ಪಂದ್ಯಕ್ಕೂ ಮುನ್ನ ಪುಟ್ಟ ಅಭಿಮಾನಿಗೆ ಆಟೋಗ್ರಾಫ್ ಕೊಟ್ಟ Virat Kohli: ಆ ಕಂದಮ್ಮನ ಖುಷಿಯನ್ನೊಮ್ಮೆ ನೋಡಿ

Virat Kohli Autograph: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಆರ್‌ಸಿಬಿ ಆರಂಭಿಕ ಆಟಗಾರನಾಗಿ ಪಂದ್ಯವನ್ನಾಡಿದ ಕೊಹ್ಲಿ 49 ಎಸೆತಗಳಲ್ಲಿ 82 ರನ್ ಗಳಿಸಿ ಉತ್ತಮ ಫಾರ್ಮ್‌ ಕಾಪಾಡಿಕೊಂಡಿದ್ದರು.

Written by - Bhavishya Shetty | Last Updated : Apr 6, 2023, 09:55 PM IST
    • ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಪಂದ್ಯ
    • ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಪುಟ್ಟ ಅಭಿಮಾನಿಗೆ ಆಟೋಗ್ರಾಫ್ ನೀಡುತ್ತಿರುವುದು ಕಂಡುಬಂದಿದೆ
    • ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
ಪಂದ್ಯಕ್ಕೂ ಮುನ್ನ ಪುಟ್ಟ ಅಭಿಮಾನಿಗೆ ಆಟೋಗ್ರಾಫ್ ಕೊಟ್ಟ Virat Kohli: ಆ ಕಂದಮ್ಮನ ಖುಷಿಯನ್ನೊಮ್ಮೆ ನೋಡಿ title=
Virat Kohli Little Fan

Virat Kohli Autograph: ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಪುಟ್ಟ ಅಭಿಮಾನಿಗೆ ಆಟೋಗ್ರಾಫ್ ನೀಡುತ್ತಿರುವುದು ಕಂಡುಬಂದಿದೆ

ಪ್ರಸ್ತುತ ಕೊಲ್ಕತ್ತಾದ ಈರ್ಡನ್ಸ್‌ ಗಾರ್ಡನ್ಸ್’ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಪಂದ್ಯ ನಡೆಯುತ್ತಿದೆ.

ಇದನ್ನೂ ಓದಿ: IPL ಮಧ್ಯೆಯೇ ಟೀಂ ಇಂಡಿಯಾದ ಈ ಸ್ಫೋಟಕ ಆರಂಭಿಕ ಆಟಗಾರ ಮೇಲೆ ಕೇಸು ದಾಖಲು!

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಆರ್‌ಸಿಬಿ ಆರಂಭಿಕ ಆಟಗಾರನಾಗಿ ಪಂದ್ಯವನ್ನಾಡಿದ ಕೊಹ್ಲಿ 49 ಎಸೆತಗಳಲ್ಲಿ 82 ರನ್ ಗಳಿಸಿ ಉತ್ತಮ ಫಾರ್ಮ್‌ ಕಾಪಾಡಿಕೊಂಡಿದ್ದರು.

ಇನ್ನು ವೈರಲ್ ಫೋಟೋದಲ್ಲಿ, ವಿರಾಟ್ ಕೊಹ್ಲಿ ತಮ್ಮ ಯುವ ಅಭಿಮಾನಿಗೆ ಆಟೋಗ್ರಾಫ್ ನೀಡುತ್ತಿರುವುದು ಕಂಡುಬಂದಿದೆ. ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇಲ್ಲಿದೆ ನೋಡಿ ಆ ಫೋಟೋ:

 

ಮತ್ತೊಂದೆಡೆ, ಮೊಹಾಲಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡಕ್ವರ್ತ್-ಲೂಯಿಸ್ ವಿಧಾನದ ಮೂಲಕ ಕೋಲ್ಕತ್ತಾ ಏಳು ರನ್’ಗಳ ಸೋಲಿನೊಂದಿಗೆ ತನ್ನ ಐಪಿಎಲ್ ಅಭಿಯಾನವನ್ನು ಪ್ರಾರಂಭಿಸಿತ್ತು. ಇಂದು ನಡೆದ ಪಂದ್ಯದಲ್ಲಿ ಭರ್ಜರಿಯಾಗಿ ಆಟವಾಡಿದ ಕೆಕೆಆರ್ 7 ವಿಕೆಟ್ ನಷ್ಟಕ್ಕೆ 204 ರನ್ ಕಲೆ ಹಾಕಿದೆ. ಸದ್ಯ ಸ್ಟ್ಯಾಂಡ್ ಇನ್ ನಾಯಕ ನಿತೀಶ್ ರಾಣಾ ಇಂದಿನ ಪಂದ್ಯದ ನಾಯಕತ್ವ ವಹಿಸಿದ್ದಾರೆ.

ಎರಡೂ ತಂಡಗಳ ಪ್ಲೇಯಿಂಗ್-XI

ಕೋಲ್ಕತ್ತಾ ನೈಟ್ ರೈಡರ್ಸ್: ಮನದೀಪ್ ಸಿಂಗ್, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ

ಇದನ್ನೂ ಓದಿ: KKR vs RCB ಟಾಸಿಂಗ್ ವೇಳೆ ನಡೆಯಿತೇ ಮೋಸ? ರೆಫ್ರಿ ನಿರ್ಧಾರಕ್ಕೆ ಕೋಪಗೊಂಡ KKR ನಿತೀಶ್ ರಾಣಾ ಮೈದಾನದಲ್ಲಿ ಮಾಡಿದ್ದೇನು!

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶ್ ದೀಪ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News