IND vs AUS : ಆಸ್ಟ್ರೇಲಿಯಾ ಸರಣಿಗೆ ಎಂಟ್ರಿ ನೀಡಲಿದ್ದಾರೆ ಜಸ್ಪ್ರೀತ್ ಬುಮ್ರಾ!
Border Gavaskar Trophy 2023 : ಆಸ್ಟ್ರೇಲಿಯಾ ತಂಡ ಮುಂದಿನ ತಿಂಗಳು ಭಾರತ ಪ್ರವಾಸಕ್ಕೆ ಬರಲಿದೆ. ಈ ಪ್ರವಾಸದಲ್ಲಿ ಎರಡು ತಂಡಗಳ ನಡುವೆ 4 ಟೆಸ್ಟ್ ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಮತ್ತು ನಂತರ ಮೂರು ODI ಪಂದ್ಯಗಳು ನಡೆಯಲಿವೆ. ಈ ಮಹತ್ವದ ಪ್ರವಾಸಕ್ಕೂ ಮುನ್ನ, ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಫಿಟ್ನೆಸ್ ಕುರಿತು ದೊಡ್ಡ ಅಪ್ಡೇಟ್ ಹೊರಬಿದ್ದಿದೆ.
Border Gavaskar Trophy 2023 : ಆಸ್ಟ್ರೇಲಿಯಾ ತಂಡ ಮುಂದಿನ ತಿಂಗಳು ಭಾರತ ಪ್ರವಾಸಕ್ಕೆ ಬರಲಿದೆ. ಈ ಪ್ರವಾಸದಲ್ಲಿ ಎರಡು ತಂಡಗಳ ನಡುವೆ 4 ಟೆಸ್ಟ್ ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಮತ್ತು ನಂತರ ಮೂರು ODI ಪಂದ್ಯಗಳು ನಡೆಯಲಿವೆ. ಈ ಮಹತ್ವದ ಪ್ರವಾಸಕ್ಕೂ ಮುನ್ನ, ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಫಿಟ್ನೆಸ್ ಕುರಿತು ದೊಡ್ಡ ಅಪ್ಡೇಟ್ ಹೊರಬಿದ್ದಿದೆ. ಅವರು ಆಸ್ಟ್ರೇಲಿಯಾ ವಿರುದ್ಧದ ಭಾರತ ತಂಡದಲ್ಲಿ ಎಂಟ್ರಿ ನೀಡಲಿದ್ದಾರೆ.
ಬುಮ್ರಾ ಗಾಯದ ಬಗ್ಗೆ ಬಿಗ್ ಅಪ್ ಡೇಟ್
ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬಹಳ ದಿನಗಳಿಂದ ಗಾಯದಿಂದ ಬಳಲುತ್ತಿದ್ದಾರೆ. ಜಸ್ಪ್ರೀತ್ ಬುಮ್ರಾ ಗಾಯದ ಸಮಸ್ಯೆಯಿಂದ ನ್ಯೂಜಿಲೆಂಡ್ ಸರಣಿಯಲ್ಲೂ ತಂಡದ ಭಾಗವಾಗಿಲ್ಲ. ಹಾಗೆ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಅವರನ್ನು ಸೇರಿಸಿಕೊಳ್ಳಲಾಗಿಲ್ಲ. ಆದರೆ ಇದೀಗ ಮತ್ತೊಮ್ಮೆ ತಂಡಕ್ಕೆ ಮರಳಲು ಸಿದ್ಧರಾಗಿದ್ದಾರೆ. ಇನ್ಸೈಡ್ ಸ್ಪೋರ್ಟ್ ನ ಸುದ್ದಿಯ ಪ್ರಕಾರ, ಅವರು ಆಸ್ಟ್ರೇಲಿಯಾ ವಿರುದ್ಧ ಆಡಲಿದ್ದಾರೆ ಎಂದು ಬರೆದುಕೊಂಡಿದೆ.
ಇದನ್ನೂ ಓದಿ : Dinesh Karthik : ಟೀಂ ಇಂಡಿಯಾ ಮುಂದೆ ಇದ್ದಕ್ಕಿದ್ದಂತೆ ಈ ಬೇಡಿಕೆ ಇಟ್ಟ ದಿನೇಶ್ ಕಾರ್ತಿಕ್!
ಈ ಕುರಿತು ಬಿಸಿಸಿಐ ಅಧಿಕಾರಿ ಹೇಳಿದ್ದು ಹೀಗೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 17 ರಿಂದ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಯಿಂದ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಬಹುದು. ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಶನಿವಾರ ಇನ್‌ಸೈಡ್‌ಸ್ಪೋರ್ಟ್‌ಗೆ, 'ಬುಮ್ರಾಗೆ ಸಂಬಂಧಿಸಿದಂತೆ, ಇದು ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೂ ಮುನ್ನ ಅವರು ಫಿಟ್ ಆಗುತ್ತಾರೆ. ಆದರೆ ಅದು ಅವರ ಪ್ರಗತಿಯನ್ನು ಅವಲಂಬಿಸಿರುತ್ತದೆ. ಸದ್ಯ ಅವರು ಫಿಟ್ ಆಗಿಲ್ಲ ಎಂದು ಹೇಳಿದ್ದಾರೆ.
ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದ ಬುಮ್ರಾ
ಜುಲೈ 2022 ರಲ್ಲಿ ಇಂಗ್ಲೆಂಡ್ ಪ್ರವಾಸದ ನಂತರ ಜಸ್ಪ್ರೀತ್ ಬುಮ್ರಾ ಸೊಂಟದ 'ಒತ್ತಡ ಮುರಿತ'ಕ್ಕೆ ಒಳಗಾಗಿದ್ದರು. ಈ ಗಾಯದಿಂದಾಗಿ ಅವರು ಕಳೆದ ವರ್ಷ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್‌ನಂತಹ ದೊಡ್ಡ ಟೂರ್ನಿಗಳಲ್ಲೂ ತಂಡದ ಭಾಗವಾಗಿರಲಿಲ್ಲ. ಜಸ್ಪ್ರೀತ್ ಬುಮ್ರಾ ಇದುವರೆಗೆ ಟೀಂ ಇಂಡಿಯಾ ಪರ 30 ಟೆಸ್ಟ್ ಪಂದ್ಯಗಳು, 72 ODIಗಳು ಮತ್ತು 60 ಟಿ20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ 128, ಏಕದಿನದಲ್ಲಿ 121 ಮತ್ತು ಟಿ20ಯಲ್ಲಿ 70 ವಿಕೆಟ್‌ಗಳನ್ನು ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಪ್ರಸ್ತುತ ಭಾರತದ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.
ಇದನ್ನೂ ಓದಿ : Sourav Ganguly : ಏಕದಿನ ವಿಶ್ವಕಪ್ ಗೆಲ್ಲಬೇಕಾದರೆ ಈ ಕೆಲಸ ಮಾಡಬೇಕು : ರೋಹಿತ್‌ಗೆ ಗಂಗೂಲಿ ಸಲಹೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.