MS Dhoni autograph is on Sunil Gavaskar chest: ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಒಂದಕ್ಕಿಂತ ಹೆಚ್ಚು ದಾಖಲೆಗಳನ್ನು ಹೊಂದಿದ್ದಾರೆ. ಟೆಸ್ಟ್ ಕ್ರಿಕೆಟ್‌ ನಲ್ಲಿ 10,000 ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಖ್ಯಾತಿಗೆ ಸುನಿಲ್ ಗವಾಸ್ಕರ್ ಪಾತ್ರರಾಗಿದ್ದರು. ಈ ದಾಖಲೆಯನ್ನು ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಮುರಿದರು.


COMMERCIAL BREAK
SCROLL TO CONTINUE READING

ಸಚಿನ್ ತೆಂಡೂಲ್ಕರ್ ಅಂತರಾಷ್ಟ್ರೀಯ ಕ್ರಿಕೆಟ್‌ ನಲ್ಲಿ 100 ಶತಕಗಳನ್ನು ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. ಸುನಿಲ್ ಗವಾಸ್ಕರ್ ಮತ್ತು ಸಚಿನ್ ತೆಂಡೂಲ್ಕರ್ ನಂತರ ಭಾರತ ಕ್ರಿಕೆಟ್‌ ಗೆ ವಿರಾಟ್ ಕೊಹ್ಲಿಯಂತಹ ಸ್ಟಾರ್ ಸಿಕ್ಕಿದ್ದಾರೆ. ಕೊಹ್ಲಿ ಕೇವಲ 34 ವರ್ಷ ವಯಸ್ಸಿನಲ್ಲೇ 74 ಅಂತರಾಷ್ಟ್ರೀಯ ಶತಕಗಳನ್ನು ಬಾರಿಸಿದ್ದಾರೆ.


ಇದನ್ನೂ ಓದಿ: ರೋಹಿತ್ ಶರ್ಮಾ ನಿವೃತ್ತಿ ಬಳಿಕ Team Indiaಗೆ ಈ ವಿಕೆಟ್ ಕೀಪರ್-ಬ್ಯಾಟ್ಸ್’ಮನ್ ನಾಯಕ!


ಇವೆಲ್ಲದರ ಹೊರತಾಗಿ ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್ ಅವರು ಜಗತ್ತಿನ ಶ್ರೇಷ್ಠ ಆಟಗಾರರ ಬಗ್ಗೆ ಮನಬಿಚ್ಚಿದ್ದಾರೆ. ಗವಾಸ್ಕರ್ ಭಾನುವಾರ ದೇಶದ ಅತ್ಯಂತ ಯಶಸ್ವಿ ಕ್ರಿಕೆಟ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಆಟೋಗ್ರಾಫ್ ತೆಗೆದುಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ ನಲ್ಲಿ ಅತ್ಯುತ್ತಮ ಬೌಲರ್‌ ಗಳ ಮುಂದೆ 10,000 ಕ್ಕೂ ಹೆಚ್ಚು ರನ್ ಗಳಿಸಿದ ಗವಾಸ್ಕರ್, ಚೆನ್ನೈನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ನಂತರ ತಮ್ಮ ಎದೆಯ ಬಳಿ ಧೋನಿ ಅವರ ಹಸ್ತಾಕ್ಷರ (ಆಟೋಗ್ರಫ್)ನ್ನು ತಮ್ಮ ಅಂಗಿಯ ಮೇಲೆ ಹಾಕಿಸಿಕೊಂಡಿದ್ದಾರೆ.


Cricket World Cup 2023: ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಹೊಡೆತ!


2007 ರ ಟಿ20 ವಿಶ್ವಕಪ್ ಮತ್ತು 2011 ರ ಏಕದಿನ ವಿಶ್ವಕಪ್ ಹೊರತುಪಡಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ವಿಶ್ವದ ಏಕೈಕ ನಾಯಕ ಧೋನಿ. ಅವರು ಐಪಿಎಲ್‌ ನಲ್ಲಿ ನಾಲ್ಕು ಪ್ರಶಸ್ತಿಗಳನ್ನು ಗೆದ್ದಿದ್ದಾರೆ ಮತ್ತು ಮುಂಬೈ ಇಂಡಿಯನ್ಸ್ (ಐದು ಪ್ರಶಸ್ತಿಗಳು) ನಂತರ ಅವರ ತಂಡವು ಈ ಲೀಗ್‌ನಲ್ಲಿ ಎರಡನೇ ಅತ್ಯಂತ ಯಶಸ್ವಿ ತಂಡವಾಗಿದೆ.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ