BCCI Update on Jasprit Bumrah: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಹಿತಿಯೊಂದನ್ನು ಹೊರಹಾಕಿದ್ದು, ಅದರ ಪ್ರಕಾರ, ಟೀಂ ಇಂಡಿಯಾದ ಅಪಾಯಕಾರಿ ಬೌಲರ್ ಒಬ್ಬರು ಟೀಂ ಇಂಡಿಯಾಗೆ ಮರಳಲಿದ್ದಾರೆ. ಈ ಆಟಗಾರನನ್ನು ಟೀಂ ಇಂಡಿಯಾದ ಮ್ಯಾಚ್ ವಿನ್ನರ್ ಎಂದೇ ಕರೆಯಲಾಗುತ್ತದೆ.


COMMERCIAL BREAK
SCROLL TO CONTINUE READING

ಮುಂಬರುವ ಪುರುಷರ ಏಕದಿನ ವಿಶ್ವಕಪ್‌ ನ ವೇಳಾಪಟ್ಟಿಯನ್ನು ಕೆಲವು ದಿನಗಳಲ್ಲಿ ಬದಲಾಯಿಸುವ ಸಾಧ್ಯತೆ ಇದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗುರುವಾರ ಹೇಳಿದ್ದಾರೆ. ಈ ಬದಲಾವಣೆಯಲ್ಲಿ ಅಹಮದಾಬಾದ್‌ ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯದ ಬಗ್ಗೆ ಉಲ್ಲೇಖಿಸಿಲ್ಲ. ಆದರೆ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮರು ಪ್ರವೇಶದ ಬಗ್ಗೆ ಸೂಚಿಸಿದ್ದಾರೆ.


ಇದನ್ನೂ ಓದಿ: ಸಚಿನ್ ದಾಖಲೆ ಮೇಲೆ ರೋಹಿತ್ ಕಣ್ಣು! ODIನಲ್ಲಿ ‘ಮಾಸ್ಟರ್ ಬ್ಲಾಸ್ಟರ್’ ರೆಕಾರ್ಡ್ ಬ್ರೇಕ್ ಮಾಡ್ತಾರಾ ಹಿಟ್’ಮ್ಯಾನ್?


ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ವೇಳಾಪಟ್ಟಿಯನ್ನು ಬದಲಾಯಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದಾರೆ. ಘೋಷಣೆಯ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಏಕದಿನ ವಿಶ್ವಕಪ್ ಆತಿಥ್ಯ ವಹಿಸುವ ರಾಜ್ಯಗಳ ಪ್ರತಿನಿಧಿಗಳೊಂದಿಗೆ ಬಿಸಿಸಿಐ ಅಧಿಕಾರಿಗಳು ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಇದರೊಂದಿಗೆ ಅಕ್ಟೋಬರ್ 15 ರಂದು ಭಾರತ-ಪಾಕಿಸ್ತಾನ ಪಂದ್ಯದ ದಿನಾಂಕ ಬದಲಾವಣೆಯ ಬಗ್ಗೆಯೂ ಚರ್ಚಿಸುತ್ತೇವೆ. ವಿಶ್ವಕಪ್‌ನ ಈ ಮಹತ್ವದ ಪಂದ್ಯ ನವರಾತ್ರಿಯ ಮೊದಲ ದಿನ ಅಹಮದಾಬಾದ್‌ನಲ್ಲಿ ನಡೆಯಲಿದ್ದು, ಆ ದಿನ ಭದ್ರತೆಯನ್ನು ನೋಡಿಕೊಳ್ಳುವುದು ತುಂಬಾ ಕಷ್ಟ ಎಂದು ಸ್ಥಳೀಯ ಪೊಲೀಸರು ಬಿಸಿಸಿಐಗೆ ತಿಳಿಸಿದ್ದಾರೆ. ಅದಕ್ಕಾಗಿಯೇ ಈ ಪಂದ್ಯದ ದಿನಾಂಕವನ್ನು ಬದಲಾಯಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.


ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಯ್ ಶಾ, 'ವಿಶ್ವಕಪ್‌ ನ ಮೂಲ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ನೀವು ನಿರೀಕ್ಷಿಸಬಹುದು. ಇದನ್ನು ಮೂರು-ನಾಲ್ಕು ದಿನಗಳಲ್ಲಿ ಪ್ರಕಟಿಸಲಾಗುವುದು. ಬದಲಾವಣೆಗಳು ಆಟದಲ್ಲಿ ಇರುತ್ತವೆ. ಸ್ಥಳಗಳಲ್ಲಿ ಅಲ್ಲ. ಐಸಿಸಿ ಮತ್ತು ಬಿಸಿಸಿಐ ಅಧಿಕಾರಿಗಳು ಇದನ್ನು ಪರಿಗಣಿಸುತ್ತಿದ್ದಾರೆ. ಸಂಪೂರ್ಣ ಫಿಟ್ ಆದ ನಂತರ ಬುಮ್ರಾ ಆಗಸ್ಟ್‌ ನಲ್ಲಿ ಐರ್ಲೆಂಡ್ ವಿರುದ್ಧದ ಟಿ 20 ಸರಣಿಯಲ್ಲಿ ಆಡಬಹುದು” ಎಂದು ಹೇಳಿದರು.


ಬುಮ್ರಾ ಬಹಳ ದಿನಗಳಿಂದ ತಂಡದಿಂದ ಹೊರಗುಳಿದಿದ್ದರು. ಅವರು ಕೊನೆಯ ಬಾರಿಗೆ ಸೆಪ್ಟೆಂಬರ್ 2022 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೈದಾನಕ್ಕಿಳಿದರು. ಈ ವರ್ಷದ ಮಾರ್ಚ್‌ನಲ್ಲಿ ನ್ಯೂಜಿಲೆಂಡ್‌ ನಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಪುನರ್ವಸತಿಗೆ ಒಳಗಾಗಿದ್ದಾರೆ.


ಇದನ್ನೂ ಓದಿ: ವಿಂಡೀಸ್ ವಿರುದ್ಧ ಭಾರತಕ್ಕೆ ಮೊದಲ ಗೆಲುವು: ಭರ್ಜರಿ ಬೌಲಿಂಗ್’ನಲ್ಲಿ ಮಿಂಚಿದ ಟೀಂ ಇಂಡಿಯಾ! Highlights ಇಲ್ಲಿದೆ


ಬುಮ್ರಾ ಅವರು ನೆಟ್ಸ್‌ ನಲ್ಲಿ ಸಂಪೂರ್ಣ ಸಾಮರ್ಥ್ಯದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ ಎಂದು ಬಿಸಿಸಿಐ ಕಳೆದ ವಾರ ವೈದ್ಯಕೀಯ ಅಪ್‌ಡೇಟ್‌ನಲ್ಲಿ ಹೇಳಿತ್ತು. ಬುಮ್ರಾ ಸಂಪೂರ್ಣ ಫಿಟ್ ಆಗಿದ್ದು, ಅವರು ಐರ್ಲೆಂಡ್‌ಗೆ ಹೋಗಬಹುದು ಎಂದು ಶಾ ಹೇಳಿದ್ದಾರೆ. ಏಷ್ಯಾಕಪ್ ಮತ್ತು ವಿಶ್ವಕಪ್‌ಗೆ ಆಟಗಾರರ ಆಯ್ಕೆಯಲ್ಲಿ ನಿರಂತರತೆ ಇರುತ್ತದೆ. ಏಕದಿನ ವಿಶ್ವಕಪ್‌ನಲ್ಲಿ ಅಭಿಮಾನಿಗಳಿಗೆ ಸೌಲಭ್ಯಗಳ ಕುರಿತು ಮಾತನಾಡಿದ ಜಯ್ ಶಾ, ಪಂದ್ಯಗಳ ಸಮಯದಲ್ಲಿ ಪ್ರೇಕ್ಷಕರಿಗೆ ಉಚಿತ ಕುಡಿಯುವ ನೀರು ಒದಗಿಸಲು ನಾವು ಕೆಲಸ ಮಾಡುತ್ತಿದ್ದೇವೆ. ಏಜೆನ್ಸಿಯ ಮೂಲಕ ಹೌಸ್‌ ಕೀಪಿಂಗ್, ಕ್ರೀಡಾಂಗಣಗಳಲ್ಲಿ ಸ್ವಚ್ಛತೆ, ಶೌಚಾಲಯಗಳ ಸೌಲಭ್ಯಗಳನ್ನು ಉನ್ನತೀಕರಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಬಹಿರಂಗಪಡಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ