Kagiso Rabada: ಐಪಿಎಲ್ 2023ರ 18ನೇ ಪಂದ್ಯದಲ್ಲಿ ಪಂದ್ಯಾವಳಿಯ ಪ್ರಮುಖ ಬೌಲರ್‌’ಗಳಲ್ಲಿ ಒಬ್ಬರಾದ ಪಂಜಾಬ್ ಕಿಂಗ್ಸ್‌’ನ ಕಗಿಸೊ ರಬಾಡ ಅದ್ಭುತ ದಾಖಲೆಯನ್ನು ಮಾಡಿದ್ದಾರೆ. ಐಪಿಎಲ್‌’ನ ಮಾಸ್ಟರ್ ಬೌಲರ್‌’ಗಳನ್ನು ಸಹ ಹಿಂದಿಕ್ಕಿದ್ದಾರೆ. ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಈ ಪಂದ್ಯದಲ್ಲಿ, ರಬಾಡ ಎರಡನೇ ಇನ್ನಿಂಗ್ಸ್‌’ನಲ್ಲಿ ಬೌಲಿಂಗ್ ಮಾಡುವಾಗ ತಮ್ಮ ಹೆಸರಿನಲ್ಲಿ ಈ ದೊಡ್ಡ ಸಾಧನೆ ಮಾಡಿದರು. ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್‌’ಗಳಲ್ಲಿ 8 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ವಿರಾಟ್-ರೋಹಿತ್ ಹಿಂದಿಕ್ಕಿ ಇತಿಹಾಸ ಬರೆದ MS Dhoni: ಯಾರಿಂದಲೂ ಟಚ್ ಮಾಡೋಕಾಗಲ್ಲ ಅನ್ಸುತ್ತೆ ಈ ದಾಖಲೆ!


ಗುಜರಾತ್ ಟೈಟಾನ್ಸ್ ವಿರುದ್ಧ ಪಂಜಾಬ್ ವೇಗಿ ಕಗಿಸೊ ರಬಾಡ 1 ವಿಕೆಟ್ ಪಡೆದ ತಕ್ಷಣ, ಅವರು ಐಪಿಎಲ್ ಇತಿಹಾಸದಲ್ಲಿ ವೇಗವಾಗಿ 100 ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಐಪಿಎಲ್‌’ನ ಅನುಭವಿ ಬೌಲರ್‌’ಗಳನ್ನು ಹಿಂದಿಕ್ಕಿ 64 ಪಂದ್ಯಗಳಲ್ಲಿ ಈ ಸಾಧನೆ ಮಾಡಿದರು. ಇದಕ್ಕೂ ಮುನ್ನ ಅತ್ಯಂತ ವೇಗವಾಗಿ 100 ವಿಕೆಟ್ ಪಡೆದ ದಾಖಲೆ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಅವರು 70 ಪಂದ್ಯಗಳಲ್ಲಿ 100 ವಿಕೆಟ್ ಪಡೆದಿದ್ದಾರೆ.


ಇದನ್ನೂ ಓದಿ: CSK vs RR ಪಂದ್ಯದಲ್ಲಿ ಅಂಪೈರ್ ವಿರುದ್ಧ ಗಂಭೀರ ಆರೋಪ ಮಾಡಿದ ಅಶ್ವಿನ್! ಹುಟ್ಟಿಕೊಂಡ ಹೊಸ ವಿವಾದ ಏನು?


ಅತ್ಯಂತ ವೇಗವಾಗಿ 100 ವಿಕೆಟ್ ಪಡೆದ ಭಾರತೀಯ ಬೌಲರ್!


ಐಪಿಎಲ್‌’ನಲ್ಲಿ ಅತ್ಯಂತ ವೇಗವಾಗಿ 100 ವಿಕೆಟ್ ಪಡೆದ ಭಾರತೀಯ ಬೌಲರ್‌’ಗಳಲ್ಲಿ ಭುವನೇಶ್ವರ್ ಕುಮಾರ್ ಮುಂಚೂಣಿಯಲ್ಲಿದ್ದಾರೆ. 81 ಪಂದ್ಯಗಳಲ್ಲಿ 100 ವಿಕೆಟ್ ಉರುಳಿಸಿದ್ದಾರೆ. ಇದರ ನಂತರ ಸ್ಪಿನ್ನರ್ ಅಮಿತ್ ಮಿಶ್ರಾ ಹೆಸರು ಇದೆ. ಮಿಶ್ರಾ 83 ಪಂದ್ಯಗಳಲ್ಲಿ 100 ವಿಕೆಟ್ ಕಬಳಿಸಿದ್ದಾರೆ. ಭಾರತದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಕೂಡ 83 ಪಂದ್ಯಗಳಲ್ಲಿ 100 ಐಪಿಎಲ್ ವಿಕೆಟ್ ಪಡೆದಿದ್ದರೆ, ಯುಜ್ವೇಂದ್ರ ಚಹಾಲ್ 84 ಪಂದ್ಯಗಳಲ್ಲಿ 100 ವಿಕೆಟ್ ಪಡೆದಿದ್ದಾರೆ.


 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.