Team India: ಟೀಂ ಇಂಡಿಯಾದ ಈ ಆಟಗಾರನಿಗೆ ಗಂಭೀರ ಗಾಯ, ನ್ಯೂಜಿಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆ

Jasprit Bumrah Injury : ಕಳೆದ 1 ವರ್ಷದಿಂದ ಭಾರತೀಯ ಕ್ರಿಕೆಟ್ ತಂಡವು ಆಟಗಾರರ ಗಾಯದಿಂದ ಹೋರಾಡುತ್ತಿದೆ. ಈ ವೇಳೆಯೂ ತಂಡದ ಪ್ರಮುಖ ಆಟಗಾರ ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾದಿಂದ ಹೊರಗುಳಿಯುತ್ತಿದ್ದಾರೆ. ಈ ಆಟಗಾರ ಟೀಂ ಇಂಡಿಯಾಗೆ ಶೀಘ್ರವೇ ವಾಪಸಾಗುವುದಿಲ್ಲ ಎನ್ನಲಾಗುತ್ತಿದೆ. 

Written by - Chetana Devarmani | Last Updated : Mar 5, 2023, 01:10 PM IST
  • ಟೀಂ ಇಂಡಿಯಾದ ಈ ಆಟಗಾರನಿಗೆ ಗಂಭೀರ ಗಾಯ
  • ನ್ಯೂಜಿಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಕ್ರಿಕೆಟರ್‌
  • ಬೆನ್ನು ಶಸ್ತ್ರಚಿಕಿತ್ಸೆಗಾಗಿ ನ್ಯೂಜಿಲೆಂಡ್ ತಲುಪಿದ ಆಟಗಾರ
Team India: ಟೀಂ ಇಂಡಿಯಾದ ಈ ಆಟಗಾರನಿಗೆ ಗಂಭೀರ ಗಾಯ, ನ್ಯೂಜಿಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆ  title=
Jasprit Bumrah

Indian Cricket Team: ಕಳೆದ 1 ವರ್ಷದಿಂದ ಭಾರತೀಯ ಕ್ರಿಕೆಟ್ ತಂಡವು ಆಟಗಾರರ ಗಾಯದಿಂದ ಹೋರಾಡುತ್ತಿದೆ. ಈ ವೇಳೆಯೂ ತಂಡದ ಪ್ರಮುಖ ಆಟಗಾರ ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾದಿಂದ ಹೊರಗುಳಿಯುತ್ತಿದ್ದಾರೆ. ಇದೀಗ ಈ ಆಟಗಾರನ ಗಾಯದ ಬಗ್ಗೆ ದೊಡ್ಡ ಅಪ್ಡೇಟ್ ಹೊರಬಿದ್ದಿದೆ. ಈ ಆಟಗಾರ ಬೆನ್ನು ಶಸ್ತ್ರಚಿಕಿತ್ಸೆಗೆ ಒಳಗಾಗಲು ನ್ಯೂಜಿಲೆಂಡ್ ತಲುಪಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಈ ಆಟಗಾರ ಟೀಂ ಇಂಡಿಯಾಗೆ ಶೀಘ್ರವೇ ವಾಪಸಾಗುವುದಿಲ್ಲ ಎನ್ನಲಾಗುತ್ತಿದೆ.

ನ್ಯೂಜಿಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಈ ಆಟಗಾರ : 

ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಫಿಟ್ನೆಸ್ ಕುರಿತು ದೊಡ್ಡ ಅಪ್ಡೇಟ್ ಹೊರಬಿದ್ದಿದೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬಹಳ ಸಮಯದಿಂದ ಗಾಯದಿಂದ ಬಳಲುತ್ತಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರು ಟೀಮ್ ಇಂಡಿಯಾದ ಭಾಗವಾಗಿಲ್ಲ. ಅವರು ಈಗ ಬೆನ್ನು ಶಸ್ತ್ರಚಿಕಿತ್ಸೆಗೆ ಒಳಗಾಗಲು ನ್ಯೂಜಿಲೆಂಡ್‌ಗೆ ಹೋಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬುಮ್ರಾ ಚೇತರಿಸಿಕೊಳ್ಳಲು ಮೂರ್ನಾಲ್ಕು ತಿಂಗಳು ಬೇಕಾಗಬಹುದು.

ಇದನ್ನೂ ಓದಿ : Ind vs Aus: WTC ಫೈನಲ್ಗೆ ಹೋಗಲು ಟೀಂ ಇಂಡಿಯಾಗೆ ಇದೇ ಕೊನೆಯ ಅವಕಾಶ !

ಬಿಸಿಸಿಐ ಮೂಲವೊಂದು ದೊಡ್ಡ ಅಪ್ಡೇಟ್‌ ನೀಡಿದೆ : 

ಮಾಧ್ಯಮ ವರದಿಗಳ ಪ್ರಕಾರ, ಬಿಸಿಸಿಐ ಮೂಲಗಳು, "ಜಸ್ಪ್ರೀತ್ ಬುಮ್ರಾ ಅವರು ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಲು ಐದು ದಿನಗಳ ಹಿಂದೆ ನ್ಯೂಜಿಲೆಂಡ್‌ಗೆ ತೆರಳಿದ್ದರು. ವೈದ್ಯರು ಜಸ್ಪ್ರೀತ್ ಬುಮ್ರಾಗೆ ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ ನಂತರ, ಬಿಸಿಸಿಐ ತಕ್ಷಣವೇ ಎಲ್ಲಾ ವ್ಯವಸ್ಥೆಗಳನ್ನು ಮಾಡಿ ಅವರನ್ನು ಕಳುಹಿಸಿತು. ಒಂದು ಅಥವಾ ಎರಡು ದಿನಗಳಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ. ಅದೇ ಸಮಯದಲ್ಲಿ, ಇಂಗ್ಲೆಂಡ್ ಮಾಧ್ಯಮ ವರದಿಗಳ ಪ್ರಕಾರ, ಶಸ್ತ್ರಚಿಕಿತ್ಸೆಯ ನಂತರ, ಬುಮ್ರಾ ಕನಿಷ್ಠ ಸೆಪ್ಟೆಂಬರ್ ವರೆಗೆ ಸಕ್ರಿಯ ಕ್ರಿಕೆಟ್‌ನಿಂದ ದೂರ ಉಳಿಯಬಹುದು. ಶೇನ್ ಬಾಂಡ್ ಮತ್ತು ಜೋಫ್ರಾ ಆರ್ಚರ್ ಅವರಂತಹ ಆಟಗಾರರಿಗೆ ಶಸ್ತ್ರಚಿಕಿತ್ಸೆ ಮಾಡಿರುವ ಡಾ. ರೋವನ್ ಸ್ಚೌಟೆನ್ ಅವರ ಮೇಲ್ವಿಚಾರಣೆಯಲ್ಲಿ ಬುಮ್ರಾ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

ಇದನ್ನೂ ಓದಿ : Ind vs Aus : ಭಾರತ - ಆಸ್ಟ್ರೇಲಿಯಾ 4 ನೇ ಟೆಸ್ಟ್‌ನಿಂದ ಹೊರಗುಳಿಯಲಿದ್ದಾರೆ ಈ ಬಲಿಷ್ಠ ಆಟಗಾರ!

ಗಾಯದ ಸಮಸ್ಯೆಯಿಂದ ನಿರಂತರವಾಗಿ ತಂಡದಿಂದ ಹೊರಗೆ : 

ಜುಲೈ 2022 ರಲ್ಲಿ ಇಂಗ್ಲೆಂಡ್ ಪ್ರವಾಸದ ನಂತರ ಜಸ್ಪ್ರೀತ್ ಬುಮ್ರಾ ಸೊಂಟದ ಗಾಯಕ್ಕೆ ಒಳಗಾದರು. ಈ ಗಾಯದಿಂದಾಗಿ ಅವರು ಕಳೆದ ವರ್ಷ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್‌ನಂತಹ ದೊಡ್ಡ ಟೂರ್ನಿಗಳಲ್ಲೂ ತಂಡದ ಭಾಗವಾಗಿರಲಿಲ್ಲ. ಜಸ್ಪ್ರೀತ್ ಬುಮ್ರಾ ಇದುವರೆಗೆ ಟೀಂ ಇಂಡಿಯಾ ಪರ 30 ಟೆಸ್ಟ್ ಪಂದ್ಯಗಳು, 72 ODIಗಳು ಮತ್ತು 60 T20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ 128, ಏಕದಿನದಲ್ಲಿ 121 ಮತ್ತು ಟಿ20ಯಲ್ಲಿ 70 ವಿಕೆಟ್‌ಗಳನ್ನು ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಪ್ರಸ್ತುತ ಭಾರತದ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News