ಏಷ್ಯಾಕಪ್’ಗೂ ಮುನ್ನ ಟೀಂ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ! ಕಂಬ್ಯಾಕ್ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Jasprit Bumrah: ಜಸ್ಪ್ರೀತ್ ಬುಮ್ರಾ ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ತರಬೇತಿ ಪಡೆಯುತ್ತಿದ್ದಾರೆ. ನೆಟ್ ಅಭ್ಯಾಸದ ಸಮಯದಲ್ಲಿ ಅವರು ಪ್ರತಿದಿನ 7-8 ಓವರ್ ಗಳನ್ನು ಬೌಲಿಂಗ್ ಮಾಡುತ್ತಿದ್ದಾರೆ
Jasprit Bumrah Injury Update: ಟೀಮ್ ಇಂಡಿಯಾದ ಮಾರಕ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ 20 ಸರಣಿಯ ನಂತರ ಮೈದಾನದಿಂದ ಹೊರಗುಳಿದಿದ್ದಾರೆ. ಗಾಯದಿಂದ ಬಳಲುತ್ತಿದ್ದ ಅವರ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ. ಈ ವರ್ಷ ಏಷ್ಯಾ ಕಪ್ ಮತ್ತು ಏಕದಿನ ವಿಶ್ವಕಪ್‌ನಂತಹ ದೊಡ್ಡ ಟೂರ್ನಿಗಳನ್ನು ಭಾರತ ಆಡಲಿದೆ. ಇದೀಗ ಜಸ್ಪ್ರೀತ್ ಬುಮ್ರಾ ಮರಳುವಿಕೆ ಬಗ್ಗೆ ದೊಡ್ಡ ಅಪ್ಡೇಟ್ ಬಂದಿದೆ.
ಇದನ್ನೂ ಓದಿ: ಮೊದಲ ಟೆಸ್ಟ್’ನಲ್ಲಿ ಗೆದ್ದರೂ Team India ಪ್ಲೇಯಿಂಗ್ 11ನಲ್ಲಿ ಆಗಲಿದೆ ಬದಲಾವಣೆ: ಇವರು ಇನ್… ಅವರು ಔಟ್!
ಟೀಂ ಇಂಡಿಯಾಗೆ ಮರಳಿದ ಜಸ್ಪ್ರೀತ್ ಬುಮ್ರಾ!
ಜಸ್ಪ್ರೀತ್ ಬುಮ್ರಾ ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ತರಬೇತಿ ಪಡೆಯುತ್ತಿದ್ದಾರೆ. ನೆಟ್ ಅಭ್ಯಾಸದ ಸಮಯದಲ್ಲಿ ಅವರು ಪ್ರತಿದಿನ 7-8 ಓವರ್ ಗಳನ್ನು ಬೌಲಿಂಗ್ ಮಾಡುತ್ತಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಎಲ್ಲವೂ ಸರಿಯಾಗಿ ನಡೆದರೆ, ಮುಂದಿನ ತಿಂಗಳು ಐರ್ಲೆಂಡ್ ನಲ್ಲಿ ನಡೆಯಲಿರುವ ಟಿ20 ಸರಣಿಗೆ ಜಸ್ಪ್ರೀತ್ ಬುಮ್ರಾ ಅವರನ್ನು ಟೀಮ್ ಇಂಡಿಯಾದ ತಂಡದಲ್ಲಿ ಸೇರಿಸಿಕೊಳ್ಳಬಹುದು. ಸೆಪ್ಟೆಂಬರ್ ನಲ್ಲಿ ನಡೆಯಲಿರುವ ಏಷ್ಯಾಕಪ್‌ಗೆ ಬುಮ್ರಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಟೀಮ್ ಮ್ಯಾನೇಜ್‌ಮೆಂಟ್ ಇಚ್ಛಿಸುತ್ತಿದ್ದು, ಅದರ ನಂತರ ಏಕದಿನ ವಿಶ್ವಕಪ್ ಕೂಡ ಆಡಬಹುದು.
ನ್ಯೂಜಿಲೆಂಡ್‌ನ ಕ್ರೈಸ್ಟ್‌ಚರ್ಚ್ ನಲ್ಲಿ ಜಸ್ಪ್ರೀತ್ ಬುಮ್ರಾ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಜಸ್ಪ್ರೀತ್ ಬುಮ್ರಾ ಅವರ ಬೆನ್ನಿನ ಶಸ್ತ್ರಚಿಕಿತ್ಸೆಯನ್ನು ಕ್ರೈಸ್ಟ್‌ಚರ್ಚ್‌ನ ಫೋರ್ಟ್ ಆರ್ಥೋಪೆಡಿಕ್ಸ್ ಆಸ್ಪತ್ರೆಯಲ್ಲಿ ಹೆಸರಾಂತ ಮೂಳೆ ಶಸ್ತ್ರಚಿಕಿತ್ಸಕ ಡಾ. ರೋವನ್ ಸ್ಚೌಟನ್ ನಿರ್ವಹಿಸಿದರು. ಜಸ್ಪ್ರೀತ್ ಬುಮ್ರಾ ಪ್ರಸ್ತುತ ಬಿಸಿಸಿಐ ಕ್ರಿಕೆಟ್ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರ ಮೇಲ್ವಿಚಾರಣೆಯಲ್ಲಿ ಎನ್‌ಸಿಎಯಲ್ಲಿ ರಿಹ್ಯಾಬ್‌ಗೆ ಒಳಗಾಗಿದ್ದಾರೆ. ಐರ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಆಗಸ್ಟ್ 18 ಮತ್ತು 23 ರ ನಡುವೆ 3 T20 ಪಂದ್ಯಗಳನ್ನು ಆಡಬೇಕಾಗಿದೆ.
ಇದನ್ನೂ ಓದಿ: “ಒಂದು ವರ್ಷದಿಂದ ಭಾರತ ತಂಡ ಈ ಆಟಗಾರನನ್ನು ಮಿಸ್ ಮಾಡಿಕೊಳ್ಳುತ್ತಿದೆ”: Team India ಕೋಚ್ ಹೇಳಿಕೆ
ಜಸ್ಪ್ರೀತ್ ಬುಮ್ರಾ ಇದುವರೆಗೆ ಟೀಂ ಇಂಡಿಯಾ ಪರ 30 ಟೆಸ್ಟ್ ಪಂದ್ಯಗಳು, 72 ODIಗಳು ಮತ್ತು 60 T20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ 128, ಏಕದಿನದಲ್ಲಿ 121 ಮತ್ತು ಟಿ20ಯಲ್ಲಿ 70 ವಿಕೆಟ್‌ಗಳನ್ನು ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಪ್ರಸ್ತುತ ಭಾರತದ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಜುಲೈ 2022 ರಲ್ಲಿ ಇಂಗ್ಲೆಂಡ್ ಪ್ರವಾಸದ ನಂತರ ಬುಮ್ರಾ (ಜಸ್ಪ್ರೀತ್ ಬುಮ್ರಾ) ಮೂಳೆ ಮುರಿತಕ್ಕೆ ತುತ್ತಾಗಾಗಿದ್ದರು. ಈ ಗಾಯದಿಂದಾಗಿ ಅವರು ನಿರಂತರವಾಗಿ ತಂಡದಿಂದ ಹೊರಗುಳಿಯುತ್ತಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ