ಮದುವೆ ಕಾರಣಕ್ಕೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರ ಬಂದ್ರಾ ಬುಮ್ರಾ...!
ಇಂಗ್ಲೆಂಡ್ ವಿರುದ್ಧ ಮುಂಬರುವ ನಾಲ್ಕನೇ ಟೆಸ್ಟ್ ಪಂದ್ಯದಕ್ಕೂ ಮುಂಚಿತವಾಗಿ ವೇಗಿ ಜಸ್ಪ್ರೀತ್ ಬುಮ್ರಾ ವೈಯಕ್ತಿಕ ಕಾರಣಗಳಿಂದಾಗಿ ಭಾರತ ತಂಡದಿಂದ ಹೊರಬಂದರು.ಈಗ ಅವರದ್ದು ಮದುವೆ ಇರುವುದರಿಂದಾಗಿ ಕೆಲವು ದಿನಗಳ ರಜೆ ಕೇಳಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ನವದೆಹಲಿ: ಇಂಗ್ಲೆಂಡ್ ವಿರುದ್ಧ ಮುಂಬರುವ ನಾಲ್ಕನೇ ಟೆಸ್ಟ್ ಪಂದ್ಯದಕ್ಕೂ ಮುಂಚಿತವಾಗಿ ವೇಗಿ ಜಸ್ಪ್ರೀತ್ ಬುಮ್ರಾ ವೈಯಕ್ತಿಕ ಕಾರಣಗಳಿಂದಾಗಿ ಭಾರತ ತಂಡದಿಂದ ಹೊರಬಂದರು.ಈಗ ಅವರದ್ದು ಮದುವೆ ಇರುವುದರಿಂದಾಗಿ ಕೆಲವು ದಿನಗಳ ರಜೆ ಕೇಳಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ಎಎನ್‌ಐಯೊಂದಿಗೆ ಮಾತನಾಡಿದ ಬಿಸಿಸಿಐ ಮೂಲಗಳು, ಬುಮ್ರಾ (Jasprit Bumrah) ವಿವಾಹವಾಗಲಿದ್ದಾರೆ ಎಂದು ದೃಢಪಡಿಸಿದ್ದಾರೆ ಮತ್ತು ಅದಕ್ಕಾಗಿ ತಯಾರಿ ನಡೆಸಲು ರಜೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: IND vs ENG: ಭಾರತದ ಟೆಸ್ಟ್ ಕ್ರಿಕೆಟ್ ತಂಡದಿಂದ ಬುಮ್ರಾ ಹೊರಕ್ಕೆ
27 ವರ್ಷದ ಬುಮ್ರಾ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕು ಪಂದ್ಯಗಳ ಸರಣಿಯಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅವರು ನಾಲ್ಕು ವಿಕೆಟ್ ಗಳನ್ನು ಪಡೆದಿದ್ದಾರೆ.ಚೆನ್ನೈನಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಯಿತು ಮತ್ತು ಮೂರನೇ ಟೆಸ್ಟ್ನಲ್ಲಿ ಅವರು ವಿಕೆಟ್ ರಹಿತವಾಗಿ ಮರಳಿದರು, ಈ ಪಂದ್ಯಗಳಲ್ಲಿ ಸ್ಪಿನರ್ ಗಳು ಮಹತ್ವದ ಪಾತ್ರವನ್ನು ವಹಿಸಿದರು.
ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1 ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.ಆತಿಥೇಯರು ಕೊನೆಯ ಪಂದ್ಯವನ್ನು ಗೆದ್ದರೆ ಅಥವಾ ಡ್ರಾ ಮಾಡಿದರೆ, ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಅರ್ಹತೆ ಪಡೆಯುತ್ತಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.