ಜೈಪುರ: ಇಲ್ಲಿನ ಸವಾಯಿ ಮ್ಯಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ನಾಲ್ಕು ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ರಾಜಸ್ತಾನ್ ರಾಯಲ್ಸ್ ತಂಡವು ಕೇವಲ ಎರಡು ವಿಕೆಟ್ ನಷ್ಟಕ್ಕೆ 20 ಓವರ್ ಗಳಲ್ಲಿ 214 ರನ್ ಗಳನ್ನು ಗಳಿಸಿತು.ರಾಜಸ್ತಾನ್ ರಾಯಲ್ಸ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಜೋಸ್ ಬಟ್ಲರ್ ಕೇವಲ 59 ಎಸೆತಗಳಲ್ಲಿ ಹತ್ತು ಬೌಂಡರಿ ನಾಲ್ಕು ಸಿಕ್ಸರ್ ಗಳ ಮೂಲಕ 95 ರನ್ ಗಳಿಸಿದರೆ ಇನ್ನೊಂದೆಡೆಗೆ ಸಂಜು ಸ್ಯಾಮ್ಸನ್ ಕೇವಲ 38 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಐದು ಸಿಕ್ಸರ್ ಗಳ ಮೂಲಕ 66 ರನ್ ಗಳಿಸಿದರು.ಇನ್ನೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 18 ಎಸೆತಗಳಲ್ಲಿ ಐದು ಬೌಂಡರಿ ಎರಡು ಸಿಕ್ಸರ್ ಗಳ ನೆರವಿನಿಂದ 35 ರನ್ ಗಳಿಸಿದರು.
WHAT. A. GAME 😱😱
Abdul Samad wins it for the @SunRisers as he hits a maximum off the final delivery. #SRH win by 4 wickets.
Scorecard - https://t.co/1EMWKvcgh9 #TATAIPL #RRvSRH #IPL2023 pic.twitter.com/yh0WVMEbOz
— IndianPremierLeague (@IPL) May 7, 2023
ರಾಜಸ್ತಾನ್ ರಾಯಲ್ಸ್ ತಂಡವು ನೀಡಿದ 215 ರನ್ ಗಳ ಬೃಹತ್ ಗೆಲುವಿನ ಗುರಿಯನ್ನು ಬೆನ್ನತ್ತಿದ ಸನ್ ರೈಸರ್ಸ್ ಹೈದರಾಬಾದ್ ಅಭಿಷೇಕ್ ಶರ್ಮಾ ಅವರ 55 ಹಾಗೂ ರಾಹುಲ್ ತ್ರಿಪಾಠಿ ಅವರ 47 ರನ್ ಗಳ ನೆರವಿನಿಂದಾಗಿ 20 ಓವರ್ ಗಳಲ್ಲಿ ಆರು ವಿಕೆಟ್ ಗಳನ್ನು ಕಳೆದುಕೊಂಡು 217 ಗಳಿಸುವುದರ ಮೂಲಕ ಗೆಲುವಿನ ನಗೆ ಬೀರಿತು.
Abhishek Sharma provided a perfect start to @SunRisers's memorable chase and he becomes our Top Performer from the second innings of the #RRvSRH contest in the #TATAIPL.
A look at his batting summary. pic.twitter.com/kOxcLAvUEP
— IndianPremierLeague (@IPL) May 7, 2023
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.