IPL 2023: ವ್ಯರ್ಥವಾದ ಕಾನ್ವೆ ಸ್ಪೋಟಕ ಬ್ಯಾಟಿಂಗ್, ಚೆನ್ನೈ ಬಗ್ಗು ಬಡಿದ ಪಂಜಾಬ್ ಕಿಂಗ್ಸ್
ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಲ್ಕು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಲ್ಕು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಚೆನ್ನೈ ತಂಡವು ಭರ್ಜರಿ ಶುಭಾರಂಭವನ್ನು ಮಾಡಿತು.ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ ಹಾಗೂ ಕಾನ್ವೆ ಅವರ 86 ರನ್ ಗಳ ಜೊತೆಯಾಟವು ಬೃಹತ್ ಮೊತ್ತ ಗಳಿಸುವಲ್ಲಿ ನೆರವಾಯಿತು.ರುತುರಾಜ್ 31 ಎಸೆತಗಳಲ್ಲಿ 37 ರನ್ ಗಳಿಸಿದರೆ ಇನ್ನೊಂದೆಡೆಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಕಾನ್ವೆ ಕೇವಲ 52 ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ 16 ಬೌಂಡರಿಗಳ ನೆರವಿನಿಂದಾಗಿ ಬರೋಬ್ಬರಿ ಅಜೇಯ 92 ರನ್ ಗಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.