Champions Trophy 2025: ಆಸ್ಟ್ರೇಲಿಯಾ ಪ್ರವಾಸದಲ್ಲಿ ಎದುರಾದ ಹೀನಾಯ ಸೋಲಿನಿಂದ ತೀವ್ರ ನಿರಾಸೆಗೊಂಡಿರುವ ಟೀಂ ಇಂಡಿಯಾ ಅಭಿಮಾನಿಗಳಿಗೆ ಮತ್ತೊಂದು ವಿಷಯ ಇದೀಗ ಚಿಂತೆಗೀಡು ಮಾಡಿದೆ. ಆಸೀಸ್ ಪ್ರವಾಸದ ವೇಳೆ ಬೆನ್ನುನೋವಿಗೆ ಒಳಗಾದ ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಮುಂಬರುವ ICC ಟೂರ್ನಮೆಂಟ್ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಆಡುತ್ತಾರೆಯೇ? ಅಥವಾ ಇಲ್ಲವೇ? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿನ ಆತಂಕ ಹೆಚ್ಚಿಸಿದೆ.
ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿಗೆ ತುತ್ತಾಗಿದ್ದರು. ಈ ಸರಣಿಯಲ್ಲಿ ಅತಿ ಹೆಚ್ಚು ಓವರ್ಗಳನ್ನು ಬೌಲಿಂಗ್ ಮಾಡಿದ್ದರಿಂದ ಅವರ ಬೆನ್ನಿನ ಮೇಲೆ ಹೆಚ್ಚಿನ ಹೊರೆ ಬಿತ್ತು. ಅಂತಿಮ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಬುಮ್ರಾ ಅವರಿಗರ ಅಸ್ವಸ್ಥತೆ ಉಂಟಾಯಿತು, ತಕ್ಷಣವೇ ಫಿಸಿಯೋಗಳಿಗೆ ಮಾಹಿತಿ ಕೂಡ ನೀಡಲಾಯಿತು.
ಇದರಿಂದ ಎಚ್ಚೆತ್ತ ಬಿಸಿಸಿಐ ವೈದ್ಯಕೀಯ ತಂಡ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನ್ ಮಾಡಿತ್ತು. ಬುಮ್ರಾ ಬ್ಯಾಟಿಂಗ್ಗೆ ಮರಳಿದರು ಆದರೆ ಎರಡನೇ ಇನ್ನಿಂಗ್ಸ್ನಲ್ಲಿ ಬೌಲಿಂಗ್ ಮಾಡಲಿಲ್ಲ. ಬುಮ್ರಾ ಅನುಪಸ್ಥಿತಿಯಲ್ಲಿ ಮುಕ್ತವಾಗಿ ಆಡಿದ ಆಸೀಸ್ ಅಂತಿಮ ಟೆಸ್ಟ್ ಪಂದ್ಯವನ್ನು 6 ವಿಕೆಟ್ ಗಳಿಂದ ಗೆದ್ದು 3-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿತು. ಈ ಗೆಲುವು WTC 2025 ಫೈನಲ್ನಲ್ಲಿ ಸ್ಥಾನವನ್ನು ಪಡೆದುಕೊಂಡಿತು.
ಈ ಸರಣಿಯಲ್ಲಿ ಬುಮ್ರಾ 9 ಇನ್ನಿಂಗ್ಸ್ಗಳಲ್ಲಿ ಒಟ್ಟು 32 ವಿಕೆಟ್ಗಳನ್ನು ಕಬಳಿಸಿ ಸರಣಿಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರೂ. ಆದರೆ, ಬುಮ್ರಾ ಬೆನ್ನುನೋವಿನಿಂದ ಬಳಲುತ್ತಿದ್ದು, ಬಿಸಿಸಿಐ ವೈದ್ಯಕೀಯ ತಂಡದಿಂದ ನಿಗಾ ವಹಿಸಲಾಗುವುದು ಎಂದು ಮುಖ್ಯ ಕೋಚ್ ಗೌತಮ್ ಗಂಭೀರ್ ಹೇಳಿದ್ದಾರೆ. ಆ ಬಳಿಕ ಅವರ ಗಾಯದ ಬಗ್ಗೆ ಯಾರೂ ಮಾಹಿತಿ ನೀಡಿಲ್ಲ. ಬುಮ್ರಾ ಅವರ ಫಿಟ್ನೆಸ್ ಬಗ್ಗೆ ಬಿಸಿಸಿಐ ಕೂಡ ಅಧಿಕೃತ ಹೇಳಿಕೆ ನೀಡಿಲ್ಲ.
ಸ್ಕ್ಯಾನಿಂಗ್ ವರದಿಗಳಲ್ಲಿ ಬಂದಿದ್ದೇನು? ಬುಮ್ರಾ ಗಾಯ ಗಂಭೀರವೇ? ಇದು ಸಾಮಾನ್ಯ ಗಾಯವೇ? ಎಂಬ ಅನುಮಾನ ಅಭಿಮಾನಿಗಳನ್ನು ಕಾಡುತ್ತಿದೆ. ಬುಮ್ರಾ ಗ್ರೇಡ್ 1 ಗಾಯಗೊಂಡರೆ, ಅವರು 3 ವಾರಗಳ ಕಾಲ ವಿಶ್ರಾಂತಿ ಪಡೆಯಬೇಕಾಗುತ್ತದೆ. ಇದೇ ವೇಳೆ ಬುಮ್ರಾ ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್ಗಳ ಸರಣಿಯಿಂದ ಹೊರಗುಳಿದು, ನೇರವಾಗಿ ಚಾಂಪಿಯನ್ಸ್ ಟ್ರೋಫಿ ಆಡಲಿದ್ದಾರೆ.
ಆದರೆ ಬೂಮ್ರಾ ಅವರಿಗೆ ಆಗಿರುವುದು ಗ್ರೇಡ್ 2 ಗಾಯವಾಗಿದ್ದರೆ, ಬುಮ್ರಾ ಚೇತರಿಸಿಕೊಳ್ಳಲು 6 ವಾರಗಳಿಂದ 3 ತಿಂಗಳವರೆಗೆ ಬೇಕಾಗುತ್ತದೆ. ಒಂದು ವೇಳೆ ಈಗಾದರೆ ಬುಮ್ರಾ ಇಡೀ ಚಾಂಪಿಯನ್ಸ್ ಟ್ರೋಫಿಯಿಂದ ಹೊರನಡೆಯಬೇಕಾಗುತ್ತದೆ. ಬುಮ್ರಾ ಇಲ್ಲದಿದ್ದರೆ ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡುವುದು ಕಷ್ಟ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.