India vs Ireland 1st T20, Jasprit Bumrah: ಶುಕ್ರವಾರ ಡಬ್ಲಿನ್‌’ನಲ್ಲಿ ನಡೆದ ಮೂರು ಪಂದ್ಯಗಳ ಟಿ 20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 2 ರನ್‌’ಗಳಿಂದ ಐರ್ಲೆಂಡ್ ವಿರುದ್ಧ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾಗೆ ಐರ್ಲೆಂಡ್ 140 ರನ್’ಗಳ ಟಾರ್ಗೆಟ್ ನೀಡಿತ್ತು. ಗುರಿ ಬೆನ್ನತ್ತಿದ ಭಾರತ ತಂಡ 6.5 ಓವರ್’ಗಳಲ್ಲಿ 2 ವಿಕೆಟ್ ಕಳೆದುಕೊಂಡು 47 ರನ್ ಗಳಿಸುತ್ತಿದ್ದಂತೆ ಮಳೆ ಸುರಿಯಲಾರಂಭಿಸಿತು. ಬಳಿಕ ಡಕ್‌’ವರ್ತ್‌ ಲೂಯಿಸ್‌ ನಿಯಮದಡಿ ಟೀಂ ಇಂಡಿಯಾ 2 ರನ್‌’ಗಳ ಜಯ ಸಾಧಿಸಿತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ವಿಶ್ವಕಪ್’ನಲ್ಲಿ ಭಾರತ ಗೆಲ್ಲಬೇಕೆಂದರೆ ಈ ಇಬ್ಬರು ಆಟಗಾರರು ಇರಲೇಬೇಕು!: ರವಿಶಾಸ್ತ್ರಿ


ಇನ್ನು ಈ ಪಂದ್ಯ ನಾಯಕ ಜಸ್ಪ್ರೀತ್ ಬುಮ್ರಾ ಅವರಿಗೆ ತುಂಬಾ ವಿಶೇಷವಾಗಿದ್ದಲ್ಲದೆ, ಅವರು ತಮ್ಮ ಹೆಸರಿನಲ್ಲಿ ದಾಖಲೆ ಬರೆದಿದ್ದಾರೆ.  


ಜಸ್ಪ್ರೀತ್ ಬುಮ್ರಾ ಮಾರಕ ಬೌಲಿಂಗ್:


ಸುದೀರ್ಘ ಅವಧಿಯ ನಂತರ ಮರಳಿದ ವೇಗಿ ಜಸ್ಪ್ರೀತ್ ಬುಮ್ರಾ ಅವರ ಅದ್ಭುತ ಪ್ರದರ್ಶನದ ಆಧಾರದ ಮೇಲೆ ಭಾರತ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸುಮಾರು ಒಂದು ವರ್ಷದ ನಂತರ ತಂಡಕ್ಕೆ ಮರಳಿದ ಜಸ್ಪ್ರೀತ್ ಬುಮ್ರಾ 24 ರನ್‌ಗಳಿಗೆ ಎರಡು ವಿಕೆಟ್ ಕಬಳಿಸಿದ್ದಾರೆ. ಪಂದ್ಯದ ಮೊದಲ ಓವರ್‌’ನಲ್ಲಿ ಬುಮ್ರಾ ಆರಂಭಿಕ ಆಂಡ್ರ್ಯೂ ಬಲ್ಬಿರ್ನಿ (4 ರನ್) ಅವರನ್ನು ಬೌಲ್ಡ್ ಮಾಡಿದರೆ, ಅದೇ ಓವರ್‌’ನಲ್ಲಿ ಲೊರ್ಕನ್ ಟಕರ್ (0) ಸಂಜು ಸ್ಯಾಮ್ಸನ್‌’ಗೆ ಕ್ಯಾಚ್ ನೀಡುವಂತೆ ಮಾಡಿದ್ದಾರೆ. ಈ ಅದ್ಭುತ ಆಟಕ್ಕಾಗಿ ಅವರು ‘ಮ್ಯಾನ್ ಆಫ್ ದಿ ಮ್ಯಾಚ್’ ಪ್ರಶಸ್ತಿಯನ್ನೂ ಪಡೆದರು.


ಈ ಸಾಧನೆ ಮಾಡಿದ ಮೊದಲ ಭಾರತೀಯ ನಾಯಕ:


ಭಾರತ ತಂಡ 17 ವರ್ಷಗಳ ಹಿಂದೆ 2006ರಲ್ಲಿ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿತ್ತು. ಅಲ್ಲಿಂದ ಇಲ್ಲಿಯವರೆಗೆ ಯಾವುದೇ ಸ್ಪೆಷಲಿಸ್ಟ್ ಬೌಲರ್ ಅನ್ನು ಭಾರತ ಟಿ20 ತಂಡದ ನಾಯಕನನ್ನಾಗಿ ಮಾಡಿರಲಿಲ್ಲ. ಇದೀಗ ಜಸ್ಪ್ರೀತ್ ಬುಮ್ರಾ ಅವರು ಟಿ20ಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ಮೊದಲ ಸ್ಪೆಷಲಿಸ್ಟ್ ಬೌಲರ್ ಆಗಿದ್ದಾರೆ. ಟಿ20ಯಲ್ಲಿ ನಾಯಕನಾಗಿ ಪದಾರ್ಪಣೆ ಮಾಡಿದ್ದು, ಅದೇ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ನೊಂದೆಡೆ T20 ನಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದ ನಾಲ್ಕನೇ ಭಾರತೀಯ ನಾಯಕ ಎಂಬ ಕೀರ್ತಿ ಇವರ ಮುಡಿಯೇರಿದೆ.


ಇದನ್ನೂ ಓದಿ:ಸಚಿನ್ ಕೊಟ್ಟ ಬ್ಯಾಟ್’ನಿಂದಲೇ ಶತಕ ಸಿಡಿಸಿ ವಿಶ್ವದಾಖಲೆ ಬರೆದ ಪಾಕಿಸ್ತಾನದ ಸ್ಟಾರ್ ಬ್ಯಾಟ್ಸ್’ಮನ್


ಟಿ20ಯಲ್ಲಿ ಟೀಮ್ ಇಂಡಿಯಾದ ಅತ್ಯಂತ ಯಶಸ್ವಿ ನಾಯಕ


ಎಂಎಸ್ ಧೋನಿ ಟಿ20ಯಲ್ಲಿ ಟೀಮ್ ಇಂಡಿಯಾದ ಅತ್ಯಂತ ಯಶಸ್ವಿ ನಾಯಕ. ಎಂಎಸ್ ಧೋನಿ ತಮ್ಮ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ 41 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿದ್ದಾರೆ. ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ 39 ಗೆಲುವುಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ನಾಯಕನಾಗಿ ವಿರಾಟ್ ಕೊಹ್ಲಿ 30 ಮತ್ತು ಹಾರ್ದಿಕ್ ಪಾಂಡ್ಯ 10 ಟಿ20 ಪಂದ್ಯಗಳನ್ನು ಗೆದ್ದಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರು ಟಿ20ಯಲ್ಲಿ ಭಾರತದ 11 ನೇ ನಾಯಕರಾಗಿದ್ದಾರೆ. ರುತುರಾಜ್ ಗಾಯಕ್ವಾಡ್ ಅವರು ಸೆಪ್ಟೆಂಬರ್-ಅಕ್ಟೋಬರ್’ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್’ನಲ್ಲಿ ತಂಡದ ನಾಯಕತ್ವವನ್ನು ವಹಿಸಲಿದ್ದಾರೆ. ಅವರು ಭಾರತದ 12ನೇ ನಾಯಕರಾಗಲಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ