Rohit Shamr Records: ಐಪಿಎಲ್ 2023 ರ 16 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಕೊನೆಯ ಎಸೆತದವರೆಗೂ ನಡೆದ ಈ ಪಂದ್ಯದಲ್ಲಿ ಮುಂಬೈ ತಂಡವು ದೆಹಲಿಯನ್ನು 6 ವಿಕೆಟ್‌’ಗಳಿಂದ ಸೋಲಿಸಿತು. ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಡೆಲ್ಲಿ ತಂಡ ಬ್ಯಾಟಿಂಗ್ ವೇಳೆ 19.5 ಓವರ್‌ಗಳಲ್ಲಿ 172 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತ್ಯುತ್ತರವಾಗಿ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಜಯ ಸಾಧಿಸಿತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: KGF ಜೋಡಿಯ ಸ್ಪೋಟಕ ಬ್ಯಾಟಿಂಗ್ ವ್ಯರ್ಥ: ಬೃಹತ್ ಗುರಿ ತಲುಪಿ ‘ಸೂಪರ್’ ಗೆಲುವು ಸಾಧಿಸಿದ ಲಕ್ನೋ


ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅರ್ಧಶತಕ ಗಳಿಸಿದ ತಕ್ಷಣ, ಅವರು ವಿರಾಟ್ ಕೊಹ್ಲಿಯ ದೊಡ್ಡ ದಾಖಲೆಯನ್ನು ಹಿಂದಿಕ್ಕಿದ್ದಾರೆ. ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಐಪಿಎಲ್‌ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಈ ವಿಚಾರದಲ್ಲಿ ರೋಹಿತ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ ಎನ್ನಬಹುದು. ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 925 ರನ್ ಗಳಿಸಿದ್ದಾರೆ. ಆದರೆ ಇದೀಗ ರೋಹಿತ್ ಶರ್ಮಾ 970 ರನ್ ಗಳಿಸಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ.


173 ರನ್‌’ಗಳ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಉತ್ತಮ ಆರಂಭ ಪಡೆದರು. ಇಬ್ಬರೂ ಮೊದಲ ವಿಕೆಟ್‌’ಗೆ 71 ರನ್ ಸೇರಿಸಿದರು. ಇದಾದ ಬಳಿಕ ಇಶಾನ್ ಕಿಶನ್ 31 ರನ್ ಗಳಿಸಿ ರನೌಟ್ ಆದರು. ಆದರೆ, ರೋಹಿತ್ ಶರ್ಮಾ ಗಟ್ಟಿಯಾಗಿ ನಿಂತು ಅರ್ಧಶತಕ ಬಾರಿಸಿದರು. ರೋಹಿತ್ 45 ಎಸೆತಗಳಲ್ಲಿ 65 ರನ್ ಗಳಿಸಿದರು. ಇದಲ್ಲದೇ ತಿಲಕ್ ವರ್ಮಾ 29 ಎಸೆತಗಳಲ್ಲಿ 41 ರನ್ ಗಳಿಸಿದರು. ಕೊನೆಯ ಓವರ್ ನಲ್ಲಿ ಬ್ಯಾಟಿಂಗ್ ಗೆ ಬಂದ ಕ್ಯಾಮರೂನ್ ಗ್ರೀನ್ 8 ಎಸೆತಗಳಲ್ಲಿ ಅಜೇಯ 17 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ದೆಹಲಿ ಪರ ವೇಗಿ ಮುಕೇಶ್ ಕುಮಾರ್ 2 ವಿಕೆಟ್ ಪಡೆದರೆ, ಮುಸ್ತಾಫಿಜುರ್ ರೆಹಮಾನ್ 1 ವಿಕೆಟ್ ಪಡೆದರು.


ಇದನ್ನೂ ಓದಿ: Bollywood: ಒಬ್ಬರ ಜೊತೆ ಡೇಟಿಂಗ್ ಮಾಡಿ, ಮತ್ತೊಬ್ಬರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್’ನ ನಟಿಯರಿವರು


ಡೆಲ್ಲಿ ತಂಡ ಆಲೌಟ್:


ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡ 19.4 ಓವರ್‌’ಗಳಲ್ಲಿ 172 ರನ್‌’ಗಳಿಗೆ ಆಲೌಟ್ ಆಯಿತು. ಮುಂಬೈ ಪರ ಜೇಸನ್ ಬೆಹ್ರೆನ್‌ಡಾರ್ಫ್ ಮತ್ತು ಪಿಯೂಷ್ ಚಾವ್ಲಾ ಹೆಚ್ಚು ವಿಕೆಟ್ ಪಡೆದರು. ಇಬ್ಬರೂ ತಲಾ 3 ವಿಕೆಟ್ ಪಡೆದರು. ಇದರೊಂದಿಗೆ ರಿಲೆ ಮೆರೆಡಿತ್ 2 ವಿಕೆಟ್ ಪಡೆದರೆ, ಹೃತಿಕ್ ಶಾಕಿನ್ 1 ವಿಕೆಟ್ ಪಡೆದರು. ಆಲ್ ರೌಂಡರ್ ಅಕ್ಷರ್ ಪಟೇಲ್ ದೆಹಲಿ ಪರ ಅತಿ ಹೆಚ್ಚು ರನ್ ಗಳಿಸಿದರು. ಅಕ್ಷರ್ ಪಟೇಲ್ 25 ಎಸೆತಗಳಲ್ಲಿ 54 ರನ್ ಗಳಿಸಿದರು. ಇದಲ್ಲದೇ ನಾಯಕ ಡೇವಿಡ್ ವಾರ್ನರ್ ಕೂಡ 51 ರನ್ ಗಳಿಸಿ ಅರ್ಧಶತಕ ಬಾರಿಸಿದರು. ಮನೀಶ್ ಪಾಂಡೆ ಕೂಡ 26 ರನ್ ಕೊಡುಗೆ ನೀಡಿದರು.


 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.