ಏಕದಿನ ಕ್ರಿಕೆಟ್ ನಲ್ಲಿ ಜಸ್ಪ್ರೀತ್ ಬುಮ್ರಾ ನೂತನ ದಾಖಲೆ..!

 ಶನಿವಾರದಂದು ಹೆಡ್ಲಿಂಗ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ 2019 ರ ಭಾರತದ ಕೊನೆಯ ಲೀಗ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಶ್ರೀಲಂಕಾದ ದಿಮುತ್ ಕರುಣರತ್ನೆ ಅವರನ್ನು ಔಟ್ ಮಾಡುವ ಮೂಲಕ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 100 ವಿಕೆಟ್ ಪಡೆದ ಎರಡನೇ ಅತಿ ವೇಗದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

Last Updated : Jul 6, 2019, 07:54 PM IST
ಏಕದಿನ ಕ್ರಿಕೆಟ್ ನಲ್ಲಿ ಜಸ್ಪ್ರೀತ್ ಬುಮ್ರಾ ನೂತನ ದಾಖಲೆ..! title=
Photo courtesy: Twitter

ನವದೆಹಲಿ: ಶನಿವಾರದಂದು ಹೆಡ್ಲಿಂಗ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ 2019 ರ ಭಾರತದ ಕೊನೆಯ ಲೀಗ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಶ್ರೀಲಂಕಾದ ದಿಮುತ್ ಕರುಣರತ್ನೆ ಅವರನ್ನು ಔಟ್ ಮಾಡುವ ಮೂಲಕ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 100 ವಿಕೆಟ್ ಪಡೆದ ಎರಡನೇ ಅತಿ ವೇಗದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

ಸದ್ಯ ವಿಶ್ವದ ನಂಬರ್ 1 ಬೌಲರ್ ಆಗಿರುವ ಜಸ್ಪ್ರೀತ್ ಬುಮ್ರಾ ಈಗ  ತಮ್ಮ 57 ನೇ ಏಕದಿನ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು ಮೊಹಮ್ಮದ್ ಶಮಿ ಈ ಸಾಧನೆ ಮಾಡಿದ್ದರು ಆದರೆ ಅವರು ಬುಮ್ರಾಗಿಂತ ಒಂದು ಪಂದ್ಯ ಕಡಿಮೆ ತೆಗೆದುಕೊಂಡಿದ್ದರು. ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ವೇಗವಾಗಿ ಈ ಮೈಲುಗಲ್ಲು ತಲುಪಿದ ದಾಖಲೆ ಅಫ್ಘಾನಿಸ್ತಾನದ ರಶೀದ್ ಖಾನ್ ಅವರ ಹೆಸರಿನಲ್ಲಿದೆ .ಅವರು ಕೇವಲ 44 ಏಕದಿನ ಪಂದ್ಯಗಳಲ್ಲಿ  ಈ ಸಾಧನೆ ಮಾಡಿದ್ದರು.

ಜಸ್ಪ್ರೀತ್ ಬುಮ್ರಾ ಸದ್ಯ ಇಂಗ್ಲೆಂಡ್ ಮತ್ತು ವೇಲ್ಸ್ ನಲ್ಲಿ ನಡೆಯುತ್ತಿರುವ 2019 ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಎಂಟು ಪಂದ್ಯಗಳಲ್ಲಿ 16 ವಿಕೆಟ್ ಪಡೆದಿದ್ದಾರೆ. ಈ ಟೂರ್ನಿಯಲ್ಲಿ ಅವರ ಅತ್ಯುತ್ತಮ ಬೌಲಿಂಗ್ ಬಾಂಗ್ಲಾದೇಶದ ವಿರುದ್ಧ ಬಂದಿತ್ತು. 55ಕ್ಕೆ ನಾಲ್ಕು ವಿಕೆಟ್ ಗಳನ್ನು ಪಡೆದು ಗಮನ ಸೆಳೆದಿದ್ದರು.

Trending News