ಟೆಸ್ಟ್ ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಸಾಧನೆಗೈದ ಜಸ್ಪ್ರಿತ್ ಬುಮ್ರಾ
ಟೆಸ್ಟ್ ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ಪಡೆದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಜಸ್ಪ್ರಿತ್ ಬುಮ್ರಾ ಪಾತ್ರರಾದರು.
ನವದೆಹಲಿ: ಟೆಸ್ಟ್ ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ಪಡೆದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಜಸ್ಪ್ರಿತ್ ಬುಮ್ರಾ ಪಾತ್ರರಾದರು.
ಜಮೈಕಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಅಸಾಧಾರಣ ಬೌಲಿಂಗ್ ಕೌಶಲ್ಯ ಪ್ರದರ್ಶಿಸಿ ಟೆಸ್ಟ್ ಕ್ರಿಕೆಟ್ನಲ್ಲಿ ಐದನೇ ಐದು ವಿಕೆಟ್ಗಳನ್ನು ಪಡೆದರು. ಇನ್ನು ಹ್ಯಾಟ್ರಿಕ್ ಸಾಧನೆ ಮಾಡುವ ಮೂಲಕ ಅವರು ಈ ಸಾಧನೆ ಮಾಡಿದ ಮೂರನೇ ಭಾರತೀಯ ಆಟಗಾರ ಎನ್ನುವ ಖ್ಯಾತಿಗೆ ಪಾತ್ರರಾದರು. ಇದಕ್ಕೂ ಮೊದಲು ಭಾರತದ ಪರವಾಗಿ ಹರ್ಭಜನ್ ಸಿಂಗ್ ಮತ್ತು ಇರ್ಫಾನ್ ಪಠಾಣ್ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದರು.
ಹನುಮ ವಿಹಾರಿ ಅವರ ಶತಕದೊಂದಿಗೆ ಹಾಗೂ ಭಾರತ 416 ರನ್ ಗಳಿಗೆ ಸರ್ವ ಪತನ ಕಂಡಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ವೆಸ್ಟ್ ತಂಡಕ್ಕೆ ಆರಂಭದಲ್ಲಿ ಶಾಕ್ ಆಘಾತ ಎದುರಾಯಿತು. ತಂಡದ ಮೊತ್ತ 9 ಆದಾಗ ಕ್ರೈಗ್ ಬ್ರಾತ್ವೆಟ್ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ತದನಂತರ ಬುಮ್ರಾ ಅವರು ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್ ಮತ್ತು ರೋಸ್ಟನ್ ಚೇಸ್ ಅವರನ್ನು ನಾಲ್ಕನೇ ಓವರ್‌ನಲ್ಲಿ ಸತತ ಎಸೆತಗಳಲ್ಲಿ ಔಟ್ ಮಾಡುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದರು.
ಸದ್ಯ ವೆಸ್ಟ್ ಇಂಡೀಸ್ ತಂಡವು 7 ವಿಕೆಟ್ ನಷ್ಟಕ್ಕೆ 87 ರನ್ ಗಳಿಸಿದೆ.