1 ವರ್ಷದ ಬಳಿಕ ತಂಡಕ್ಕೆ ಮರಳಿದ ಈ ಆಲ್’ರೌಂಡರ್ ಇನ್ಮುಂದೆ ಟೀಂ ಇಂಡಿಯಾ ಕ್ಯಾಪ್ಟನ್: ರೋಹಿತ್ ಶಕೆ ಅಂತ್ಯ..!
Jasprit Bumrah Come back: ಐಪಿಎಲ್ ನಲ್ಲಿ ಅಮೋಘ ಪ್ರದರ್ಶನ ನೀಡಿದ ರಿಂಕು ಸಿಂಗ್ ಗೆ ಕೊನೆಗೂ ಟೀಂ ಇಂಡಿಯಾದಲ್ಲಿ ಅವಕಾಶ ಸಿಕ್ಕಿದೆ. ಜಿತೇಶ್ ಶರ್ಮಾ ಕೂಡ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.
Jasprit Bumrah Captain for Ireland Series: ಮುಂದಿನ ತಿಂಗಳು ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ಪಂದ್ಯದ ಮೂಲಕ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾಗೆ ಮರಳಿದ್ದಾರೆ. ಅಷ್ಟೇ ಅಲ್ಲ, ಜಸ್ಪ್ರೀತ್ ಬುಮ್ರಾ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ಐರ್ಲೆಂಡ್ ಪ್ರವಾಸಕ್ಕೆ ಯುವ ಆಟಗಾರರನ್ನು ಮಾತ್ರ ಕಳುಹಿಸಲು ಬಿಸಿಸಿಐ ನಿರ್ಧರಿಸಿದ್ದು, ಐರ್ಲೆಂಡ್ ಪ್ರವಾಸಕ್ಕೆ ರಿತುರಾಜ್ ಗಾಯಕ್ವಾಡ್ ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ.
ಇದನ್ನೂ ಓದಿ: LIVE ಪಂದ್ಯದಲ್ಲೇ ಮೈದಾನಕ್ಕೆ ನುಗ್ಗಿದ 10 ಅಡಿ ಉದ್ದದ ಹಾವು! ದಿಕ್ಕಾಪಾಲಾಗಿ ಓಡಿದ ಆಟಗಾರರು
ಐಪಿಎಲ್ ನಲ್ಲಿ ಅಮೋಘ ಪ್ರದರ್ಶನ ನೀಡಿದ ರಿಂಕು ಸಿಂಗ್ ಗೆ ಕೊನೆಗೂ ಟೀಂ ಇಂಡಿಯಾದಲ್ಲಿ ಅವಕಾಶ ಸಿಕ್ಕಿದೆ. ಜಿತೇಶ್ ಶರ್ಮಾ ಕೂಡ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಬುಮ್ರಾ ಹೊರತುಪಡಿಸಿ, ಗಾಯದಿಂದ ಚೇತರಿಕೆ ಕಾಣುತ್ತಿರುವ ಖ್ಯಾತ ವೇಗದ ಬೌಲರ್ ಪ್ರಸಿಧ್ ಕೃಷ್ಣ ಕೂಡ ತಂಡಕ್ಕೆ ಮರಳಿದ್ದಾರೆ. ಬಹಳ ದಿನಗಳ ನಂತರ ಶಿವಂ ದುಬೆಗೂ ಟೀಂ ಇಂಡಿಯಾದಲ್ಲಿ ಸ್ಥಾನ ನೀಡಲಾಗಿದೆ.
ಐರ್ಲೆಂಡ್ ವಿರುದ್ಧದ ಮೂರು ಟಿ20 ಪಂದ್ಯಗಳ ಸರಣಿ ಆಗಸ್ಟ್ 18 ರಿಂದ ಆರಂಭವಾಗಲಿದೆ. ಎರಡನೇ ಟಿ20 ಆಗಸ್ಟ್ 20 ರಂದು ನಡೆಯಲಿದೆ. ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಆಗಸ್ಟ್ 23 ರಂದು ನಡೆಯಲಿದೆ. ಏಷ್ಯಾಕಪ್ ಅನ್ನು ಗಮನದಲ್ಲಿಟ್ಟುಕೊಂಡು ಐರ್ಲೆಂಡ್ ಪ್ರವಾಸದಿಂದ ಎಲ್ಲಾ ದೊಡ್ಡ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಜಡೇಜಾ, ಸೂರ್ಯಕುಮಾರ್ ಯಾದವ್, ಶುಭಮನ್ ಗಿಲ್, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಸಿರಾಜ್ ಈ ಸರಣಿಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇನ್ನು ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಟೀಂ ಇಂಡಿಯಾಗೆ ಮರಳುವ ಬಗ್ಗೆ ಯಾವುದೇ ಅಪ್ಡೇಟ್ ಹೊರಬಿದ್ದಿಲ್ಲ. .
ಇದನ್ನೂ ಓದಿ: Viral Video: ಮುಳುಗುತ್ತಿರುವ ಪ್ರೇಮಿಯ ಕೈ ಹಿಡಿದೆತ್ತಿದ ಪ್ರೇಯಸಿ ಮಾಡಿದ್ದೇನು ಗೊತ್ತಾ..?
ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ:
ಜಸ್ಪ್ರೀತ್ ಬುಮ್ರಾ (ನಾಯಕ), ರಿತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್, ಜಿತೇಶ್ ಶರ್ಮಾ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ ಕೃಷ್ಣ, ಅರ್ಷ್ದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ