IPL 2023, MS Dhoni Video: ಬುಧವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಬಿರುಸಿನ ಫಾರ್ಮ್ ಕಂಡುಬಂದಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಸೂಪರ್ ಸಿಕ್ಸರ್ ಗಳನ್ನು ಬಾರಿಸಿದ್ದು ಅಭಿಮಾನಿಗಳಿಗೆ ಆ ದಿನಗಳನ್ನು ನೆನಪಾಗುವಂತೆ ಮಾಡಿದೆ.
ಇದನ್ನೂ ಓದಿ: ಅಂದು Team India ವಿಶ್ವಕಪ್ ಗೆಲ್ಲುತ್ತಿದ್ದಂತೆ ವಕೀಲರ ಪುತ್ರಿಯನ್ನೇ ಪಟಾಯಿಸಿ ಮದುವೆಯಾಗಿದ್ದ ಈ ಆರಂಭಿಕ ಆಟಗಾರ!
ಚೆನ್ನೈ ಸೂಪರ್ ಕಿಂಗ್ಸ್ ಇನಿಂಗ್ಸ್ ನ 19ನೇ ಓವರ್ ನಲ್ಲಿ ಮಹೇಂದ್ರ ಸಿಂಗ್ ಧೋನಿ ಅವರ ಅಬ್ಬರದ ಬ್ಯಾಟಿಂಗ್ ನೋಡಿ ಕ್ರಿಕೆಟ್ ಜಗತ್ತು ಅಚ್ಚರಿ ಮೂಡಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವೇಗದ ಬೌಲರ್ ಖಲೀಲ್ ಅಹ್ಮದ್ ಚೆನ್ನೈ ಸೂಪರ್ ಕಿಂಗ್ಸ್ ಇನ್ನಿಂಗ್ಸ್ನ 19 ನೇ ಓವರ್ ಬೌಲ್ ಮಾಡಲು ಬಂದರು. ಈ ಸಂದರ್ಭದಲ್ಲಿ ಕ್ಯಾಪ್ಟನ್ ಕೂಲ್ ಬಾರಿಸಿದ ಸಿಕ್ಸರ್ ಕಂಡು ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲ. ಅಷ್ಟೇ ಏಕೆ ಅನೇಕರ ಕಣ್ಣಂಚು ಒದ್ದೆಯಾಗಿದ್ದು ಸುಳ್ಲಲ್ಲ.
ಚೆನ್ನೈ ಸೂಪರ್ ಕಿಂಗ್ಸ್ ಇನಿಂಗ್ಸ್ ನ 19 ನೇ ಓವರ್ ನಲ್ಲಿ ಮಹೇಂದ್ರ ಸಿಂಗ್ ಧೋನಿ ಅವರು ಏಕಾಏಕಿ ಇಡೀ ಪ್ರೇಕ್ಷಕರನ್ನು ರೋಮಾಂಚನಗೊಳಿಸುವಂತೆ ಬ್ಯಾಟಿಂಗ್ ಮಾಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಖಲೀಲ್ ಅಹ್ಮದ್ ಅವರ ಈ ಓವರ್ ನಲ್ಲಿ ಮಹೇಂದ್ರ ಸಿಂಗ್ ಧೋನಿ 19 ರನ್ ನೀಡಿದರು. ಈ ದೃಶ್ಯ ಕಂಡರೆ ಅವರ ಬ್ಯಾಟಿಂಗ್ ಶೈಲಿಯ ಹಳೆಯ ದಿನಗಳನ್ನು ನೆನಪಾಗುವುದು ಖಂಡಿತ.
ಖಲೀಲ್ ಅಹ್ಮದ್ ಅವರ ಈ ಓವರ್ ನಲ್ಲಿ ಮಹೇಂದ್ರ ಸಿಂಗ್ ಧೋನಿ ಎರಡು ಅದ್ಭುತ ಸಿಕ್ಸರ್ ಗಳನ್ನು ಬಾರಿಸಿದ್ದಾರೆ. ಇದಲ್ಲದೇ ಅವರು ಬೌಂಡರಿ ಬಾರಿಸಿದ್ದಾರೆ. ಇವೆಲ್ಲದರ ಜೊತೆಗೆ ಚೆಪಾಕ್ ಸ್ಟೇಡಿಯಂನಲ್ಲಿ ಧೋನಿ-ಧೋನಿ ಎಂಬ ಘೋಷಣೆಗಳು ಕೇಳಿಬರುತ್ತಿತ್ತು.
Thala MAHI Magic at Chepauk, the Finisher. Chennai Super Kings 🙌#CSKvDC #MSDhonipic.twitter.com/L6EZRGu7dU
— 🚩𝐽𝑜𝑛𝑛𝑦💛 (@just_jonny_20) May 10, 2023
41ನೇ ವಯಸ್ಸಿನಲ್ಲಿ ಮಹೇಂದ್ರ ಸಿಂಗ್ ಧೋನಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. 9 ಎಸೆತಗಳಲ್ಲಿ 20 ರನ್ ಗಳಿಸಿ ಬಿರುಸಿನ ಆಟವಾಡಿದ್ದಾರೆ ಕ್ಯಾಪ್ಟನ್ ಕೂಲ್. ಧೋನಿ ಅವರ ಈ ಇನ್ನಿಂಗ್ಸ್ ನಲ್ಲಿ 2 ಸಿಕ್ಸರ್ ಮತ್ತು 1 ಬೌಂಡರಿ ಸೇರಿದ್ದವು. ಮಹೇಂದ್ರ ಸಿಂಗ್ ಧೋನಿ ಈ ಇನ್ನಿಂಗ್ಸ್ ಆಡುವ ಮೂಲಕ ಪಂದ್ಯಕ್ಕೆ ದೊಡ್ಡ ತಿರುವು ಸಿಕ್ಕಿತ್ತು. ಅಷ್ಟೇ ಅಲ್ಲದೆ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯವನ್ನು 27 ರನ್ ಗಳಿಂದ ಗೆದ್ದುಕೊಂಡಿತು.
ಇದನ್ನೂ ಓದಿ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ಗೆ ಸ್ಥಾನ
ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಆಕ್ರಮಣಕಾರಿ ಬ್ಯಾಟಿಂಗ್ ಮತ್ತು ಕೌಶಲ್ಯಪೂರ್ಣ ನಾಯಕತ್ವದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅನ್ನು 27 ರನ್ ಗಳಿಂದ ಸೋಲಿಸುವ ಮೂಲಕ ಐಪಿಎಲ್ ಪ್ಲೇಆಫ್ನತ್ತ ಮುಂದಿನ ಹೆಜ್ಜೆ ಇಟ್ಟಿದೆ. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಎಂಟು ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ಇದರಲ್ಲಿ ಧೋನಿ ಒಂಬತ್ತು ಎಸೆತಗಳಲ್ಲಿ 20 ರನ್ ಕೊಡುಗೆ ನೀಡಿದರು. ಇದಕ್ಕೆ ಉತ್ತರವಾಗಿ ಡೆಲ್ಲಿ ತಂಡ ಎಂಟು ವಿಕೆಟ್ ಗೆ 140 ರನ್ ಗಳಿಸಲಷ್ಟೇ ಶಕ್ತವಾಯಿತು. ತನ್ನ ಇಡೀ ಇನ್ನಿಂಗ್ಸ್ ನಲ್ಲಿ ಹತ್ತು ಬೌಂಡರಿಗಳನ್ನು ಬಾರಿಸಲು ಸಹ ಡೆಲ್ಲಿ ತಂಡ ಹೆಣಗಾಡಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.