ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು 62 ರನ್ ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಐಪಿಎಲ್ ಟೂರ್ನಿಯಲ್ಲಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ.
ಟಾಸ್ ಗೆದ್ದು ಮುಂಬೈ ಇಂಡಿಯನ್ಸ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು, ಮೊದಲು ಬ್ಯಾಟಿಂಗ್ ನ ಅವಕಾಶ ಪಡೆದ ಗುಜರಾತ್ ಟೈಟಾನ್ಸ್ ತಂಡವು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡಿತು. ಗುಜರಾತ್ ತಂಡದ ಪರವಾಗಿ ಶುಭ್ಮನ್ ಗಿಲ್ ಕೇವಲ 60 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ 7 ಬೌಂಡರಿಗಳ ನೆರವಿನಿಂದ ಭರ್ಜರಿ 129 ರನ್ ಗಳಿಸಿದರು. ತದನಂತರ ಸಾಯಿ ಸುದರ್ಶನ 43, ಹಾರ್ದಿಕ್ ಪಾಂಡ್ಯ 28 ರನ್ ಗಳ ನೆರವಿನಿಂದ ಗುಜರಾತ್ ತಂಡವು 20 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 233 ರನ್ ಗಳನ್ನು ಗಳಿಸಿತು.
📸📸 Happy faces after a monumental win 🥳#TATAIPL | #Qualifier2 | #GTvMI pic.twitter.com/1Mh1bNaqfD
— IndianPremierLeague (@IPL) May 26, 2023
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 18.2 ಓವರ್ ಗಳಲ್ಲಿ 171 ರನ್ ಗಳಿಗೆ ಸರ್ವಪತನವನ್ನು ಕಂಡಿತು. ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಸುರ್ಯಕುಮಾರ್ ಯಾದವ್ 61, ತಿಲಕ್ ವರ್ಮಾ 43, ಹಾಗೂ ಕ್ಯಾಮರೂನ್ ಗ್ರೀನ್ 30 ರನ್ ಗಳಿಸುವ ಮೂಲಕ ಗಮನ ಸೆಳೆದರಾದರೂ ಕೂಡ ತಂಡವನ್ನು ಗೆಲುವಿನ ದಡಕ್ಕೆ ಮುಟ್ಟಿಸುವಲ್ಲಿ ವಿಫಲರಾದರು.
ಇನ್ನೊಂದೆಡೆಗೆ ಗುಜರಾತ್ ಟೈಟಾನ್ಸ್ ತಂಡದ ಪರವಾಗಿ ಬೌಲಿಂಗ್ ಮಾಡಿದ ಮೋಹಿತ್ ವರ್ಮಾ ಕೇವಲ 2.2 ಓವರ್ ಗಳಲ್ಲಿ 10 ರನ್ ಗಳಿಗೆ ಐದು ವಿಕೆಟ್ ಗಳನ್ನು ಕಬಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.