IPL 2023: ಪಂದ್ಯ ಮುಗಿಯುತ್ತಿದ್ದಂತೆ ಕೊಹ್ಲಿ-ಗಂಗೂಲಿ ಮುಖಾಮುಖಿ: ಈ ಬಾರಿ ಇವರಿಬ್ಬರ ನಡುವೆ ನಡೆದಿದ್ದು ಶಾಕಿಂಗ್..!
Virat Kohli Sourav Ganguly Controversy: ಪಂದ್ಯದ ನಂತರ, ಇಬ್ಬರೂ ಹಸ್ತಲಾಘವ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗಿದೆ. ಮೇ 6ರಂದು ಮತ್ತೊಮ್ಮೆ ಈ ಎರಡು ತಂಡಗಳ ನಡುವೆ ಪಂದ್ಯ ನಡೆದಿದ್ದು, ಈ ಸಂದರ್ಭದಲ್ಲಿ ದಿಗ್ಗಜರು ಮತ್ತೊಮ್ಮೆ ಮುಖಾಮುಖಿಯಾಗಿದ್ದಾರೆ. ಆದರೆ ಈ ಬಾರಿ ಇಬ್ಬರೂ ಮಾಡಿದ್ದು ನೀವೆಲ್ಲರೂ ನೋಡಿದ್ರೆ ಖುಷಿ ಪಡುವುದು ಗ್ಯಾರಂಟಿ
Virat Kohli Sourav Ganguly Controversy: ಏಪ್ರಿಲ್ 15 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೈ ವೋಲ್ಟೇಜ್ ಐಪಿಎಲ್ ಪಂದ್ಯ ನಡೆದಿತ್ತು. ಈ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದುಕೊಂಡಿತು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಈ ಋತುವಿನಲ್ಲಿ ಸತತ 5 ನೇ ಸೋಲನ್ನು ಎದುರಿಸಬೇಕಾಯಿತು. ಈ ಪಂದ್ಯದ ನಂತರ ವಿರಾಟ್ ಕೊಹ್ಲಿ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ನಡುವೆ ಮಾತುಕತೆ ನಡೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: 5 ಗಂಟೆಯಲ್ಲಿ 1 ಲಕ್ಷ ಮಂದಿ ಮುಗಿಬಿದ್ದು ಖರೀದಿಸಿದ ಈ ಮೊಬೈಲ್ ಬೆಲೆ ಜಸ್ಟ್ 10,999! ಐಫೋನ್ ಮಾದರಿ ಇದೆ ಇದರ ಫೀಚರ್!
ಪಂದ್ಯದ ನಂತರ, ಇಬ್ಬರೂ ಹಸ್ತಲಾಘವ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗಿದೆ. ಮೇ 6ರಂದು ಮತ್ತೊಮ್ಮೆ ಈ ಎರಡು ತಂಡಗಳ ನಡುವೆ ಪಂದ್ಯ ನಡೆದಿದ್ದು, ಈ ಸಂದರ್ಭದಲ್ಲಿ ದಿಗ್ಗಜರು ಮತ್ತೊಮ್ಮೆ ಮುಖಾಮುಖಿಯಾಗಿದ್ದಾರೆ. ಆದರೆ ಈ ಬಾರಿ ಇಬ್ಬರೂ ಮಾಡಿದ್ದು ನೀವೆಲ್ಲರೂ ನೋಡಿದ್ರೆ ಖುಷಿ ಪಡುವುದು ಗ್ಯಾರಂಟಿ
IPL 2023ರ 50 ನೇ ಪಂದ್ಯವು ದೆಹಲಿ ಮತ್ತು ಬೆಂಗಳೂರು (DC vs RCB) ನಡುವೆ ನಡೆಯಿತು, ಅಲ್ಲಿ ದೆಹಲಿ ತಂಡವು RCB ಅನ್ನು 7 ವಿಕೆಟ್ ಗಳಿಂದ ಸೋಲಿಸಿತು. ಪಂದ್ಯದ ನಂತರ ವಿರಾಟ್ ಕೊಹ್ಲಿ ಮತ್ತು ಸೌರವ್ ಗಂಗೂಲಿ ಪರಸ್ಪರ ಹಸ್ತಲಾಘವ ಮಾಡುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ದಿಗ್ಗಜರ ನಡುವೆ ಸಮನ್ವಯ ಉಂಟಾಗಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಇಬ್ಬರ ನಡುವೆ ಜಗಳ ಶುರುವಾಗಿತ್ತು. ಈ ವೇಳೆ ಗಂಗೂಲಿ ಅಧಿಕಾರಾವಧಿ ಮುಗಿಯುವ ಮುನ್ನವೇ ಕೊಹ್ಲಿಯನ್ನು ನಾಯಕತ್ವದ ಜವಾಬ್ದಾರಿಯಿಂದ ಮುಕ್ತಗೊಳಿಸಿ ರೋಹಿತ್ ಶರ್ಮಾಗೆ ತಂಡದ ನಾಯಕತ್ವ ವಹಿಸಲಾಗಿತ್ತು. ಈ ಸಂದರ್ಭದಲ್ಲಿ ಇವರಿಬ್ಬರ ಮಧ್ಯೆ ತೀವ್ರ ಮಾತಿನ ಚಕಮಕಿಗಳು ನಡೆದಿದ್ದವು.
ಇದನ್ನೂ ಓದಿ: Today Gold Price: ಜೀವಮಾನದಲ್ಲಿ ಇಷ್ಟೊಂದು ಕಡಿಮೆಯಾಗಿರಲಿಲ್ಲ ಚಿನ್ನದ ಬೆಲೆ! 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ ಗೊತ್ತಾ?
ಇನ್ನು ಈ ವಿವಾದ ಮುನ್ನೆಲೆಗೆ ಬರುತ್ತಿದ್ದಂತೆ ಸೌರವ್ ಗಂಗೂಲಿ ಮತ್ತು ವಿರಾಟ್ ಕೊಹ್ಲಿ, ಇಬ್ಬರೂ ಇನ್ ಸ್ಟಾಗ್ರಾಮ್ ಹ್ಯಾಂಡಲ್ ನಿಂದ ಪರಸ್ಪರ ಅನ್ ಫಾಲೋ ಮಾಡಿದ್ದರು. ಬಳಿಕ IPL 2023 ಪ್ರಾರಂಭವಾಗುವ ಮೊದಲು, ಇಬ್ಬರೂ ಸಹ ಒಬ್ಬರನ್ನೊಬ್ಬರು ಫಾಲೋ ಮಾಡಲು ಶುರು ಮಾಡಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.