DC vs LSG: IPL 2023ರ ಮೂರನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಇಂದು ನಡೆದಿದೆ. ಈ ಪಂದ್ಯದಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಪಡೆ 50 ರನ್;ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯ ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದಿದೆ.
ಇದನ್ನೂ ಓದಿ: IPL 2023: ಟೀಂ ಇಂಡಿಯಾದಿಂದ ಹೊರಗಿಟ್ಟ ಈ ಆಟಗಾರನಿಗೆ ಪಾಂಡ್ಯ ಕೂಡ ಕೊಡುತ್ತಿಲ್ಲ ಅವಕಾಶ! ಅಂತ್ಯವಾಯ್ತ ವೃತ್ತಿ ಜೀವನ?
ಮೊದಲು ಬ್ಯಾಟಿಂಗ್ ಮಾಡಿದ ಲಖನೌ ತಂಡ 6 ವಿಕೆಟ್ ನಷ್ಟಕ್ಕೆ193 ರನ್ ಕಲೆ ಹಾಕಿತು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 9 ವಿಕೆಟ್ ನಷ್ಟಕ್ಕೆ 143 ರನ್ ಕಲೆ ಹಾಕಿ ಹೀನಾಯ ಸೋಲು ಕಂಡಿದೆ.
ಮಿಂಚಿದ ಬೌಲರ್ಸ್:
ಲಖನೌ ಸೂಪರ್ ಜೈಂಟ್ಸ್ ತಂಡದ ಬೌಲರ್’ಗಳು ಈ ಪಂದ್ಯದಲ್ಲಿ ಅದ್ಭುತವಾಗಿ ಆಟವಾಡಿದ್ದಾರೆ. ಎಂ ವುಡ್ 14 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಇನ್ನುಳಿದಂತೆ ರವಿ ಬಿಷ್ಣೋಯ್ ಮತ್ತು ಆವೇಶ್ ಖಾನ್ ತಲಾ 2 ವಿಕೆಟ್ ಪಡೆದಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್-11: ಕೆಎಲ್ ರಾಹುಲ್ (ಸಿ), ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆ), ಆಯುಷ್ ಬಡೋನಿ, ಮಾರ್ಕ್ ವುಡ್, ಜಯದೇವ್ ಉನದ್ಕತ್, ರವಿ ಬಿಷ್ಣೋಯ್, ಅವೇಶ್ ಖಾನ್
ಇದನ್ನೂ ಓದಿ: MS Dhoniಗೆ ಗಂಭೀರ ಗಾಯ! CSK ಕೋಚ್ ನೀಡಿದ ಹೆಲ್ತ್ ಅಪ್ಡೇಟ್’ನಲ್ಲಿದೆ ಈ ಮಹತ್ವದ ಮಾಹಿತಿ
ಡೆಲ್ಲಿ ಕ್ಯಾಪಿಟಲ್ಸ್‌ನ ಪ್ಲೇಯಿಂಗ್-11: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಮಿಚೆಲ್ ಮಾರ್ಷ್, ರಿಲೆ ರುಸ್ಸೋ, ಸರ್ಫರಾಜ್ ಖಾನ್ (ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಚೇತನ್ ಸಕಾರಿಯಾ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.