ಐಪಿಎಲ್ ಹರಾಜಿಗೂ ಮುನ್ನ ಆರ್‌ಸಿಬಿ ಫ್ಯಾನ್ಸ್ಗೆ ಫುಲ್ ಖುಷ್...! ಅಂದು ಮುಂಬೈ ತಂಡವನ್ನು ಚಾಂಪಿಯನ್ ಮಾಡಿದ್ದ ಸ್ಟಾರ್ ಕ್ರಿಕೆಟಿಗ RCBಗೆ ಅಧಿಕೃತ ಎಂಟ್ರಿ
RCB IPL 2025: ಮುಂಬೈ ತಂಡವನ್ನು ರಣಜಿ ಚಾಂಪಿಯನ್ ಮಾಡಿದ್ದ ಓಂಕಾರ್ ಸಾಲ್ವಿ ಅವರನ್ನು ಬೌಲಿಂಗ್ ಕೋಚ್ ಆಗಿ ಆರ್‌ಸಿಬಿ ನೇಮಕ ಮಾಡಿದೆ. ಓಂಕಾರ್ ದೇಶೀಯ ಮಟ್ಟದಲ್ಲಿ ಬಹಳ ಖ್ಯಾತಿ ಪಡೆದಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್‌ನ ಸಹಾಯಕ ಕೋಚ್ ಆಗಿದ್ದಾರೆ.
RCB IPL 2025: IPL ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ. ಅದಕ್ಕೂ ಮುನ್ನ ಎಲ್ಲಾ ತಂಡಗಳು ತಮ್ಮ ಸಿದ್ಧತೆಗಳನ್ನು ಅಂತಿಮಗೊಳಿಸಿವೆ. ಪ್ರತಿ ಬಾರಿಯಂತೆ ಈ ಬಾರಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಸದ್ಯ ಈ ಫ್ರಾಂಚೈಸಿ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಮತ್ತು ಯಶ್ ದಯಾಳ್ ಅವರನ್ನು ಉಳಿಸಿಕೊಂಡಿದೆ. ಇನ್ನೊಂದೆಡೆ ಮೊದಲ ಐಪಿಎಲ್ ಪ್ರಶಸ್ತಿಗಾಗಿ ಎದುರು ನೋಡುತ್ತಿರುವ ಆರ್‌ಸಿಬಿ, ತಂಡದ ಹಿತದೃಷ್ಟಿಯಿಂದ ಕೆಲವೊಂದು ಬದಲಾವಣೆಗಳನ್ನು ಮಾಡುತ್ತಿದೆ.
ಇದನ್ನೂ ಓದಿ: ಮುಂದಿನ 15 ದಿನ ರಾಜ್ಯದ ಎಲ್ಲಾ ಶಾಲೆಗಳು ಬಂದ್: ಸೋಮವಾರವೂ ಇರಲ್ಲ ಕ್ಲಾಸ್... ದಿಢೀರ್ ಆದೇಶ ಹೊರಡಿಸಿದ ರಾಜ್ಯ ಸರ್ಕಾರ!
ಮುಂಬೈ ತಂಡವನ್ನು ರಣಜಿ ಚಾಂಪಿಯನ್ ಮಾಡಿದ್ದ ಓಂಕಾರ್ ಸಾಲ್ವಿ ಅವರನ್ನು ಬೌಲಿಂಗ್ ಕೋಚ್ ಆಗಿ ಆರ್‌ಸಿಬಿ ನೇಮಕ ಮಾಡಿದೆ. ಓಂಕಾರ್ ದೇಶೀಯ ಮಟ್ಟದಲ್ಲಿ ಬಹಳ ಖ್ಯಾತಿ ಪಡೆದಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್‌ನ ಸಹಾಯಕ ಕೋಚ್ ಆಗಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಓಂಕಾರ್ ಅವರನ್ನು RCB ತನ್ನ ತಂಡದಲ್ಲಿ ಮುಂದಿನ ಸೀಸನ್‌ನಿಂದ ಬೌಲಿಂಗ್ ಕೋಚ್ ಆಗಿ ಸೇರ್ಪಡೆಗೊಳಿಸಲಿದೆ. ಈ ಬಗ್ಗೆ RCB ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಿದೆ.
ಸಾಲ್ವಿ ಭಾರತದ ಮಾಜಿ ವೇಗದ ಬೌಲರ್ ಅವಿಷ್ಕರ್ ಸಾಲ್ವಿ ಅವರ ಸಹೋದರ. ಅವರ ಅಧಿಕಾರಾವಧಿಯಲ್ಲಿ, ಮುಂಬೈ ತಂಡವು ಕಳೆದ ಋತುವಿನಲ್ಲಿ ರಣಜಿ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಸಾಲ್ವಿ 2005 ರಲ್ಲಿ ಮಧ್ಯಪ್ರದೇಶ ವಿರುದ್ಧ ರೈಲ್ವೇಸ್‌ಗಾಗಿ ಒಂದೇ ಒಂದು ಲಿಸ್ಟ್ ಎ ಆಟವನ್ನು ಆಡಿದ್ದರು.
RCB ತನ್ನ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಅವರನ್ನು ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ತಂಡಕ್ಕೆ ಸೇರ್ಪಡೆಗೊಳಿಸಿದೆ. ಕಾರ್ತಿಕ್ ಮತ್ತು ಸಾಲ್ವಿ ಈ ಹಿಂದೆ ಕೋಲ್ಕತ್ತಾ ನೈಟ್ ರೈಡರ್ಸ್‌ನಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ: ಈ ಹಣ್ಣನ್ನು ಊಟಕ್ಕೂ 10 ನಿಮಿಷ ಮುಂಚೆ ತಿಂದರೆ ಬ್ಲಡ್ ಶುಗರ್ ತಿಂಗಳಾನುಗಟ್ಟಲೇ ಹೆಚ್ಚಾಗೋದೇ ಇಲ್ಲ!
ಹೊಸ ನಾಯಕನ ಹುಡುಕಾಟದಲ್ಲಿ RCB:
ಸದ್ಯ ಆರ್‌ಸಿಬಿ ತಂಡದಲ್ಲಿ ನಾಯಕ ಇಲ್ಲ. ಕಳೆದ ಋತುವಿನಲ್ಲಿ ನಾಯಕ ಫಾಫ್ ಡುಪ್ಲೆಸಿಸ್ ಅವರನ್ನು ರಿಲೀಸ್ ಮಾಡಲಾಗಿದೆ. ವಿರಾಟ್ ಕೊಹ್ಲಿ ಮತ್ತೊಮ್ಮೆ ತಂಡದ ನಾಯಕತ್ವ ವಹಿಸಿಕೊಳ್ಳಬಹುದು ಎಂಬ ವರದಿಗಳಿವೆ. ಇನ್ನೊಂದೆಡೆ ಆರ್‌ಸಿಬಿ ಫ್ರಾಂಚೈಸಿ, ಕೆಎಲ್ ರಾಹುಲ್, ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಅವರಂತಹ ಆಟಗಾರರನ್ನು ಹರಾಜಿನಲ್ಲಿ ಖರೀದಿಸಲು ಪ್ರಯತ್ನಿಸುತ್ತಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ