ಚೆನ್ನೈ: ಇಲ್ಲಿನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್  ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಏಳು ವಿಕೆಟ್ ಗಳ ಭರ್ಜರಿ ಗೆಲುವನ್ನು ಸಾಧಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Karnataka Election Photos : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಬಿಗ್‌ ರಿಲೀಫ್‌..! ಡಿಕೆಶಿ ನಾಮಪತ್ರ ಅಂಗೀಕಾರ


ಮೊದಲು ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಫೀಲ್ಡಿಂಗ್ ನ್ನು ಆಯ್ದುಕೊಂಡಿತು, ಇತ್ತ ಮೊದಲು ಬ್ಯಾಟಿಂಗ್ ಆರಂಭಿಸಿದ ಹೈದರಾಬಾದ್ ತಂಡವು ಉತ್ತಮ ಆರಂಭ ಕಂಡರೂ ಸಹ ನಿರೀಕ್ಷಿತ ಮಟ್ಟದಲ್ಲಿ ರನ್ ಸರಾಸರಿಯನ್ನು ಕಾಪಾಡಿಕೊಳ್ಳುವಲ್ಲಿ ವಿಫಲವಾಯಿತು.ಹೈದರಾಬಾದ್ ಪರವಾಗಿ ಅಭಿಶೇಖ್ ಶರ್ಮಾ 34 ಒಬ್ಬರನ್ನು ಹೊರತು ಪಡಿಸಿ ಉಳಿದ ಯಾವ ಆಟಗಾರನು ಕೂಡ ಮೂವತ್ತರ ಗಡಿಯನ್ನು ದಾಟದೆ ಇರುವುದು ತಂಡದ ಮೊತ್ತಕ್ಕೆ ಕಡಿವಾಣ ಬಿದ್ದಿತು.ಅಂತಿಮವಾಗಿ ೨೦ ಓವರ್ ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು ೧೩೪ ರನ್ ಗಳನ್ನಷ್ಟೇ ಕಲೆ ಹಾಕಿತು.ಚೆನ್ನೈ ತಂಡದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ರವೀಂದ್ರ ಜಡೇಜಾ ಮೂರು ವಿಕೆಟ್ ಗಳನ್ನು ಕಬಳಿಸಿದರು.


Photo Gallery: ಮೋದಿ ಏನು ದೇವರಾ? ಮಠಾಧೀಶರಾ? ಅಥವಾ ಛೂಮಂತರ್ ಬಾಬಾನಾ?-ಕಾಂಗ್ರೆಸ್ ಪ್ರಶ್ನೆ


ಹೈದರಾಬಾದ್ ತಂಡವು ನೀಡಿದ ಈ ಸುಲಭ ಗುರಿಯನ್ನು ಬೆನ್ನತ್ತಿದ ಚೆನ್ನೈ ತಂಡವು ಕೇವಲ ಮೂರು ವಿಕೆಟ್ ಕಳೆದುಕೊಂಡು ೧೮.೪ ಓವರ್ ಗಳಲ್ಲಿ ೧೩೮ ರನ್ ಗಳಿಸುವ ಮೂಲಕ ಗೆಲುವಿನ ದಡಕ್ಕೆ ಸೇರಿತು.ಚೆನ್ನೈ ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಡೆವನ್ ಕಾನ್ವೆ ಕೇವಲ ೫೭ ಎಸೆತಗಳಲ್ಲಿ ೧೨ ಬೌಂಡರಿ ಹಾಗೂ ಒಂದು ಸಿಕ್ಸರ್ ನೊಂದಿಗೆ ೭೭ ರನ್ ಗಳಿಸುವ ಮೂಲಕ ತಂಡದ ಗೆಲುವಿಗೆ ಆಸರೆಯಾದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.