇ ತಂಡವಾಗಿ ಪ್ಲೇ ಆಫ್‍ಗೆ ಎಂಟ್ರಿ ಕೊಟ್ಟಿತ್ತು. ಮಹತ್ವದ ಎಲಿಮೇಟರ್ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಬಲಿಷ್ಠ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 14 ರನ್‍ಗಳ ಭರ್ಜರಿ ಗೆಲುವು ಸಾಧಿಸಿತ್ತು. ರಜತ್ ಪಾಟಿದಾರ್ ಭರ್ಜರಿ ಶತಕ ಭಾರಿಸುವ ಮೂಲಕ ಆರ್‌ಸಿಬಿಗೆ ಗೆಲುವು ತಂದುಕೊಟ್ಟರು. ಅಜೇಯ 112 ರನ್ ಭಾರಿಸುವ ಮೂಲಕ ಲಕ್ನೋವನ್ನು ಕಾಡಿದ ರಜತ್ ಇಂದಿನ ಪಂದ್ಯದಲ್ಲಿಯೂ ಮಿಂಚುತ್ತಾರಾ ಅನ್ನೋ ಕುತೂಹಲ ಮೂಡಿದೆ.


ಬ್ಯಾಟಿಂಗ್‍ನಲ್ಲಿ ಬಲಿಷ್ಠವಾಗಿರುವ ಆರ್‌ಸಿಬಿಗೆ ಬೌಲಿಂಗ್ ವಿಭಾಗದ್ದೇ ತಲೆನೋವಾಗಿದೆ. ಆರ್‌ಸಿಬಿ ಬೌಲರ್‍ಗಳು ಲೂಸ್ ಬೌಲಿಂಗ್ ಮಾಡುತ್ತಿರುವುದು, ಹೆಚ್ಚು ರನ್ ಬಿಟ್ಟುಕೊಡುತ್ತಿರುವುದು ತಂಡದ ದೌರ್ಬಲ್ಯವಾಗಿದೆ. ಹೀಗಾಗಿ ಬೌಲಿಂಗ್ ಅನ್ನು ಸುಧಾರಿಕೊಂಡು ಡು ಪ್ಲೇಸಿಸ್ ಪಡೆ ಕಣಕ್ಕಿಳಿಯಬೇಕಿದೆ. ಬ್ಯಾಟಿಂಗ್ ನಲ್ಲಿ ಡು ಪ್ಲೇಸಿಸ್‍ ನಾಯಕನ ಆಟವಾಡಬೇಕಿದೆ. ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಗ್ಲೇನ್‍ ಮ್ಯಾಕ್ಸ್ ವೇಲ್, ಶಹಬಾಜ್ ಅಹ್ಮದ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ತಂಡದಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಂಡು ಆಡವಾಡಿದರೆ ಆರ್‌ಸಿಬಿಗೆ ಗೆಲುವು ಸುಲಭವಾಗಲಿದೆ.


ಇದನ್ನೂ ಓದಿ: 'RCB..RCB' ಎಂದು ಕೂಗಲು ಅಭಿಮಾನಿಗಳಿಗೆ ಹೇಳಿದ ವಿರಾಟ್ ಕೊಹ್ಲಿ..!


ಇನ್ನು 2ನೇ ತಂಡವಾಗಿ ಕ್ವಾಲಿಫೈಯನ್ ಪ್ರವೇಶಿಸಿದ್ದ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಬಲಿಷ್ಠ ಗುಜರಾತ್ ಟೈಟಾನ್ಸ್ ಎದುರು ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿದ್ದ ಸ್ಯಾಮ್ಸನ್ ಪಡೆಯ ಫೈನಲ್ ಪ್ರವೇಶಕ್ಕೆ ಇದು 2ನೇ ಅವಕಾಶ. ಹೀಗಾಗಿ ಕಳೆದ ಪಂದ್ಯದಲ್ಲಿನ ತಪ್ಪುಗಳನ್ನು ತಿದ್ದಿಕೊಂಡು ರಾಜಸ್ಥಾನ್ ಆಡಬೇಕಿದೆ. ರಾಜಸ್ಥಾನ್ ಬೌಲಿಂಗ್ ಪಡೆ ಬಲಿಷ್ಠವಾಗಿದೆ.


RCB vs RR ಫೈನಲ್‌ ಮ್ಯಾಚ್ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿದ ರವಿ ಶಾಸ್ತ್ರಿ


ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:


ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೆದ್ ಮೆಕಾಯ್, ಯುಜ್ವೇಂದ್ರ ಚಾಹಲ್, ಕರುಣ್ ನಾಯರ್, ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕಾರ್ಬಿನ್ ಬಾಷ್, ನವದೀಪ್ ಸೈನಿ, ಕೆ.ಸಿ.ಕಾರಿಯಪ್ಪ, ಡೇರಿಲ್ ಮಿಚೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ್ ಜುರೆಲ್, ಶುಭಂ ಗರ್ವಾಲ್


ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವಿರಾಟ್ ಕೋಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಅನೀಶ್ವರ್ ಗೌತಮ್, ಶೆರ್ಫೇನ್ ರುದರ್‌ಫೋರ್ಡ್, ಅನುಜ್ ರಾವತ್, ಸುಯಶ್ ಪ್ರಭುದೇಸಾಯಿ, ಚಾಮ ವಿ ಮಿಲಿಂದ್, ಜೇಸನ್ ಬೆಹ್ರೆಂಡಾರ್ಫ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಫಿನ್ ಅಲೆನ್, ಸಿದ್ದಾರ್ಥ್ ಕೌಲ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.