ನವದೆಹಲಿ: ಶನಿವಾರದಂದು ಹೆಡ್ಲಿಂಗ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ 2019 ರ ಭಾರತದ ಕೊನೆಯ ಲೀಗ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಶ್ರೀಲಂಕಾದ ದಿಮುತ್ ಕರುಣರತ್ನೆ ಅವರನ್ನು ಔಟ್ ಮಾಡುವ ಮೂಲಕ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 100 ವಿಕೆಟ್ ಪಡೆದ ಎರಡನೇ ಅತಿ ವೇಗದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 



COMMERCIAL BREAK
SCROLL TO CONTINUE READING

ಸದ್ಯ ವಿಶ್ವದ ನಂಬರ್ 1 ಬೌಲರ್ ಆಗಿರುವ ಜಸ್ಪ್ರೀತ್ ಬುಮ್ರಾ ಈಗ  ತಮ್ಮ 57 ನೇ ಏಕದಿನ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು ಮೊಹಮ್ಮದ್ ಶಮಿ ಈ ಸಾಧನೆ ಮಾಡಿದ್ದರು ಆದರೆ ಅವರು ಬುಮ್ರಾಗಿಂತ ಒಂದು ಪಂದ್ಯ ಕಡಿಮೆ ತೆಗೆದುಕೊಂಡಿದ್ದರು. ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ವೇಗವಾಗಿ ಈ ಮೈಲುಗಲ್ಲು ತಲುಪಿದ ದಾಖಲೆ ಅಫ್ಘಾನಿಸ್ತಾನದ ರಶೀದ್ ಖಾನ್ ಅವರ ಹೆಸರಿನಲ್ಲಿದೆ .ಅವರು ಕೇವಲ 44 ಏಕದಿನ ಪಂದ್ಯಗಳಲ್ಲಿ  ಈ ಸಾಧನೆ ಮಾಡಿದ್ದರು.



ಜಸ್ಪ್ರೀತ್ ಬುಮ್ರಾ ಸದ್ಯ ಇಂಗ್ಲೆಂಡ್ ಮತ್ತು ವೇಲ್ಸ್ ನಲ್ಲಿ ನಡೆಯುತ್ತಿರುವ 2019 ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಎಂಟು ಪಂದ್ಯಗಳಲ್ಲಿ 16 ವಿಕೆಟ್ ಪಡೆದಿದ್ದಾರೆ. ಈ ಟೂರ್ನಿಯಲ್ಲಿ ಅವರ ಅತ್ಯುತ್ತಮ ಬೌಲಿಂಗ್ ಬಾಂಗ್ಲಾದೇಶದ ವಿರುದ್ಧ ಬಂದಿತ್ತು. 55ಕ್ಕೆ ನಾಲ್ಕು ವಿಕೆಟ್ ಗಳನ್ನು ಪಡೆದು ಗಮನ ಸೆಳೆದಿದ್ದರು.