IPL ನಲ್ಲಿ ಮೊಟ್ಟಮೊದಲ ಬಾರಿಗೆ… ಅಣ್ಣ-ತಮ್ಮ ಮುಖಾಮುಖಿ: ಇಂದಿನ ಪಂದ್ಯದಲ್ಲಿ ಸೃಷ್ಟಿಯಾಗಲಿದೆ ಇತಿಹಾಸ!

Gujarat Titans vs Lucknow Super Giants: ಉಭಯ ತಂಡಗಳ ನಡುವಿನ ಈ ಪಂದ್ಯ ಅಹಮದಾಬಾದ್‌ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಋತುವಿನಲ್ಲಿ ಎರಡೂ ತಂಡಗಳು ಎರಡನೇ ಬಾರಿ ಮುಖಾಮುಖಿಯಾಗಲಿವೆ. ಈ ಹಿಂದಿನ ಪಂದ್ಯದಲ್ಲಿ ಗುಜರಾತ್‌ 7 ರನ್‌ ಗಳಿಂದ ಜಯ ಸಾಧಿಸಿತ್ತು.

Written by - Bhavishya Shetty | Last Updated : May 7, 2023, 11:24 AM IST
    • ಈ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿರುವವರು ಅಣ್ಣ ಮತ್ತು ತಮ್ಮ.
    • ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಈ ಉಭಯ ತಂಡಗಳ ನಾಯಕತ್ವ ವಹಿಸಿಕೊಂಡಿದ್ದಾರೆ
    • ಈ ಪಂದ್ಯ ಅಹಮದಾಬಾದ್‌ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ
IPL ನಲ್ಲಿ ಮೊಟ್ಟಮೊದಲ ಬಾರಿಗೆ… ಅಣ್ಣ-ತಮ್ಮ ಮುಖಾಮುಖಿ: ಇಂದಿನ ಪಂದ್ಯದಲ್ಲಿ ಸೃಷ್ಟಿಯಾಗಲಿದೆ ಇತಿಹಾಸ!   title=
Hardik Pandya - Krunal Pandya

Gujarat Titans vs Lucknow Super Giants: ಭಾನುವಾರ ಇಂಡಿಯನ್ ಪ್ರೀಮಿಯರ್ ಲೀಗ್‌ ನಲ್ಲಿ (ಐಪಿಎಲ್) ಹಾಲಿ ಚಾಂಪಿಯನ್ ಮತ್ತು ಟಾಪರ್‌ ಗಳಾದ ಗುಜರಾತ್ ಟೈಟಾನ್ಸ್ ಲಕ್ನೋ ಸೂಪರ್‌ ಜೈಂಟ್‌ ವಿರುದ್ಧ ಕಾದಾಡಲಿದೆ. ಆದರೆ ಈ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿರುವವರು ಅಣ್ಣ ಮತ್ತು ತಮ್ಮ. ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಈ ಉಭಯ ತಂಡಗಳ ನಾಯಕತ್ವ ವಹಿಸಿಕೊಂಡಿದ್ದು, ಇಬ್ಬರಲ್ಲಿ ಯಾರು ಬೆಸ್ಟ್ ಎಂಬುದು ಇಂದು ತಿಳಿದುಬರಲಿದೆ.  

ಇದನ್ನೂ ಓದಿ: DCvsRCB: ಫಿಲಿಪ್ ಸಾಲ್ಟ್ ಸ್ಪೋಟಕ ಬ್ಯಾಟಿಂಗ್ ಗೆ ತತ್ತರಿಸಿದ ಆರ್ಸಿಬಿ

ಉಭಯ ತಂಡಗಳ ನಡುವಿನ ಈ ಪಂದ್ಯ ಅಹಮದಾಬಾದ್‌ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಋತುವಿನಲ್ಲಿ ಎರಡೂ ತಂಡಗಳು ಎರಡನೇ ಬಾರಿ ಮುಖಾಮುಖಿಯಾಗಲಿವೆ. ಈ ಹಿಂದಿನ ಪಂದ್ಯದಲ್ಲಿ ಗುಜರಾತ್‌ 7 ರನ್‌ ಗಳಿಂದ ಜಯ ಸಾಧಿಸಿತ್ತು.

ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಹಲವು ಸಂದರ್ಭಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ ಮತ್ತು ಕಳೆದ ವರ್ಷದಿಂದ ಗುಜರಾತ್ ಟೈಟಾನ್ಸ್ ನಾಯಕರಾಗಿದ್ದಾರೆ. ಕೃನಾಲ್ ದೇಶೀಯ ಕ್ರಿಕೆಟ್‌ ನಲ್ಲಿ ಬರೋಡಾ ತಂಡದ ನಾಯಕತ್ವ ವಹಿಸಿದ್ದಾರೆ. ಇದೀಗ ನಿಯಮಿತ ನಾಯಕ ಕೆಎಲ್ ರಾಹುಲ್ ಗಾಯಗೊಂಡ ಕಾರಣ, ಅವರಿಗೆ ಲಕ್ನೋ ಸೂಪರ್‌ಜೈಂಟ್ಸ್‌ ನ ನಾಯಕತ್ವವನ್ನು ಹಸ್ತಾಂತರಿಸಲಾಗಿದೆ. ಐಪಿಎಲ್‌ ನಲ್ಲಿ ಇಬ್ಬರು ಸಹೋದರರು ವಿಭಿನ್ನ ತಂಡಗಳನ್ನು ಮುನ್ನಡೆಸುತ್ತಿರುವುದು ಇದೇ ಮೊದಲು.

ಹಾರ್ದಿಕ್ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಅದ್ಭುತ ಪ್ರದರ್ಶನ ನೀಡಿದ್ದು, ಇದೀಗ ಅವರ ತಂಡ 14 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಲಕ್ನೋದಲ್ಲಿ ಕೃನಾಲ್ ನಾಯಕತ್ವ ವಹಿಸಿದ್ದ ಮೊದಲ ಪಂದ್ಯ ಮಳೆಯಿಂದ ಕೊಚ್ಚಿ ಹೋಗಿತ್ತು.

ಇನ್ನು ತಂಡದ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವುದು ಅವರ ಜವಾಬ್ದಾರಿಯಾಗಿದೆ, ಅದರ ನಿಯಮಿತ ನಾಯಕನ ಹೊರತಾಗಿ ವೇಗದ ಬೌಲರ್ ಜಯದೇವ್ ಉನದ್ಕತ್ ಅವರನ್ನು ಸಹ ಮಿಸ್ ಕೊಳ್ಳುತ್ತಿದೆ ಸೂಪರ್ ಜೈಂಟ್ಸ್. ಲಕ್ನೋ ಪ್ರಸ್ತುತ 11 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಚೆನ್ನೈ ವಿರುದ್ಧದ ಪಂದ್ಯವು ವಾಶ್ ಔಟ್ ಆಗುವ ಮೊದಲು ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಈ ಪಂದ್ಯದಲ್ಲಿ ರಾಹುಲ್ ಗಾಯಗೊಂಡಿದ್ದರಿಂದ ಐಪಿಎಲ್‌ ನ ಉಳಿದ ಪಂದ್ಯಗಳಿಂದ ದೂರ ಉಳಿದಿದ್ದಾರೆ.

ತಂಡಗಳು ಈ ಕೆಳಗಿನಂತಿವೆ:

ಲಕ್ನೋ ಸೂಪರ್‌ ಜೈಂಟ್ಸ್: ಕೃನಾಲ್ ಪಾಂಡ್ಯ (ನಾಯಕ), ಅವೇಶ್ ಖಾನ್, ಆಯುಷ್ ಬಡೋನಿ, ಕ್ವಿಂಟನ್ ಡಿ ಕಾಕ್, ಕೃಷ್ಣಪ್ಪ ಗೌತಮ್, ಅರ್ಪಿತ್ ಗುಲೇರಿಯಾ, ದೀಪಕ್ ಹೂಡಾ, ಪ್ರೇರಕ್ ಮಂಕಡ್, ಕರುಣ್ ನಾಯರ್, ಕೈಲ್ ಮೇಯರ್ಸ್, ಅಮಿತ್ ಮಿಶ್ರಾ, ಮೊಹ್ಸಿನ್ ಖಾನ್, ನವೀನ್-ಉಲ್-ಹಕ್, ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಡೇನಿಯಲ್ ಸಾಮ್ಸ್, ಕರಣ್ ಶರ್ಮಾ, ರೊಮಾರಿಯೋ ಶೆಫರ್ಡ್, ಮಾರ್ಕಸ್ ಸ್ಟೊಯಿನಿಸ್, ಸ್ವಪ್ನಿಲ್ ಸಿಂಗ್, ಜಯದೇವ್ ಉನದ್ಕತ್, ಮನನ್ ವೋಹ್ರಾ, ಮಾರ್ಕ್ ವುಡ್, ಯಶ್ ಠಾಕೂರ್, ಯುದ್ಧವೀರ್ ಸಿಂಗ್.

ಇದನ್ನೂ ಓದಿ: Today Gold Price: ಜೀವಮಾನದಲ್ಲಿ ಇಷ್ಟೊಂದು ಕಡಿಮೆಯಾಗಿರಲಿಲ್ಲ ಚಿನ್ನದ ಬೆಲೆ! 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ ಗೊತ್ತಾ?

ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ದರ್ಶನ್ ನಲ್ಕಂಡೆ , ಜಯಂತ್ ಯಾದವ್, ಆರ್. ಸಾಯಿ ಕಿಶೋರ್, ನೂರ್ ಅಹ್ಮದ್, ದಾಸುನ್ ಶನಕ, ಓಡಿಯನ್ ಸ್ಮಿತ್, ಕೆಎಸ್ ಭರತ್, ಶಿವಂ ಮಾವಿ, ಉರ್ವಿಲ್ ಪಟೇಲ್, ಜೋಶುವಾ ಲಿಟಲ್ ಮತ್ತು ಮೋಹಿತ್ ಶರ್ಮಾ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News