Virat Kohli IPl Records : ವಿರಾಟ್ ಕೊಹ್ಲಿ ಆರ್‌ಸಿಬಿಯ ಸ್ಟಾರ್ ಬ್ಯಾಟ್ಸ್‌ಮನ್. ಐಪಿಎಲ್ ನಲ್ಲಿ ಆರ್‌ಸಿಬಿ ಪರ ಆದಿ ರನ್ ಗಳ ಮಳೆಗರೆದಿದ್ದಾರೆ.  ವಿರಾಟ್ ಕೊಹ್ಲಿ 9 ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿದ್ದರು. ಆದರೆ ತಂಡಕ್ಕೆ ಐಪಿಎಲ್ ಟ್ರೋಫಿ ಗೆಲ್ಲಿಸಿ ಕೊಡುವಲ್ಲಿ ಮಾತ್ರ ವಿಫಲರಾದರು. ವಿರಾಟ್ ಕ್ರಿಕೆಟ್ ಇತಿಹಾಸದಲ್ಲಿ ಹಲವು ದೊಡ್ಡ ದಾಖಲೆಗಳನ್ನು ಬರೆದಿದ್ದಾರೆ.  ಇದೀಗ ವಿರಾಟ್ ಕೊಹ್ಲಿ ಮತ್ತೊಂದು ದೊಡ್ಡ ದಾಖಲೆಯ ಹೊಸ್ತಿಲಲ್ಲಿದ್ದಾರೆ. 


COMMERCIAL BREAK
SCROLL TO CONTINUE READING

ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಆಗಲಿದ್ದಾರೆ ವಿರಾಟ್ :
ಐಪಿಎಲ್‌ನಲ್ಲಿ 223 ಪಂದ್ಯಗಳನ್ನು ಆಡಿರುವ ಕೊಹ್ಲಿ ಇದುವರೆಗೆ 6624 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಮುಂಬರುವ ಐಪಿಎಲ್ ಸೀಸನ್‌ನಲ್ಲಿ ಕೊಹ್ಲಿ ಇನ್ನು  376 ರನ್ ಗಳಿಸಿದರೆ, ಈ ಟೂರ್ನಿಯಲ್ಲಿ 7000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಅವರ ಈಗಿನ ಫಾರ್ಮ್ ನೋಡಿದರೆ ಈ ದಾಖಲೆಯನ್ನು ಕೊಹ್ಲಿ  ಸುಲಭವಾಗಿ ತಲುಪುವಂತಿದೆ. 


ಇದನ್ನೂ ಓದಿ : IPL 2023: ಈ ಬಾರಿ ಐಪಿಎಲ್ ಟ್ರೋಫಿ ಗೆಲ್ಲುವುದು ಇದೇ ತಂಡ: ಸಾಕ್ಷಿ ಹೇಳುತ್ತಿದೆ ಈ 4 ಕಾರಣಗಳು


2016ರಲ್ಲಿ  ಬೌಲರ್ ಗಳ ಬೆವರಿಳಿಸಿದ್ದ ವಿರಾಟ್ : 
2016 ರ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಆರ್‌ಸಿಬಿ ಪರ ಆಡುವಾಗ ಅನೇಕ ದೊಡ್ಡ ದಾಖಲೆಗಳನ್ನು ಮಾಡಿದ್ದರು. ಈ ಋತುವಿನಲ್ಲಿ ವಿರಾಟ್  4 ಶತಕಗಳನ್ನು ಬಾರಿಸಿದ್ದರು. ಅಷ್ಟೇ ಅಲ್ಲ, ಐಪಿಎಲ್ ಇತಿಹಾಸದಲ್ಲಿ ಒಂದೇ ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸುವ ಮೂಲಕ ಈ ದಾಖಲೆಯನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದರು. ವಿರಾಟ್ ಈ ಋತುವಿನಲ್ಲಿ 973 ರನ್ ಗಳಿಸಿದ್ದರು. ಇದುವರೆಗೆ ಯಾರೂ ಈ ದಾಖಲೆಯನ್ನು ಮುರಿಯುವುದು ಸಾಧ್ಯವಾಗಲಿಲ್ಲ. 


ಐಪಿಎಲ್‌ನಲ್ಲಿನ ಅಂಕಿ ಅಂಶಗಳು ಹೀಗಿವೆ  :
ವಿರಾಟ್ ಕೊಹ್ಲಿ ಅವರ ಐಪಿಎಲ್ ಅಂಕಿಅಂಶಗಳನ್ನು ನೋಡುವುದಾದರೆ,  ಅವರು ಐಪಿಎಲ್‌ನಲ್ಲಿ 223 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 6,624 ರನ್ ಗಳಿಸಿದ್ದಾರೆ. ಇದರೊಂದಿಗೆ ಒಂದೇ ಪಂದ್ಯಗಳಲ್ಲಿ 5 ಶತಕ ಮತ್ತು 44 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಅವರ ಗರಿಷ್ಠ ಸ್ಕೋರ್ 113 ರನ್. 


ಇದನ್ನೂ ಓದಿ : Shah Rukh Khan-Virat Kohli: ಶಾರುಖ್-ವಿರಾಟ್ ಫ್ಯಾನ್ಸ್ ನಡುವೆ ಮಹಾಯುದ್ಧ: ಆ ಒಂದು ಪ್ರಶ್ನೆ ಕೇಳಿದಕ್ಕೆ ಹೊತ್ತಿ ಉರಿಯಿತು ಇಂಟರ್ನೆಟ್!


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.