IPLನ ಈ ನಿಯಮವು ಆಲ್’ರೌಂಡರ್’ಗಳ ವೃತ್ತಿಜೀವನವನ್ನೇ ಕೊನೆಗೊಳಿಸುತ್ತೆ! ಸ್ಟಾರ್ ಆಟಗಾರನ ಶಾಕಿಂಗ್ ಹೇಳಿಕೆ
Venkatesh Iyer, IPL 2023: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಕುರಿತು ಮಾತನಾಡಿದ ವೆಂಕಟೇಶ್, ‘ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಇಂಪ್ಯಾಕ್ಟ್ ಪ್ಲೇಯರ್ ನಿಯಮದಿಂದಾಗಿ ಆಲ್ ರೌಂಡರ್ ಓವರ್’ಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದೆ’ ಎಂದರು. ವೆಂಕಟೇಶ್ ಆಲ್ ರೌಂಡರ್ ಆಗಿದ್ದರೂ ಸಹ ಇದುವರೆಗೆ ಒಂದೇ ಒಂದು ಪಂದ್ಯದಲ್ಲಿ ಬೌಲಿಂಗ್ ಮಾಡಿಲ್ಲ.
Venkatesh Iyer, IPL 2023: ಐಪಿಎಲ್ 2023ರ ನಡುವೆ, ಕೋಲ್ಕತ್ತಾ ನೈಟ್ ರೈಡರ್ಸ್ ಆರಂಭಿಕ ಆಟಗಾರ ವೆಂಕಟೇಶ್ ಅಯ್ಯರ್ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಐಪಿಎಲ್’ನ ಕೆಲ ನಿಯಮದ ಬಗ್ಗೆ ಮಾತನಾಡಿದ ಅವರು, ಕ್ರಿಕೆಟ್’ನಲ್ಲಿ ಆಲ್’ರೌಂಡರ್’ನ ಪ್ರಾಮುಖ್ಯತೆ ಕಡಿಮೆಯಾಗಿದೆ ಎಂದನಿಸುತ್ತಿದೆ. ಈ ನಿಯಮವನ್ನು ಈ ಸೀಸನ್’ನಲ್ಲಿ ಅಳವಡಿಸಲಾಗಿದೆ” ಎಂದು ಹೇಳಿದ್ದಾರೆ.
ವೆಂಕಟೇಶ್ ಅಯ್ಯರ್ ಹೇಳಿಕೆ:
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿನ ಇಂಪ್ಯಾಕ್ಟ್ ಪ್ಲೇಯರ್ ನಿಯಮದಿಂದಾಗಿ ಆಲ್ ರೌಂಡರ್ ಬೌಲಿಂಗ್ ಮಾಡಲು ಕಡಿಮೆ ಅವಕಾಶಗಳನ್ನು ಪಡೆಯುತ್ತಿದ್ದಾರೆ ಎಂದು ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟ್ಸ್‌ಮನ್ ವೆಂಕಟೇಶ್ ಅಯ್ಯರ್ ಹೇಳಿದ್ದಾರೆ. ಪಾದದ ಶಸ್ತ್ರಚಿಕಿತ್ಸೆಯ ನಂತರ ವಾಪಸಾದ ವೆಂಕಟೇಶ್ ಅಯ್ಯರ್ ಗುಜರಾತ್ ಟೈಟಾನ್ಸ್ ವಿರುದ್ಧ 83 ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ 104 ರನ್ ಬಾರಿಸಿದ್ದಾರೆ. ಆದರೆ ಈ ಎಲ್ಲಾ ಪಂದ್ಯಗಳಲ್ಲೂ ಅವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಮೈದಾನಕ್ಕೆ ಇಳಿದಿದ್ದರು.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಕುರಿತು ಮಾತನಾಡಿದ ವೆಂಕಟೇಶ್, ‘ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಇಂಪ್ಯಾಕ್ಟ್ ಪ್ಲೇಯರ್ ನಿಯಮದಿಂದಾಗಿ ಆಲ್ ರೌಂಡರ್ ಓವರ್’ಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದೆ’ ಎಂದರು. ವೆಂಕಟೇಶ್ ಆಲ್ ರೌಂಡರ್ ಆಗಿದ್ದರೂ ಸಹ ಇದುವರೆಗೆ ಒಂದೇ ಒಂದು ಪಂದ್ಯದಲ್ಲಿ ಬೌಲಿಂಗ್ ಮಾಡಿಲ್ಲ.
“ನಿಸ್ಸಂಶಯವಾಗಿ ತಂಡವು ಆರನೇ ಬೌಲರ್ ಆಗಿ ಸ್ಪೆಷಲಿಸ್ಟ್ ಬೌಲರ್ ಅನ್ನು ಹೊಂದಿದ್ದರೆ, ಅವರು ತಮ್ಮ ಆಲ್ರೌಂಡರ್ ಅನ್ನು ಪ್ರಯತ್ನಿಸಲು ಬಯಸುವುದಿಲ್ಲ. ಇದು ಇಂಪ್ಯಾಕ್ಟ್ ಪ್ಲೇಯರ್’ನ ಪರಿಣಾಮವಾಗಿದೆ. ಇದು ಆಲ್‌ರೌಂಡರ್‌ನ ಉಪಯುಕ್ತತೆಯನ್ನು ಕಡಿಮೆ ಮಾಡಿದೆ” ಎಂದು ವೆಂಕಟೇಶ್ ಅರ್ಥಮಾಡಿಕೊಂಡಿದ್ದಾರೆ.
ಇದನ್ನೂ ಓದಿ: IPL 2023: ವಿಶ್ವದ ಈ ದಿಗ್ಗಜ ಆಟಗಾರನಿಗೆ ಅವಕಾಶ ಕೊಡುತ್ತಿಲ್ಲ ಕೆಎಲ್ ರಾಹುಲ್! ಕೊನೆಗೊಳಿಸುತ್ತಾರಾ ವೃತ್ತಿಜೀವನ?
ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಚಹಾಲ್ ಬೆಂಬಲ!
ಇನ್ನೊಂದೆಡೆ ರಾಜಸ್ಥಾನ್ ರಾಯಲ್ಸ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್, ತಮ್ಮ ತಂಡ ಇಂಪ್ಯಾಕ್ಟ್ ಪ್ಲೇಯರ್ ನಿಯಮದಿಂದ ಪ್ರಯೋಜನ ಪಡೆದಿದೆ ಎಂದು ಹೇಳಿದ್ದಾರೆ. ರಾಯಲ್ಸ್ ತಂಡ ಆಡಿದ ಮೊದಲ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸಿದೆ. ಐದು ಪಂದ್ಯಗಳಲ್ಲಿ ಎರಡು ಬಾರಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಚಹಾಲ್ ಆಡಿದ್ದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.