IPL 2023: ಚೆನ್ನೈ ಸೂಪರ್ ಕಿಂಗ್ಸ್’ಗೆ ಮಹಾ ಆಘಾತ: ಇಬ್ಬರು ಸ್ಟಾರ್ ಆಟಗಾರರು ತಂಡದಿಂದ ಹೊರಕ್ಕೆ!

Chennai Super Kings, IPL 2023: ಚೆನ್ನೈ ಸೂಪರ್ ಕಿಂಗ್ಸ್ ಮುಂದಿನ ಪಂದ್ಯ ಏಪ್ರಿಲ್ 12 ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ ನಡೆಯಲಿದೆ. ತಂಡದ ಇಬ್ಬರು ಆಟಗಾರರು ಗಾಯದ ಕಾರಣ ಮುಂದಿನ ಪಂದ್ಯದಲ್ಲಿ ಆಡುವುದು ಕಷ್ಟ ಎಂದು ಹೇಳಲಾಗುತ್ತಿದೆ.

Written by - Bhavishya Shetty | Last Updated : Apr 9, 2023, 11:41 PM IST
    • ಸಿಎಸ್’ಕೆ ಐಪಿಎಲ್ ಋತುವಿನಲ್ಲಿ ಇದುವರೆಗೆ 3 ಪಂದ್ಯಗಳನ್ನು ಆಡಿದ್ದು, 2 ರಲ್ಲಿ ಗೆಲುವು ಸಾಧಿಸಿದೆ.
    • ಸಿ ಎಸ್ ಕೆ ತಂಡದ ಇಬ್ಬರು ಆಟಗಾರರು ಗಾಯದ ಕಾರಣ ಮುಂದಿನ ಪಂದ್ಯದಲ್ಲಿ ಆಡುವುದು ಕಷ್ಟ
    • ಕಳೆದ ಎರಡು ದಿನಗಳ ಹಿಂದೆ ನಡೆದ ಪಂದ್ಯದಲ್ಲಿ ದೀಪಕ್ ಚಹಾರ್ ಗಾಯಗೊಂಡಿದ್ದರು
IPL 2023: ಚೆನ್ನೈ ಸೂಪರ್ ಕಿಂಗ್ಸ್’ಗೆ ಮಹಾ ಆಘಾತ: ಇಬ್ಬರು ಸ್ಟಾರ್ ಆಟಗಾರರು ತಂಡದಿಂದ ಹೊರಕ್ಕೆ! title=
Chennai Super Kings

Chennai Super Kings, IPL 2023: ಅನುಭವಿ ವಿಕೆಟ್‌ ಕೀಪರ್ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಆಡುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ರಸಕ್ತ ಐಪಿಎಲ್ ಋತುವಿನಲ್ಲಿ ಇದುವರೆಗೆ 3 ಪಂದ್ಯಗಳನ್ನು ಆಡಿದ್ದು, 2 ರಲ್ಲಿ ಗೆಲುವು ಸಾಧಿಸಿದೆ. ಅವರ ಮುಂದಿನ ಪಂದ್ಯ ಏಪ್ರಿಲ್ 12 ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ ನಡೆಯಲಿದೆ. ಇನ್ನು ಸಿ ಎಸ್ ಕೆ ತಂಡದ ಇಬ್ಬರು ಆಟಗಾರರು ಗಾಯದ ಕಾರಣ ಮುಂದಿನ ಪಂದ್ಯದಲ್ಲಿ ಆಡುವುದು ಕಷ್ಟ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: IPL 2023: ವಿಶ್ವದ ಯಾವುದೇ ಕ್ರಿಕೆಟಿಗರಿಂದಲೂ ಸಾಧ್ಯವಾಗದ ದಾಖಲೆ ಬರೆದ ಈ ಬೌಲರ್! ತಿಳಿದರೆ ‘ವಾವ್..’ ಅಂತೀರ

ಕಳೆದ ಎರಡು ದಿನಗಳ ಹಿಂದೆ ನಡೆದ ಪಂದ್ಯದಲ್ಲಿ ದೀಪಕ್ ಚಹಾರ್ ಗಾಯಗೊಂಡಿದ್ದರು. ಅವರಿಗೆ ಡ್ರೆಸ್ಸಿಂಗ್ ರೂಂನಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಆ ನಂತರ ಅವರು ಮೈದಾನಕ್ಕೆ ಇಳಿದಿರಲಿಲ್ಲ. ಇನ್ನು ಮುಂಬೈ ವಿರುದ್ಧದ ಈ ಪಂದ್ಯವನ್ನು ಚೆನ್ನೈ ಏಳು ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು. ಈ 30 ವರ್ಷದ ಬೌಲರ್‌;ನ ಎಡ ಕಾಲಿನ ಮಂಡಿರಜ್ಜು ಸ್ಕ್ಯಾನ್ ಮಾಡಬೇಕಾಗಿದೆ. ಈ ಕಾರಣದಿಂದಾಗಿಯೇ ಹೆಚ್ಚಿ  ಚಿಕಿತ್ಸೆ ಅಗತ್ಯವಿದ್ದು, ಮುಂದಿನ ಪಂದ್ಯದಲ್ಲಿ ಭಾಗವಹಿಸುತ್ತಾರೆಯೇ? ಇಲ್ಲವೇ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ಕಸ ಗುಡಿಸುವುದರಿಂದ ಕ್ರಿಕೆಟ್ ಮೈದಾನದವರೆಗೆ: KKRಗೆ ಏಕಾಂಗಿಯಾಗಿ ಗೆಲುವು ತಂದುಕೊಟ್ಟ Rinku Singh ಯಾರು ಗೊತ್ತಾ?

ಇವೆಲ್ಲದರ ಮಧ್ಯೆ ಚೆನ್ನೈ ತಂಡದ ಪರ ಮೊದಲ ಎರಡು ಪಂದ್ಯಗಳಲ್ಲಿ ಆಡಿದ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಗಾಯಗೊಂಡಿದ್ದಾರೆ. ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಆಡಿರಲಿಲ್ಲ. ಸಿ ಎಸ್‌ ಕೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, “ಚೆನ್ನೈ ಸೂಪರ್ ಕಿಂಗ್ಸ್ ಕ್ರಿಕೆಟಿಗ ಬೆನ್ ಸ್ಟೋಕ್ಸ್ ಅವರ ಕಾಲ್ಬೆರಳಿಗೆ ಸಣ್ಣ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರಣದಿಂದ ಮುಂಬೈ ಇಂಡಿಯನ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಆಡಲು ಸಾಧ್ಯವಾಗಲಿಲ್ಲ. ಸ್ಟೋಕ್ಸ್ ಚೇತರಿಸಿಕೊಂಡರೆ ಮಾತ್ರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲು ಸಾಧ್ಯವಾಗುವುದು” ಎಂದು ಸ್ಪಷ್ಟನೆ ನೀಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News