Jasprit Bumrah Update : ಟೀಂ ಇಂಡಿಯಾ ಮಾರ್ಚ್ 9 ರಿಂದ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರು ವಿದೇಶಕ್ಕೆ ಹಾರಿದ್ದಾರೆ. ಯಾಕೆ? ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ..


COMMERCIAL BREAK
SCROLL TO CONTINUE READING

ಚಿಕಿತ್ಸೆಗೆ ವಿದೇಶಕ್ಕೆ ಹಾರಿದ ಜಸ್ಪ್ರೀತ್ ಬುಮ್ರಾ


ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಬಹಳ ದಿನಗಳಿಂದ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದರೆ. ಚಿಕಿತ್ಸೆ ಪಡೆದರು ಅವರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಿಲ್ಲ. ಇದರಿಂದಾಗಿ ಅವರು ಮುಂಬರುವ ಐಪಿಎಲ್ (ಐಪಿಎಲ್-2023) ಋತುವಿನ ಭಾಗವಾಗಲು ಸಾಧ್ಯವಾಗುವುದಿಲ್ಲ. ಸದ್ಯ ಬೆನ್ನುನೋವಿನ ಶಸ್ತ್ರಚಿಕಿತ್ಸೆಗಾಗಿ ಬುಮ್ರಾ ನ್ಯೂಜಿಲೆಂಡ್‌ಗೆ ಹೋಗಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಆಡಳಿತ ಮಂಡಳಿಯ ವೈದ್ಯಕೀಯ ತಂಡವೂ ಈ ಬಗ್ಗೆ ಶಸ್ತ್ರಚಿಕಿತ್ಸಕರೊಂದಿಗೆ ಮಾತುಕತೆ ನಡೆಸಿದೆ.


ಇದನ್ನೂ ಓದಿ : WPL 2023 : ವಿಶ್ವ ಕ್ರಿಕೆಟ್‌ನಲ್ಲಿ ಇತಿಹಾಸ ಸೃಷ್ಟಿಸಿದ ಮುಂಬೈ ಇಂಡಿಯನ್ಸ್ ತಂಡ!


1-2 ದಿನಗಳಲ್ಲಿ ಶಸ್ತ್ರಚಿಕಿತ್ಸೆ 


ಬಿಸಿಸಿಐ ಮೂಲಗಳು ಸ್ಪೋರ್ಟ್ಸ್ ಟಾಕ್ ಜೊತೆಗಿನ ಸಂವಾದದಲ್ಲಿ, 'ಜಸ್ಪ್ರೀತ್ ಬುಮ್ರಾ ಅವರು ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಲು ಐದು ದಿನಗಳ ಹಿಂದೆ ನ್ಯೂಜಿಲೆಂಡ್‌ಗೆ ತೆರಳಿದ್ದಾರೆ. ವೈದ್ಯರು ಬುಮ್ರಾಗೆ ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದರು, ನಂತರ ಬಿಸಿಸಿಐ ತಕ್ಷಣವೇ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಅವರನ್ನು ವಿದೇಶಕ್ಕೆ ಕಳುಹಿಸಲಾಗಿದೆ. ಒಂದು ಅಥವಾ ಎರಡು ದಿನಗಳಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. 


ಬುಮ್ರಾ ಐದು ತಿಂಗಳ ಕಾಲ ಕ್ರಿಕೆಟ್'ನಿಂದ ದೂರ 


ವಿಶ್ವದ ದಿಗ್ಗಜ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಬುಮ್ರಾ ಸುಮಾರು 5 ತಿಂಗಳಿಂದ ಮೈದಾನದಿಂದ ದೂರ ಉಳಿದಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಿ20ಯಲ್ಲಿ ಕೊನೆಯ ಬಾರಿಗೆ ಭಾರತ ಪರ ಆಡಿದ್ದರು. ಇದಾದ ಬಳಿಕ ಬೆನ್ನುನೋವಿನಿಂದಾಗಿ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಮುಂಬರುವ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಮೊದಲು ಬುಮ್ರಾ ಅವರನ್ನು ಫಿಟ್‌ ಮಾಡಲು ಬಿಸಿಸಿಐ ಆಡಳಿತವು ಪ್ರಯತ್ನಿಸುತ್ತಿದೆ.


ಇದನ್ನೂ ಓದಿ : Team India: ಟೀಂ ಇಂಡಿಯಾದ ಈ ಆಟಗಾರನಿಗೆ ಗಂಭೀರ ಗಾಯ, ನ್ಯೂಜಿಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.