IND vs PAK: ಭಾರತಕ್ಕೆ ಮತ್ತೆ ಪಾಕಿಸ್ತಾನ ಎಂಟ್ರಿ! ಮಹಾ ಸುಳಿವು ನೀಡಿದ ಪಾಕ್ ನಾಯಕ ಬಾಬರ್ ಅಜಂ

Babar Azam Statement: ಏಷ್ಯಾಕಪ್‌’ಗಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಮತ್ತು ಪಂದ್ಯವನ್ನು ತಟಸ್ಥ ಸ್ಥಳದಲ್ಲಿ ಆಡಬೇಕು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಹೇಳಿದ್ದರು. ಆದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ಸಲಹೆಯನ್ನು ಸ್ವೀಕರಿಸದೆ, 2023 ಕ್ರಿಕೆಟ್ ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಬೆದರಿಕೆ ಹಾಕಿದೆ. ಆದರೆ, ಪಾಕ್ ತಂಡದ ನಾಯಕ ಬಾಬರ್ ಅಜಮ್ ಭಾರತಕ್ಕೆ ಪ್ರವಾಸ ಕೈಗೊಳ್ಳುವ ಸುಳಿವು ನೀಡಿದ್ದಾರೆ.

Written by - Bhavishya Shetty | Last Updated : Mar 6, 2023, 03:19 PM IST
    • ಏಷ್ಯಾ ಕಪ್ ಮತ್ತು ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ನಡೆಯಲಿರುವ ಎರಡು ಪ್ರಮುಖ ಪಂದ್ಯಾವಳಿಗಳಾಗಿವೆ.
    • ಕ್ರಿಕೆಟ್ ದಿಗ್ಗಜ ದೇಶವಾದ ಭಾರತ ಮತ್ತು ಪಾಕಿಸ್ತಾನದ ಪಂದ್ಯವನ್ನು ವೀಕ್ಷಿಸಲು ಅಭಿಮಾನಿಗಳು ಕಾತರರಾಗಿದ್ದಾರೆ.
    • ಈ ಎಲ್ಲದರ ಮಧ್ಯೆ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಹೇಳಿಕೆಯೊಂದನ್ನು ನೀಡಿದ್ದಾರೆ
IND vs PAK: ಭಾರತಕ್ಕೆ ಮತ್ತೆ ಪಾಕಿಸ್ತಾನ ಎಂಟ್ರಿ! ಮಹಾ ಸುಳಿವು ನೀಡಿದ ಪಾಕ್ ನಾಯಕ ಬಾಬರ್ ಅಜಂ title=
India vs Pakistan

IND vs PAK: ಏಷ್ಯಾ ಕಪ್ ಮತ್ತು ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ನಡೆಯಲಿರುವ ಎರಡು ಪ್ರಮುಖ ಪಂದ್ಯಾವಳಿಗಳಾಗಿವೆ. ಈ ಎರಡು ಪಂದ್ಯಗಳಲ್ಲಿ ಎರಡು ಕ್ರಿಕೆಟ್ ದಿಗ್ಗಜ ದೇಶವಾದ ಭಾರತ ಮತ್ತು ಪಾಕಿಸ್ತಾನದ ಪಂದ್ಯವನ್ನು ವೀಕ್ಷಿಸಲು ಅಭಿಮಾನಿಗಳು ಕಾತರರಾಗಿದ್ದಾರೆ. ಇನ್ನು ಈ ವರ್ಷದ ಏಷ್ಯಾಕಪ್ ಪಾಕಿಸ್ತಾನದಲ್ಲಿ ನಡೆದರೆ, ವಿಶ್ವಕಪ್ ಭಾರತದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: Shani Gochar 2023 : ಶನಿಯ ಸಂಕ್ರಮಣದಿಂದ ಈ ರಾಶಿಯವರಿಗೆ ರಾಜಯೋಗ

ಈ ಎಲ್ಲದರ ಮಧ್ಯೆ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಹೇಳಿಕೆಯೊಂದನ್ನು ನೀಡಿದ್ದಾರೆ. "ನಾವು ಭಾರತದ ವಿಶ್ವಕಪ್‌ನತ್ತ ಗಮನಹರಿಸಿದ್ದೇವೆ. ಪಂದ್ಯಾವಳಿಯಲ್ಲಿ ನಾವು ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸುತ್ತೇವೆ. ನಾನು ಉತ್ತಮ ಜೊತೆಯಾಟವನ್ನು ಹೊಂದಿರುವುದರಿಂದ ನಾನು ಮೊಹಮ್ಮದ್ ರಿಜ್ವಾನ್ ಅವರೊಂದಿಗೆ ರನ್ ಗಳಿಸಲು ಪ್ರಯತ್ನಿಸುತ್ತೇನೆ. ನಾವು ಪ್ರತಿ ಇನ್ನಿಂಗ್ಸ್‌ನಲ್ಲಿ ಸ್ಕೋರ್ ಮಾಡಬೇಕು. ತಂಡವು ಇಬ್ಬರು ಆಟಗಾರರ ಮೇಲೆ ಅವಲಂಬಿತವಾಗಿದ್ದು, ತಂಡಕ್ಕಾಗಿ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಲು ಅವರು ಉತ್ಸುಕರಾಗಿದ್ದಾರೆ" ಎಂದು ಹೇಳಿದ್ದಾರೆ.

ಏಷ್ಯಾಕಪ್‌’ಗಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಮತ್ತು ಪಂದ್ಯವನ್ನು ತಟಸ್ಥ ಸ್ಥಳದಲ್ಲಿ ಆಡಬೇಕು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಹೇಳಿದ್ದರು. ಆದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ಸಲಹೆಯನ್ನು ಸ್ವೀಕರಿಸದೆ, 2023 ಕ್ರಿಕೆಟ್ ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಬೆದರಿಕೆ ಹಾಕಿದೆ. ಆದರೆ, ಪಾಕ್ ತಂಡದ ನಾಯಕ ಬಾಬರ್ ಅಜಮ್ ಭಾರತಕ್ಕೆ ಪ್ರವಾಸ ಕೈಗೊಳ್ಳುವ ಸುಳಿವು ನೀಡಿದ್ದಾರೆ. ತಮ್ಮ ತಂಡದ ಗಮನವು ಕೇವಲ ಈವೆಂಟ್‌ನಲ್ಲಿದೆ ಎಂದು ಹೇಳಿದ ಅಜಮ್ ಅವರು ಭಾರತದಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ಭಾಗವಹಿಸುವ ಸುಳಿವು ನೀಡಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜಕೀಯ ಸಂಬಂಧಗಳು ಹದಗೆಟ್ಟ ಕಾರಣ, ಎರಡೂ ತಂಡಗಳು ದ್ವಿಪಕ್ಷೀಯ ಸರಣಿಗಳನ್ನು ಆಡದೆ ಅದೆಷ್ಟೋ ವರುಷವೇ ಕಳೆದಿದೆ. ಉಭಯ ತಂಡಗಳ ನಡುವಿನ ಕೊನೆಯ ಟೆಸ್ಟ್ ಪಂದ್ಯ 2007 ರಲ್ಲಿ ಮತ್ತು ಕೊನೆಯ ದ್ವಿಪಕ್ಷೀಯ ಸರಣಿಯು 2012-13 ರಲ್ಲಿ ನಡೆದಿತ್ತು. ಏಷ್ಯಾಕಪ್ ಮತ್ತು ಕ್ರಿಕೆಟ್ ವಿಶ್ವಕಪ್ ನಲ್ಲಿ ಮಾತ್ರ ಉಭಯ ತಂಡಗಳಿಗೆ ಮುಖಾಮುಖಿಯಾಗುವ ಅವಕಾಶಗಳಿವೆ. ಈ ಟೂರ್ನಿಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ಪಾಲ್ಗೊಳ್ಳುವಿಕೆಯ ಅನಿಶ್ಚಿತತೆಯು ವಿಶ್ವಾದ್ಯಂತ ಕ್ರಿಕೆಟ್ ಅಭಿಮಾನಿಗಳಲ್ಲಿ ಆತಂಕವನ್ನು ಸೃಷ್ಟಿಸಿದೆ.

ಇದನ್ನೂ ಓದಿ: Stock Market: ಷೇರು ಮಾರುಕಟ್ಟೆಯಲ್ಲಿ ಸುಲಭವಾಗಿ ಹಣ ಗಳಿಸುವುದು ಹೇಗೆ..?

ಮುಂಬರುವ ಏಷ್ಯಾಕಪ್ ಮತ್ತು ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಭಾಗವಹಿಸುವುದು ಈಗ ಅನುಮಾನವಾಗಿದೆ. ಏಷ್ಯಾ ಕಪ್ ಅನ್ನು ತಟಸ್ಥ ಸ್ಥಳದಲ್ಲಿ ನಡೆಸುವಂತೆ ಬಿಸಿಸಿಐ ಕರೆ ನೀಡಿದ್ದರಿಂದ ಪಾಕಿಸ್ತಾನ ಕ್ರಿಕೆಟ್ ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಬೆದರಿಕೆ ಹಾಕಿದೆ. ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅವರ ಇತ್ತೀಚಿನ ಕಾಮೆಂಟ್‌ಗಳು ವಿಶ್ವಾದ್ಯಂತ ಅಭಿಮಾನಿಗಳಿಗೆ ಭರವಸೆಯನ್ನು ನೀಡುತ್ತಿವೆಯಾದರೂ, ಅನಿಶ್ಚಿತತೆ ಹಾಗೆಯೇ ಉಳಿದಿದೆ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News