IND vs IRE, 1st T20: ಭಾರತ ಮತ್ತು ಐರ್ಲೆಂಡ್ ನಡುವಿನ 3 ಪಂದ್ಯಗಳ T20 ಅಂತಾರಾಷ್ಟ್ರೀಯ ಸರಣಿಯ ಮೊದಲ ಪಂದ್ಯವು ಡಬ್ಲಿನ್’ನಲ್ಲಿ ಆಗಸ್ಟ್ 18 ರಂದು ಭಾರತೀಯ ಕಾಲಮಾನ ರಾತ್ರಿ 7.30 ರಿಂದ ನಡೆಯಲಿದೆ. ಐರ್ಲೆಂಡ್ ವಿರುದ್ಧದ ಈ ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯಲ್ಲಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾ ನಾಯಕತ್ವ ವಹಿಸಲಿದ್ದಾರೆ. ಐರ್ಲೆಂಡ್ ವಿರುದ್ಧದ ಈ ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯಲ್ಲಿ ಬಹುತೇಕ ಇಡೀ ಟೀಂ ಇಂಡಿಯಾ ಬದಲಾಗಲಿದೆ. ಜೊತೆಗೆ ಪ್ಲೇಯಿಂಗ್ XI ಕೂಡ ನೂತನವಾಗಿದ್ದು ಈ ತಂಡವನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.
ಇದನ್ನೂ ಓದಿ: ಕೊಹ್ಲಿ, ರೋಹಿತ್ ಅಲ್ಲ… ಐಸಿಸಿ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಈ ಭಾರತೀಯನೇ ಅಗ್ರಸ್ಥಾನಿ
ಆರಂಭಿಕ ಬ್ಯಾಟ್ಸ್’ಮನ್:
ಐರ್ಲೆಂಡ್ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಉಪನಾಯಕ ರಿತುರಾಜ್ ಗಾಯಕ್ವಾಡ್ ಮತ್ತು ಯಶಸ್ವಿ ಜೈಸ್ವಾಲ್ ಅವರು ಆರಂಭಿಕರಾಗಿ ಕಣಕ್ಕಿಳಿಯಬಹುದು. ರಿತುರಾಜ್ ಗಾಯಕ್ವಾಡ್ ಮತ್ತು ಯಶಸ್ವಿ ಜೈಸ್ವಾಲ್ ಜೋಡಿ ಅದ್ಭುತ ರನ್ ಕಲೆ ಹಾಕುವ ನೈಪುಣ್ಯತೆಯನ್ನು ಹೊಂದಿದ್ದಾರೆ.
ಮಧ್ಯಮ ಕ್ರಮಾಂಕ:
ಐರ್ಲೆಂಡ್ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ತಿಲಕ್ ವರ್ಮಾ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್’ಗೆ ಬರಲಿದ್ದಾರೆ. 4ನೇ ಸ್ಥಾನದಲ್ಲಿ ಸಂಜು ಸ್ಯಾಮ್ಸನ್’ಗೆ ಬ್ಯಾಟ್ಸ್’ಮನ್ ಆಗಿ ಮತ್ತು ವಿಕೆಟ್ ಕೀಪರ್ ಆಗಿ ಅವಕಾಶ ನೀಡುವ ಎಲ್ಲಾ ಸಾಧ್ಯತೆ ಇದೆ. ಐರ್ಲೆಂಡ್ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ, ನಾಯಕ ಜಸ್ಪ್ರೀತ್ ಬುಮ್ರಾ ಸ್ಫೋಟಕ ಬ್ಯಾಟ್ಸ್ಮನ್ ರಿಂಕು ಸಿಂಗ್’ಗೆ 5 ನೇ ಸ್ಥಾನದಲ್ಲಿ ಅವಕಾಶ ನೀಡಬಹುದು.
ಆಲ್’ರೌಂಡರ್:
ಐರ್ಲೆಂಡ್ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಾಯಕ ಜಸ್ಪ್ರೀತ್ ಬುಮ್ರಾ ಸ್ಫೋಟಕ ಆಲ್’ರೌಂಡರ್ ಶಿವಂ ದುಬೆಗೆ 6ನೇ ಸ್ಥಾನದಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ. ಶಿವಂ ದುಬೆ ಸುಮಾರು 3 ವರ್ಷಗಳ ಬಳಿಕ ಟೀಂ ಇಂಡಿಯಾಗೆ ಮರಳಿದ್ದು, ಧೋನಿಯಂತೆ ಫಿನಿಶರ್ ಪಾತ್ರವನ್ನು ನಿಭಾಯಿಸಬಲ್ಲರು. ಇನ್ನು 7ನೇ ಕ್ರಮಾಂಕದ ಬ್ಯಾಟಿಂಗ್ ಸ್ಥಾನದಲ್ಲಿ ಶಹಬಾಜ್ ಅಹ್ಮದ್’ಗೆ ಅವಕಾಶ ನೀಡುವ ಸಂಭವ ಇದೆ. ಶಹಬಾಜ್ ಅಹ್ಮದ್ ಸ್ಪಿನ್ ಬೌಲಿಂಗ್’ನಲ್ಲಿ ಪರಿಣಿತಿ ಹೊಂದಿರುವ ಆಟಗಾರ,
ಸ್ಪಿನ್ ಬೌಲಿಂಗ್ ವಿಭಾಗ:
ರವಿ ಬಿಷ್ಣೋಯ್ ಸ್ಪಿನ್ ಬೌಲಿಂಗ್ ವಿಭಾಗಕ್ಕೆ ಸೇರ್ಪಡೆಯಾಗಲಿದ್ದಾರೆ. ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಮೊದಲ ಟಿ20 ಪಂದ್ಯದಲ್ಲಿ ಐರ್ಲೆಂಡ್ ತಂಡಕ್ಕೆ ಅಪಾಯ ತಂದೊಡ್ಡಲಿದ್ದಾರೆ, ಇನ್ನು ಇವರು ಅಂಡರ್-19 ವಿಶ್ವಕಪ್ ರನ್ನರ್ಅಪ್ ಭಾರತ ತಂಡದ ಲೆಗ್ ಸ್ಪಿನ್ನರ್ ಆಗಿದ್ದರು. ಜೊತೆಗೆ, ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಎನಿಸಿಕೊಂಡಿದ್ದರು. ಆಡಿದ್ದ 6 ಪಂದ್ಯಗಳಲ್ಲಿ 17 ವಿಕೆಟ್ ಪಡೆದಿರುವುದು ಇವರ ಅದ್ಭುತ ಪ್ರದರ್ಶನ.
ವೇಗಿಗಳು:
ಐರ್ಲೆಂಡ್ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಾಯಕ ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್ ಅವರಿಗೆ ವೇಗದ ಬೌಲಿಂಗ್ ಮಾಡಲು ಅವಕಾಶ ನೀಡುವ ಸಾಧ್ಯತೆ ಇದೆ.
ಐರ್ಲೆಂಡ್ ವಿರುದ್ಧದ ಮೊದಲ ಟಿ20ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ:
ಜಸ್ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಿವಂ ದುಬೆ, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್,
ಈ ಆಟಗಾರರು ಔಟ್:
ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ ಕೃಷ್ಣ, ಅವೇಶ್ ಖಾನ್
ಇದನ್ನೂ ಓದಿ: Asia Cup ಆರಂಭಕ್ಕೂ ಮುನ್ನ ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ 32ರ ಹರೆಯದ ಡ್ಯಾಶಿಂಗ್ ಆಟಗಾರ!
ಭಾರತ vs ಐರ್ಲೆಂಡ್ T20 ಸರಣಿ ವೇಳಾಪಟ್ಟಿ (ಭಾರತೀಯ ಕಾಲಮಾನ):
- 1ನೇ ಟಿ20 ಪಂದ್ಯ, ಆಗಸ್ಟ್ 18, ರಾತ್ರಿ 7.30, ಡಬ್ಲಿನ್
- 2ನೇ ಟಿ20 ಪಂದ್ಯ, ಆಗಸ್ಟ್ 20, ರಾತ್ರಿ 7.30, ಡಬ್ಲಿನ್
- 3ನೇ ಟಿ20 ಪಂದ್ಯ, ಆಗಸ್ಟ್ 23, ರಾತ್ರಿ 7.30, ಡಬ್ಲಿನ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ