ICC ODI World Cup 2023: ಈ ವರ್ಷ ಅಕ್ಟೋಬರ್-ನವೆಂಬರ್‌ ನಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಆದರೆ ಈ ಐಸಿಸಿ ಟೂರ್ನಿಯಲ್ಲಿ ಆಡಲು ಪಾಕಿಸ್ತಾನ ಕ್ರಿಕೆಟ್ ತಂಡ ಭಾರತಕ್ಕೆ ಬರಲಿದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.


COMMERCIAL BREAK
SCROLL TO CONTINUE READING

ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಚೆನ್ನಾಗಿಲ್ಲ ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಇದೇ ಕಾರಣದಿಂದ ಕಳೆದ ಹಲವು ವರ್ಷಗಳಿಂದ ಎರಡೂ ತಂಡಗಳು ಯಾವುದೇ ದ್ವಿಪಕ್ಷೀಯ ಸರಣಿಗಳನ್ನು ಆಡಿಲ್ಲ. ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ, ಪಾಕಿಸ್ತಾನ ತಂಡ ಭಾರತಕ್ಕೆ ಬರುವುದಿಲ್ಲ. ಹೀಗಿರುವಾಗ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಈ ವಿಚಾರವಾಗಿ ದೊಡ್ಡ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಎಚ್ಚರಿಕೆ...! ಒಂದು ಸೊಳ್ಳೆ ಬತ್ತಿ ಹಚ್ಚುವುದು 100 ಸಿಗರೇಟ್ ಸೇದುವುದಕ್ಕೆ ಸಮ..


2023ರ ವಿಶ್ವಕಪ್ ಆಡಲು ಪಾಕಿಸ್ತಾನ ತಂಡ ಭಾರತಕ್ಕೆ ಬರಲಿದೆಯೇ?


ಭಾರತ ಏಕದಿನ ವಿಶ್ವಕಪ್‌ ಗೆ ಆತಿಥ್ಯ ವಹಿಸುತ್ತಿದೆ. ಇದೇ ವೇಳೆ ಪಾಕಿಸ್ತಾನ ತಂಡ ಭಾರತಕ್ಕೆ ಬರಬಹುದು ಎಂಬ ಸುದ್ದಿ ಹೊರಬಿದ್ದಿತ್ತು. ಈ ಬಗ್ಗೆ ಸ್ವತಃ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಮಾಹಿತಿಯನ್ನು ನೀಡಿದ್ದಾರೆ. ಶಾಂಘೈ ಕಾರ್ಪೊರೇಷನ್ ಆರ್ಗನೈಸೇಶನ್ (SCC) ನಲ್ಲಿ ಭಾಗವಹಿಸಲು ಬಿಲಾವಲ್ ಭುಟ್ಟೊ ಭಾರತಕ್ಕೆ ಬಂದಿದ್ದಾರೆ. ಪಣಜಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಭುಟ್ಟೊ ಅವರಿಗೆ “ವಿಶ್ವಕಪ್‌ ಗಾಗಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಭಾರತಕ್ಕೆ ಆಗಮಿಸುತ್ತದೆಯೇ?” ಎಂಬ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಉಭಯ ದೇಶಗಳ ನಡುವಿನ ಸಂಬಂಧದಿಂದ ಕ್ರೀಡೆಗೆ ಧಕ್ಕೆಯಾಗಬಾರದು. ವಿಶ್ವಕಪ್ ವಿಚಾರದಲ್ಲೂ ಇದೇ ನೀತಿಯಲ್ಲಿ ಪಾಲಿಸಲು ಪ್ರಯತ್ನಿಸುವುದಾಗಿ ಹೇಳಿದರು. ಜೊತೆಗೆ ಕ್ರೀಡೆಯಲ್ಲಿ ರಾಜಕೀಯ ಬೆರೆಸಬಾರದು ಎಂದರು.


ಇನ್ನೊಂದೆಡೆ ಏಷ್ಯಾ ಕಪ್ 2023 ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿದೆ. ಈ ಪಂದ್ಯಾವಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಡುವೆ ವಿವಾದ ಕಾಣಿಸಿಕೊಂಡಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥ ಜಯ್ ಶಾ ಅವರು ಬಿಸಿಸಿಐ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಜೈ ಶಾ ಈಗಾಗಲೇ ಹೇಳಿದ್ದರು. ಇಂತಹ ಪರಿಸ್ಥಿತಿಯಲ್ಲಿ ಈ ಟೂರ್ನಿ ಎಲ್ಲಿ ನಡೆಯಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.


2008ರಿಂದ ಭಾರತ ತಂಡ ಪಾಕಿಸ್ತಾನದ ವಿರುದ್ಧ ಆಡಲು ಪಾಕ್ ನೆಲಕ್ಕೆ ಹೋಗಿಲ್ಲ. 2008ರ ಏಷ್ಯಾಕಪ್‌ ಗಾಗಿ ಭಾರತ ತಂಡ ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ತೆರಳಿತ್ತು. ಎರಡೂ ನೆರೆಯ ರಾಷ್ಟ್ರಗಳು ಕೊನೆಯದಾಗಿ 2012ರಲ್ಲಿ ಸೀಮಿತ ಓವರ್‌ ಗಳ ದ್ವಿಪಕ್ಷೀಯ ಸರಣಿಯನ್ನು ಆಡಿದ್ದವು. ಪಾಕಿಸ್ತಾನವು ಮೂರು T20 ಅಂತರಾಷ್ಟ್ರೀಯ ಪಂದ್ಯಗಳಿಗಾಗಿ ಮತ್ತು ಅನೇಕ ODIಗಳಿಗಾಗಿ ಭಾರತಕ್ಕೆ ಆಗಮಿಸಿದೆ ಎಂಬುದನ್ನು ಹೇಳಲೇಬೇಕು. ಕಳೆದ ಕೆಲವು ವರ್ಷಗಳಲ್ಲಿ ಇಂಗ್ಲೆಂಡ್, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ಪಾಕಿಸ್ತಾನ ಪ್ರವಾಸ ಕೈಗೊಂಡಿವೆ. ಹೀಗಿರುವಾಗ ಟೀಂ ಇಂಡಿಯಾ ಕೂಡ ಪಾಕಿಸ್ತಾನಕ್ಕೆ ಭೇಟಿ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು. ಇವೆಲ್ಲದಕ್ಕೂ ಬಿಸಿಸಿಐ ಉತ್ತರ ನೀಡಬೇಕಾಗಿದೆ.


ಇಲ್ಲಿ ನಡೆಯಲಿದೆ ಇಂಡೋ-ಪಾಕ್ ಕದನ:


ಮತ್ತೊಂದೆಡೆ ಅಂದುಕೊಂಡಂತೆ ಎಲ್ಲಾ ನಡೆದರೆ, ಅಕ್ಟೋಬರ್-ನವೆಂಬರ್‌ ತಿಂಗಳಿನಲ್ಲಿ ನಡೆಯಲಿರುವ ICC ಏಕದಿನ ವಿಶ್ವಕಪ್ ಪಂದ್ಯವನ್ನು ಅಹಮದಾಬಾದ್‌ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ಪ್ರೊಫೈಲ್ ಪಂದ್ಯವನ್ನು ಭಾರತದ ನೆಲದಲ್ಲಿ ನಡೆಸಲು ತೀರ್ಮಾನಿಸಲಾಗಿದೆಯಂತೆ.


ಇದನ್ನೂ ಓದಿ: Karnataka Election 2023: ನಮ್ಮ ಹಿರಿಯ ನಾಯಕರು ಕಾಂಗ್ರೆಸ್ ಸೇರಿದ್ದು ದುರ್ದೈವ - ಸಿಎಂ ಬೊಮ್ಮಾಯಿ‌


ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಹಮದಾಬಾದ್ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯವನ್ನು ಆಯೋಜಿಸಲು ನಿರ್ಧರಿಸಿದ್ದು, ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಪಂದ್ಯ ವೀಕ್ಷಣೆ ಮಾಡಲು ದೇಶ-ವಿದೇಶದಿಂದ ಬರುವ ಕಾರಣದಿಂದ ಈ ಸ್ಟೇಡಿಯಂನ್ನು ಆಯ್ದುಕೊಳ್ಳಲಾಗಿದೆ. 1 ಲಕ್ಷ ಆಸನ ಸಾಮರ್ಥ್ಯವಿರುವ ನರೇಂದ್ರ ಮೋದಿ ಸ್ಟೇಡಿಯಂ ದೇಶದ ಅತಿ ದೊಡ್ಡ ಕ್ರೀಡಾಂಗಣವಾಗಿದೆ ಎಂಬುದನ್ನು ಇಲ್ಲಿ ಉಲ್ಲೇಖಿಸಲೇಬೇಕು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.