Juhi Chawla, RCB vs KKR: ಐಪಿಎಲ್ 2023ರ ಒಂಬತ್ತನೇ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ನಡುವೆ ನಡೆದಿದೆ. ಈ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನಡೆದಿದ್ದು, ಇದರಲ್ಲಿ ಕೆಕೆಆರ್ 81 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಈ ಪಂದ್ಯದ ಸಂದರ್ಭದಲ್ಲಿ ಬಾಲಿವುಡ್ ನಟಿ ಹಾಗೂ ಕೆಕೆಆರ್ ಸಹ ಮಾಲಕಿ ಜೂಹಿ ಚಾವ್ಲಾ ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಕೊಲ್ಕತ್ತಾ ನೈಟ್ ರೈಡರ್ಸ್ ಈ ವಿಡಿಯೋವನ್ನು ಹಂಚಿಕೊಂಡಿದೆ. ಇನ್ನು ಕೆಕೆಆರ್ ಗೆಲುವು ಸಾಧಿಸುತ್ತಿದ್ದಂತೆ ಪ್ರೇಮಲೋಕ ಬೆಡಗಿ ಖುಷಿಯಲ್ಲಿ ಕುಣಿದಾಡಿದ್ದಾರೆ. ಈ ಬಳಿಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಇದನ್ನೂ ಓದಿ: WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್’ನಲ್ಲಿ ಶ್ರೇಯಸ್ ಅಯ್ಯರ್ ಬದಲಿಗೆ ಸ್ಥಾನ ಪಡೆದ ಈ ಅಪಾಯಕಾರಿ ಬ್ಯಾಟ್ಸ್’ಮನ್
ಪಂದ್ಯ ಮುಗಿದ ನಂತರ ANI ಜೊತೆ ಮಾತನಾಡಿದ ಜೂಹ್ಲಿ ಚಾವ್ಲಾ, “ಇದೇ ರೀತಿ ಎಲ್ಲಾ ಪಂದ್ಯಗಳನ್ನು ಗೆದ್ದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಫೈನಲ್ ಪ್ರವೇಶಿಸಲಿ. ಕೆಕೆಆರ್ ತಂಡದ ಪ್ರದರ್ಶನ ಕಂಡು ನನಗೆ ತುಂಬಾ ಖುಷಿಯಾಗಿದೆ. ಎಲ್ಲಾ ಪಂದ್ಯಗಳು ಇದೇ ರೀತಿ ನಡೆಯುವ ಭರವಸೆಯಿದೆ. ಅದೇ ರೀತಿ ಆಗಲಿ ಅಂತಾ ಪ್ರಾರ್ಥನೆ ಮಾಡುತ್ತೇನೆ” ಎಂದು ಹೇಳಿದರು.
ಈ ಪಂದ್ಯದಲ್ಲಿ ಎರಡೂ ತಂಡಗಳು ತಲಾ ಒಂದೊಂದು ಬದಲಾವಣೆಯೊಂದಿಗೆ ಮೈದಾನಕ್ಕಿಳಿದಿತ್ತು. ಸುಯ್ಯಾಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್) ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್’ನ ಪ್ಲೇಯಿಂಗ್ ಹನ್ನೊಂದರಲ್ಲಿ ಸೇರಿಸಲಾಗಿತ್ತು. ಚೊಚ್ಚಲ ಪಂದ್ಯದಲ್ಲಿ ಅದ್ಭುತವಾಗಿ ಆಟವಾಡಿದ ಸುಯೇಶ್ 3 ವಿಕೆಟ್ ಕಬಳಿಸಿದ್ದಾರೆ. ಕಳೆದ ದಿನ ಕೊಲ್ಕತ್ತಾ ತಂಡದ ಬೌಲಿಂಗ್ ಗೆ ಬೆಂಗಳೂರು ತಂಡ ಸಂಪೂರ್ಣವಾಗಿ ಕಂಗಾಲಾಗಿತ್ತು.
ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿತ್ತು:
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್ವೆಲ್, ಮೈಕಲ್ ಬ್ರೇಸ್ವೆಲ್, ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್
ಇದನ್ನೂ ಓದಿ: WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್’ನಲ್ಲಿ ಶ್ರೇಯಸ್ ಅಯ್ಯರ್ ಬದಲಿಗೆ ಸ್ಥಾನ ಪಡೆದ ಈ ಅಪಾಯಕಾರಿ ಬ್ಯಾಟ್ಸ್’ಮನ್
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಮನದೀಪ್ ಸಿಂಗ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ಸುಯೇಶ್ ಶರ್ಮಾ, ಟಿಮ್ ಸೌದಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ,
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.